Palmistry : ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ ಏನಾಗುತ್ತದೆ? ಉದ್ಯೋಗ ಸಿಗುತ್ತದೆಯೇ ಅಥವಾ ಇಲ್ಲವೇ? ಮದುವೆ ಆಗುತ್ತಾ? ಜೀವನದಲ್ಲಿ ಸೆಟಲ್ ಆಗ್ತೀನಾ? ಎಂಬಿತ್ಯಾದಿ ವಿಚಾರಗಳನ್ನು ತಿಳಿದುಕೊಳ್ಳುವ ಆಸಕ್ತಿಯನ್ನು ಜನರು ತೋರಿಸುತ್ತಾರೆ. ಆದರೆ, ಕೆಲವರಿಗೆ ಈ ಜ್ಯೋತಿಷ್ಯದ ಮೇಲೆ ನಂಬಿಕೆ ಇರುವುದಿಲ್ಲ. ಆದರೂ ಬಹುತೇಕ ಮಂದಿ ಜಾತಕವನ್ನು ನಂಬುತ್ತಾರೆ. ಈ ಕಾರಣಕ್ಕೆ ಜ್ಯೋತಿಷಿಗಳಿಗೆ ತುಂಬಾ ಬೇಡಿಕೆ ಇದೆ.
ಅಂದಹಾಗೆ ನಮ್ಮ ಗ್ರಹಗತಿ ಆಧಾರದ ಮೇಲೆ ನಮ್ಮ ಜೀವನದ ಆಗು-ಹೋಗುಗಳನ್ನು ತಿಳಿದುಕೊಳ್ಳುವ ನಿಟ್ಟಿನಲ್ಲಿ ಜ್ಯೋತಿಷ್ಯ ಶಾಸ್ತ್ರ ಬಹಳ ಮುಖ್ಯವಾಗಿದೆ. ಜ್ಯೋತಿಷ್ಯದಲ್ಲಿ ಹಲವು ವಿಧಾನಗಳಿರುವುದು ನಿಮಗೆಲ್ಲರಿಗೂ ಗೊತ್ತೇ ಇದೆ. ಅದರಲ್ಲಿ ಹಸ್ತ ಸಾಮುದ್ರಿಕಾ ( Palmistry ) ಕೂಡ ಒಂದು. ಹಸ್ತ ಸಾಮುದ್ರಿಕ ಎಂದರೆ ಹಸ್ತದ ಮೇಲಿನ ರೇಖೆಗಳ ಆಧಾರದ ಮೇಲೆ ಭವಿಷ್ಯವನ್ನು ಊಹಿಸುವುದು. ಈ ಹಸ್ತಸಾಮುದ್ರಿಕ ಶಾಸ್ತ್ರವನ್ನು ನಂಬುವ ಅನೇಕ ಜನರಿದ್ದಾರೆ. ಅವರಲ್ಲಿ ಸಾಮಾನ್ಯ ನಾಗರಿಕರಷ್ಟೇ ಅಲ್ಲ ಸೆಲೆಬ್ರಿಟಿಗಳು ಕೂಡ ಇದ್ದಾರೆ.
ನಮ್ಮ ಅಂಗೈನಲ್ಲಿ ವಿವಿಧ ರೀತಿಯ ರೇಖೆಗಳು ಅಥವಾ ಗೀರುಗಳಿವೆ. ಈ ಗೆರೆಗಳಿಂದಾಗಿ ಕೆಲವೊಂದು ಚಿಹ್ನೆಗಳು ಕೂಡ ರಚನೆಯಾಗಿವೆ. ಒಬ್ಬೊಬ್ಬರಲ್ಲೂ ಒಂದೊಂದು ರೀತಿಯ ಚಿಹ್ನೆಗಳಿರುತ್ತವೆ. ಅಂಗೈನಲ್ಲಿರುವ ಗೆರೆಗಳನ್ನು ಲೈಫ್ ಲೈನ್, ಹೆಡ್ ಲೈನ್, ಹಾರ್ಟ್ ಲೈನ್ ಮತ್ತು ಫೇಟ್ ಲೈನ್ ಎಂದೂ ವಿಂಗಡಿಸಲಾಗಿದೆ. ಈ ಲೈನ್ ಅಥವಾ ಗೆರೆಗಳು ಒಬ್ಬೊಬ್ಬರಲ್ಲೂ ಒಂದೊಂದು ರೀತಿಯಲ್ಲಿ ಇರುತ್ತದೆ ಮತ್ತು ಒಂದೊಂದು ಅರ್ಥವನ್ನು ನೀಡುತ್ತದೆ.
