

ಇಸ್ಲಮಾಬಾದ್: ಪಾಕಿಸ್ತಾನದ ಟಿಕ್ಟಾಕ್ ಸ್ಟಾರ್ ಸನಾ ಯೂಸಫ್ ಅವರನ್ನು ಇಸ್ಲಾಮಾಬಾದ್ನ ಅವರ ಮನೆಯಲ್ಲಿ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಪಾಕಿಸ್ತಾನಿ ಟಿಕ್ಟಾಕ್ ಪ್ರಭಾವಿ ನಟಿ ಸನಾ ಯೂಸುಫ್ ಅವರ ಹುಟ್ಟುಹಬ್ಬದ ವಿಡಿಯೋ ಹಂಚಿಕೊಂಡ ಕೆಲವೇ ಗಂಟೆಗಳಲ್ಲಿ ಈ ಹತ್ಯೆ ಮಾಡಲಾಗಿದೆ. ಸದ್ಯ ಈ ಪ್ರಕರಣದಲ್ಲಿ ಇನ್ನೂ ಯಾರನ್ನೂ ಬಂಧಿಸಲಾಗಿಲ್ಲ, ಇನ್ನೂ ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಚಿತ್ರಾಲ್ ಮೂಲದ ಸನಾ ಯೂಸುಫ್, ತನ್ನ ಟಿಕ್ಟಾಕ್ ವೀಡಿಯೊಗಳ ಮೂಲಕ ಜನಪ್ರಿಯತೆ ಗಳಿಸಿದ್ದರು. ಇನ್ಸ್ಟಾಗ್ರಾಮ್ ನಲ್ಲಿ ಅವರಿಗೆ ಐದು ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಇದ್ದರು. ಇದೀಗ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. 17 ವರ್ಷದ ಟಿಕ್ಟಾಕ್ ಪ್ರಭಾವಿ ಸನಾ ಯೂಸುಫ್ ತನ್ನ ಹುಟ್ಟುಹಬ್ಬದ ಆಚರಣೆಯ ವೀಡಿಯೊವನ್ನು ಆನ್ಲೈನ್ನಲ್ಲಿ ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಇಸ್ಲಾಮಾಬಾದ್ನಲ್ಲಿರುವ ತನ್ನ ನಿವಾಸದಲ್ಲಿ ಗುಂಡಿಕ್ಕಿ ಕೊಂದಿದ್ದಾರೆ.
ಇಸ್ಲಾಮಾಬಾದ್ನ ಸೆಕ್ಟರ್ ಜಿ-13ನಲ್ಲಿರುವ ಅವರ ನಿವಾಸದಲ್ಲಿ ಈ ಘಟನೆ ನಡೆದಿದೆ. ಮನೆಗೆ ಪ್ರವೇಶಿಸಿದ್ದ ಆರೋಪಿ ಸನಾ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾನೆ. ಆಕೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸನಾ ಅವರದ್ದು ಮರ್ಯಾದೆಗೇಡು ಹತ್ಯೆಯಾಗಿರಬಹುದು ಎಂದು ಅವರು ಶಂಕಿಸಿದ್ದಾರೆ.
(ಏಜೆನ್ಸೀಸ್)
ಕೊಲೆಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಹಾಗಾಗಿ ಪೊಲೀಸರು ವೈಯಕ್ತಿಕ, ಸಾಮಾಜಿಕ ಉದ್ವಿಗ್ನತೆ, ದ್ವೇಷ ಸೇರಿದಂತೆ ಎಲ್ಲಾ ಆಯಾಮಗಳಲ್ಲಿಯೂ ತನಿಖೆ ನಡೆಸುತ್ತಿದ್ದಾರೆ. ಕೊಲೆಗೆ ಕಾರಣವೇನು ಎಂಬುದರ ಕುರಿತು ಇನ್ನೂ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ.
ಮನೆಯೊಳಗೆ ನುಗ್ಗಿದ ಶಂಕಿತ ಹಲವು ಸುತ್ತು ಗುಂಡು ಹಾರಿಸಿದ ನಂತರ ಅಲ್ಲಿಂದ ಪರಾರಿಯಾಗಿದ್ದಾನೆ. ಸನಾ ಯುಸೂಫ್ಗೆ ಎರಡು ಗುಂಡುಗಳು ತಗುಲಿದ್ದು, ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ. ಸನಾ ಶವವನ್ನು ರಣೋತ್ತರ ಪರೀಕ್ಷೆಗಾಗಿ ಪಾಕಿಸ್ತಾನ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (PIMS) ರವಾನಿಸಲಾಗಿದೆ. ಈ ಸಂಬಂಧ ತನಿಖೆ ಆರಂಭವಾಗಿದೆ ಎಂದು ಪೊಲೀಸ್ ವಕ್ತಾರರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.