More

    7ನೇ ವೇತನ ಆಯೋಗ ವರದಿ ಜಾರಿಯಲ್ಲಿ ತಾರತಮ್ಯ; ಸರ್ಕಾರದ ನಡೆ ವಿರುದ್ಧ ಮಹಾನಗರ ಪಾಲಿಕೆ ನೌಕರರ ಆಕ್ರೋಶ

    ಬೆಂಗಳೂರು: 7ನೇ ವೇತನ ಆಯೋಗದ ವರದಿ ಜಾರಿ ವಿಚಾರದಲ್ಲಿ ರಾಜ್ಯ ಸರ್ಕಾರ, ‘ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ’ಎಂಬಂತೆ ನಡೆದುಕೊಂಡಿದ್ದು,ಸರ್ಕಾರ ನಡೆ ವಿರುದ್ಧ ರಾಜ್ಯದ 10 ಮಹಾನಗರ ಪಾಲಿಕೆ ನೌಕರರು ತೀವ್ರವಾಗಿ ಆಕ್ರೋಶ ಹೊರಹಾಕುತ್ತಿದ್ದಾರೆ.

    7ನೇ ವೇತನ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ಮಾ.1ರಂದು ಕರೆ ನೀಡಿದ್ದ ಮುಷ್ಕರದಲ್ಲಿ ಮಹಾನಗರ ಪಾಲಿಕೆ ನೌಕರರು ಭಾಗಿಯಾಗಿ ತೀವ್ರ ಪ್ರತಿಭಟನೆ ನಡೆಸಿದ್ದರು. ಅದರೆ, ಮಹಾನಗರ ಪಾಲಿಕೆ ನೌಕರರನ್ನು ಹೊರಗಿಟ್ಟ ಹಿಂದಿನ ಸರ್ಕಾರ, ಬರೀ ಸರ್ಕಾರಿ ನೌಕರರಿಗೆ ಮಾತ್ರ ಅನ್ವಯವಾಗುವಂತೆ ಮಾ.1ರಿಂದ ಜಾರಿಗೆ ಬರುವಂತೆ ಶೇ.17 ಮಧ್ಯಂತರ ಪರಿಹಾರ ಮಂಜೂರು ಮಾಡಿ ಆದೇಶ ಹೊರಡಿಸಿತ್ತು.

    ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ
    ಸಾಂದರ್ಭಿಕ ಚಿತ್ರ

    ಇದೇ ವೇಳೆ ಮಹಾನಗರ ಪಾಲಿಕೆ ನೌಕರರಿಗೆ ಹಾಗೂ ಪುರಸಭೆ/ನಗರಸಭೆ ನೌಕರರಿಗೆ ಪ್ರತ್ಯೇಕವಾಗಿ ಮಂಜೂರಾತಿಗೆ ನಗರಾಭಿವೃದ್ಧಿ ಹಾಗೂ ಪೌರಾಡಳಿತ ಇಲಾಖೆಯಿಂದ ಅನುಮತಿ ಪಡೆಯುವಂತೆ ಸರ್ಕಾರ ಆದೇಶಿಸಿತ್ತು. ಈ ಆದೇಶವನ್ನು ಅನುಷ್ಠಾನಕ್ಕೆ ತರುವಂತೆ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಹಾಗೂ ಪೌರಾಡಳಿತ ಇಲಾಖೆ ನಿರ್ದೇಶಕರಿಗೆ ಎರಡು ತಿಂಗಳಿಂದ ಸತತವಾಗಿ ಮನವಿ ಪತ್ರ ನೀಡಿದ್ದರೂ ಇದಕ್ಕೆ ಸ್ಪಂದಿಸುತ್ತಿಲ್ಲ.

    ಮಾ.1ರಂದು ಕರೆ ನೀಡಿದ್ದ ಮುಷ್ಕರದಲ್ಲಿ ಸರ್ಕಾರಿ ನೌಕರರು ಗೈರಾಗಿ ಮನೆಯಲ್ಲಿದ್ದರು. ಆದರೆ, ಮಹಾನಗರ ಪಾಲಿಕೆ ನೌಕರರು ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ಮಾಡಿದ್ದರಿಂದ ಸರ್ಕಾರಿ ನೌಕರರಿಗೆ ಮಾತ್ರ ಇದರ ಲ ಸಿಗುವಂತಾಗಿದೆ. ಆದರೆ, ನ್ಯಾಯಯುತವಾಗಿ ಸಿಗಬೇಕಿದ್ದ ಮಧ್ಯಂತರ ಪರಿಹಾರದಲ್ಲಿ ನಮ್ಮನ್ನು ಕಡೆಗಣಿಸಲಾಗಿದೆ. ಆದ್ದರಿಂದ, ಬರುವ ದಿನಗಳಲ್ಲಿ ರಾಜ್ಯಾದ್ಯಂತ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ ಹೇಳಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts