25.1 C
Bangalore
Friday, December 6, 2019

ಬಾಲಾಕೋಟ್​ನಿಂದ ಕಾಲ್ಕಿತ್ತಿರುವ ಪಾಕ್​ ಉಗ್ರರಿಗೆ ಅಫ್ಘಾನಿಸ್ತಾನ ತಾಲಿಬಾನ್​ ಉಗ್ರರ ಆಶ್ರಯ, ಅಲ್ಲೇ ತರಬೇತಿ

Latest News

ಯೋಗ ತರಬೇತಿಗೆ ಆಸ್ಟ್ರೇಲಿಯಾದಿಂದ ಆಹ್ವಾನ, ಬಳ್ಳಾರಿ ಸಾಧನಾ ಯೋಗ ಕೇಂದ್ರದ ರೂಪಾ ಮುರಳೀಧರ್ ಹೇಳಿಕೆ

ಬಳ್ಳಾರಿ: ಆಸ್ಟ್ರೇಲಿಯಾದ ಜನರಿಗೆ ಯೋಗ ಪದ್ಧತಿ ಬಗ್ಗೆ ತುಂಬಾ ಆಸಕ್ತಿ ಇದೆ. ಸೇವಾ ಆಸ್ಟ್ರೇಲಿಯಾ ಸಂಸ್ಥೆ ಮೂಲಕ ಆಸ್ಟ್ರೇಲಿಯಾದಲ್ಲಿ ಯೋಗ ತರಬೇತಿ ನೀಡಲು...

ಸೆನ್ಸೆಕ್ಸ್​ 334 ಅಂಶಕ್ಕೂ ಹೆಚ್ಚು ಕುಸಿತ: ನಿಫ್ಟಿ 12,000ಕ್ಕೂ ಕೆಳಕ್ಕೆ…

ಮುಂಬೈ: ಷೇರುಪೇಟೆಯ ವಾರಾಂತ್ಯದ ದಿನದ ವಹಿವಾಟಿನ ಕೊನೆಗೆ ಬಾಂಬೆ ಸ್ಟಾಕ್​ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್​ 334 ಅಂಶ ಕುಸಿತ ಮತ್ತು ನ್ಯಾಷನಲ್...

ಬಳ್ಳಾರಿ ಜಿಲ್ಲೆಯಲ್ಲಿ ನರೇಗಾ ಕಾಮಗಾರಿ ಪರಿಶೀಲಿಸಿದ ಕೇಂದ್ರ ಅಧ್ಯಯನ ತಂಡ

ಬಳ್ಳಾರಿ: ನರೇಗಾ ರಾಷ್ಟ್ರೀಯ ಪ್ರಶಸ್ತಿ ಶಿಫಾರಸಿಗೆ ದೇಶದ ಒಂಬತ್ತು ಜಿಲ್ಲೆಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾಗಿರುವ ಬಳ್ಳಾರಿ ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಶುಕ್ರವಾರ...

ಹಂಪಿ ವಿವಿ ಕೇಂದ್ರ ಸ್ಥಳಾಂತರ ಕೈಬಿಡಿ

ಬಾದಾಮಿ: ಬನಶಂಕರಿಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕೇಂದ್ರವನ್ನು ಸ್ಥಳಾಂತರ ಮಾಡಬಾರದು ಎಂದು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ...

ಅವೈಜ್ಞಾನಿಕ ಉಳುಮೆಯಿಂದ ಮಣ್ಣಿನ ಸವಕಳಿ, ಹೊಸಪೇಟೆ ಕೃಷಿ ಇಲಾಖೆ ಡಿಡಿ ಸಹದೇವ ಯರಗುಪ್ಪ ಹೇಳಿಕೆ

ಕೂಡ್ಲಿಗಿ: ರೈತರ ಜೀವನಕ್ಕೆ ಆಧಾರವಾಗಿರುವ ಮಣ್ಣಿನ ಸಂರಕ್ಷಣೆ ಮಾಡಬೇಕಾದ ಅಗತ್ಯವಿದೆ ಎಂದು ಕೃಷಿ ಇಲಾಖೆ ಹೊಸಪೇಟೆ ವಿಭಾಗದ ಉಪನಿರ್ದೇಶಕ ಸಹದೇವ ಯರಗುಪ್ಪ ಹೇಳಿದರು. ಪಟ್ಟಣದ...