ನಿಮ್ಮ ಅಂಗೈನಲ್ಲಿ ಹೆಡ್ ಲೈನ್ ಮತ್ತು ಲೈಫ್ ಲೈನ್ ನಡುವಿನ ಅಂತರವು ಕೂಡ ಕೆಲವೊಂದು ಸೂಚನೆಗಳನ್ನು ನೀಡುತ್ತದೆ. ಈ ಎರಡು ಲೈನ್ಗಳ ನಡುವೆ ದೊಡ್ಡ ಅಂತರವಿದ್ದರೆ, ಅಂತಹ ಜನರು ಸಾಹಸಿಗರಾಗಿರುತ್ತಾರೆ. ಅಂದರೆ, ಜೀವನದಲ್ಲಿ ಸವಾಲುಗಳನ್ನು ಎದುರಿಸಲು ಸಿದ್ಧರಾಗಿರುತ್ತಾರೆ. ಏನಾದರೂ ಆಗಲಿ ಮಾಡಲೇಬೇಕು ಎಂಬ ಮನೋಭಾವ ಹೊಂದಿರುತ್ತಾರೆ. ಅವಕಾಶವು ತಮ್ಮನ್ನು ಹುಡುಕಿಕೊಂಡು ಬರಲಿ ಎಂದು ಕೂರುವುದಿಲ್ಲ. ತಾವೇ ಅವಕಾಶಕ್ಕಾಗಿ ಹುಡುಕಿಕೊಂಡು ಹೋಗುತ್ತಾರೆ. ಹಿಡಿದ ಕೆಲಸವನ್ನು ಎಷ್ಟೇ ಕಷ್ಟಬಂದರೂ ಮಾಡಿ ಮುಗಿಸಲು ಪ್ರಯತ್ನಿಸುತ್ತಾರೆ. ಯಾವುದೇ ನಿರ್ಧಾರವನ್ನು ತಕ್ಷಣ ತೆಗೆದುಕೊಳ್ಳುತ್ತಾರೆ ಮತ್ತು ಆ ನಿರ್ಧಾರಕ್ಕೆ ಬದ್ಧರಾಗಿರುತ್ತಾರೆ. ಆದರೆ, ಈ ವ್ಯಕ್ತಿಗಳು ದುಡುಕಿನ ನಿರ್ಧಾರ ತೆಗೆದುಕೊಳ್ಳುವುದು ಹೆಚ್ಚು. ಇದೇ ಕೆಲವೊಮ್ಮೆ ಮುಳುವಾಗುತ್ತದೆ.
ಹೆಡ್ ಲೈನ್ ಮತ್ತು ಲೈಫ್‌ಲೈನ್ ನಡುವೆ ಸಣ್ಣ ಅಂತರವಿದ್ದರೆ ಅಂಥವರು ಸಮಯಕ್ಕೆ ಹೆಚ್ಚಿನ ಬೆಲೆ ಕೊಡುತ್ತಾರೆ. ಸರಿಯಾದ ಸಮಯಕ್ಕೆ ಬರುತ್ತಾರೆ ಮತ್ತು ಕೆಲಸವನ್ನು ಮಾಡಿ ಮುಗಿಸುತ್ತಾರೆ. ದುಡುಕಿನ ನಿರ್ಧಾರವಾಗಲಿ ಅಥವಾ ಅತಿಯಾಗಿ ಚಿಂತಿಸುವುದಾಗಲಿ ಮಾಡುವುದಿಲ್ಲ. ಸೂಕ್ತ ಸಮಯದಲ್ಲಿ ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ. ಉದಾಹರಣೆಗೆ ಬಿಸಿ ತಟ್ಟೆಯನ್ನು ಕೈಗಳಿಂದ ಹಿಡಿದುಕೊಳ್ಳಬೇಕಾದರೆ ತಟ್ಟೆಯು ಸೂಕ್ತ ಮಟ್ಟಕ್ಕೆ ತಣ್ಣಗಾಗುವವರೆಗೆ ಕಾಯುತ್ತಾರೆ. ಆ ಮೇಲೆ ತಟ್ಟೆಯನ್ನು ಹಿಡಿದುಕೊಳ್ಳುತ್ತಾರೆ. ಏಕೆಂದರೆ, ತಣ್ಣಗಾದಾಗ ಕೈಗಳು ಸುಡುವುದಿಲ್ಲ.
ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು, ಜ್ಯೋತಿಷಿಗಳು, ಪಂಚಾಂಗಗಳು, ನಂಬಿಕೆಗಳು ಹಾಗೂ ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದನ್ನು ವಿಜಯವಾಣಿ ವೆಬ್ಸೈಟ್ ಜವಾಬ್ದಾರರಾಗಿರುವುದಿಲ್ಲ.
ನಿಮ್ಮ ಅಂಗೈನಲ್ಲಿ ಈ ಚಿಹ್ನೆ ಇದೆಯಾ ನೋಡಿ… ಇದ್ರೆ ಎಂದಿಗೂ ಹಣಕಾಸಿನ ಸಮಸ್ಯೆಗಳು ಎದುರಾಗಲ್ಲ | Palmistry
ನಿಮ್ಮ ಅಂಗೈನಲ್ಲಿ ಈ ಚಿಹ್ನೆ ಇದೆಯಾ ಚೆಕ್ ಮಾಡಿ ನೋಡಿ… ಇದ್ರೆ ನೀವು ರಾಜಯೋಗ ಅನುಭವಿಸುತ್ತೀರಿ!