ಉಪಶಾಮಕ ಆರೈಕೆ ಮನುಷ್ಯನ ಪ್ರಮುಖ ಅವಶ್ಯಕತೆ

gan-2
Published on

ವಿಜಯವಾಣಿ ಸುದ್ದಿಜಾಲ ಕುಂದಾಪುರ

ಸಮಗ್ರ ಆರೋಗ್ಯ, ಉಪಶಾಮಕ ಆರೈಕೆ ವಿನೂತನವಾದ ಕಾರ್ಯಕ್ರಮವಾಗಿದ್ದು ಇಂದಿನ ಆಹಾರ ಪದ್ದತಿ, ಜೀವನ ಶೈಲಿಗೆ ಇಂತಹ ಕಾರ್ಯಕ್ರಮಗಳು ಅನಿವಾರ್ಯ. ಗ್ರಾಮದ ಒಂಟಿಯಾಗಿರುವ ವ್ಯಕ್ತಿಗಳ ದೈಹಿಕ, ಮಾನಸಿಕ ಆರೋಗ್ಯದ ಮೇಲೆ ಸದಾ ನಿಗಾ ಇಡುವ ಈ ಯೋಜನೆಗೆ ಆರೋಗ್ಯ ಮತು ಕುಟುಂಬ ಕಲ್ಯಾಣ ಇಲಾಖೆ ಸದಾ ನಿಮ್ಮ ಜೊತೆ ಇರಲಿದೆ ಎಂದು ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗಭೂಷಣ ಉಡುಪ ಹೇಳಿದರು.

ರಾಜ್ಯದಲ್ಲಿ ಪ್ರಥಮವಾಗಿ ವಂಡ್ಸೆ ಕ್ಲಸ್ಟರ್‌ನಲ್ಲಿ ಅನುಷ್ಠಾನಗೊಳ್ಳುತ್ತಿರುವ ಸಮಗ್ರ ಆರೋಗ್ಯ ಮತ್ತು ಉಪಶಾಮಕ ಆರೈಕೆ (ಪಾಲಿಯೇಟಿವ್ ಕೇರ್ ಯೂನಿಟ್) ಯೋಜನೆಗೆ ವಂಡ್ಸೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಚಾಲನೆ ನೀಡಿ ಮಾತನಾಡಿದರು.

ನಿರಾಮಯ ಸೊಸೈಟಿ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಮಾತನಾಡಿ, ರಾಜ್ಯದಲ್ಲಿ ಪ್ರಪ್ರಥಮವಾಗಿ ಪಾಲಿಯೇಟಿವ್ ಕೇರ್ ಯೂನಿಟ್ ಪೈಲೆಟ್ ಯೋಜನೆಯಾಗಿ ವಂಡ್ಸೆ ಕ್ಲಸ್ಟರ್ ಮಟ್ಟದಲ್ಲಿ ಅನುಷ್ಠಾನವಾಗಿದೆ ಎಂದರು.

ವಂಡ್ಸೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಅವಿನಾಶ್ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ಸುದರ್ಶನ ಶೆಟ್ಟಿ, ಆಶಾ ಆಚಾರ್ಯ, ರವಿರಾಜ ಶೆಟ್ಟಿ, ರಾಜೇಶ ದೇವಾಡಿಗ, ಸುಭಾಸ್ ಶೆಟ್ಟಿ, ಗೋವರ್ದನ್ ಜೋಗಿ, ಶಶಿಕಲಾ ಎಸ್ ವಂಡ್ಸೆ, ಸುಬ್ಬು, ಸುಶೀಲ, ಮಣಿಪಾಲ ಮಾಹೆ ವೈದ್ಯಕೀಯ ತಜ್ಞರ ತಂಡ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಪಿಡಿಒ ಪೂರ್ಣಿಮಾ ಶೇಟ್ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net