ನವದೆಹಲಿ: ಪಾಕಿಸ್ತಾನದ ಬಾಲಾಕೋಟ್​ನಲ್ಲಿನ ತಮ್ಮ ನೆಲೆಗಳ ಮೇಲೆ ಭಾರತ ವೈಮಾನಿಕ ದಾಳಿ ನಡೆಸಿದ್ದರಿಂದ ನಲುಗಿ ಹೋಗಿರುವ ಉಗ್ರರು ಅಲ್ಲಿಂದ ಕಾಲ್ಕಿತ್ತು ಅಫ್ಘಾನಿಸ್ತಾನದಲ್ಲಿ ನೆಲೆಕಂಡುಕೊಂಡಿದ್ದಾರೆ. ಇವರಿಗೆ ಆಶ್ರಯ ನೀಡಿರುವ ಅಫ್ಘಾನಿಸ್ತಾನ ತಾಲಿಬಾನ್​, ಹಕ್ಕಾನಿ ಗ್ರೂಪ್​ ಹಾಗೂ ಮತ್ತಿತರ ಉಗ್ರ ಸಂಘಟನೆಗಳು ಅಲ್ಲಿ ಇವರೆಲ್ಲರಿಗೂ ತರಬೇತಿ ನೀಡುವುದನ್ನು ಮುಂದುವರಿಸಿವೆ ಎಂದು ಹೇಳಲಾಗುತ್ತಿದೆ.

ಕಾಬೂಲ್​ ಮತ್ತು ಕಂದಹಾರ್​ನಲ್ಲಿ ಇರುವ ಭಾರತೀಯ ರಾಯಭಾರ ಕಚೇರಿ ಸಿಬ್ಬಂದಿ ಈ ಮಾಹಿತಿ ನೀಡಿದ್ದು, ಜೈಷ್​ ಎ ಮೊಹಮ್ಮದ್​ ಮತ್ತು ಲಷ್ಕರ್​ ಎ ತಯ್ಬಾ ಭಯೋತ್ಪಾದನಾ ಸಂಘಟನೆಗಳ ಉಗ್ರರು ಈಗ ಅಪ್ಘಾನಿಸ್ತಾನದ ಕುನಾರ್​, ನಾನಗಢಹಾರ್​, ನೂರಿಸ್ತಾನ್​ ಮತ್ತು ಕಂದಹಾರ್​ ಪ್ರಾಂತ್ಯದಲ್ಲಿ ನೆಲೆ ಕಂಡುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರು ಸಿಆರ್​ಪಿಎಫ್​ ಯೋಧರ ಮೇಲೆ ದಾಳಿ ಮಾಡಿದ್ದರು. ಇದರಲ್ಲಿ 40 ಯೋಧರು ಹುತಾತ್ಮರಾಗಿದ್ದರು. ಈ ಹಿನ್ನೆಲೆಯಲ್ಲಿ ಪಾಕಿಸ್ತಾನದ ಬಾಲಾಕೋಟ್​ನಲ್ಲಿದ್ದ ಲಷ್ಕರ್​ ಮತ್ತು ಜೈಷ್​ ಉಗ್ರರ ನೆಲೆಗಳ ಮೇಲೆ ಭಾರತ ವೈಮಾನಿಕ ದಾಳಿ ಮಾಡಿ 300ಕ್ಕೂ ಹೆಚ್ಚು ಉಗ್ರರನ್ನು ಹತ್ಯೆ ಮಾಡಿದ್ದಾಗಿ ಹೇಳಿತ್ತು. ಇದೀಗ ಇಲ್ಲಿಂದ ಕಾಲ್ಕಿತ್ತಿರುವ ಉಗ್ರರು ಅಫ್ಘಾನಿಸ್ತಾನದಲ್ಲಿ ನೆಲೆ ಕಂಡುಕೊಂಡಿರುವುದು ಪತ್ತೆಯಾಗಿದೆ.

ಈ ಹಿನ್ನೆಲೆಯಲ್ಲಿ ಜೈಷ್​ ಭಯೋತ್ಪಾದನೆ ಸಂಘಟನೆಯ ಪ್ರಮುಖ ಉಗ್ರ ಹಾಗೂ ಮುಂಬೈ ಮೇಲಿನ ಉಗ್ರರ ದಾಳಿಯ ಸಂಚುಕೋರ ಹಫೀಜ್​ ಸಯ್ಯೀದ್​ ಸೇರಿ ಇತರ 15 ಉಗ್ರ ಸಂಘಟನೆಗಳು ಮತ್ತದರ ನಾಯಕರ ವಿರುದ್ಧ ಕೈಗೊಂಡಿರುವುದಾಗಿ ಹೇಳುತ್ತಿರುವ ಇಮ್ರಾನ್​ ಖಾನ್​ ನೇತೃತ್ವದ ಸರ್ಕಾರದ ಕ್ರಮಗಳ ಬಗ್ಗೆ ಭಾರತ ಅನುಮಾನ ವ್ಯಕ್ತಪಡಿಸುತ್ತಿದೆ.

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...