ನಿಮ್ಮ ಅಂಗೈನಲ್ಲಿ H ಚಿಹ್ನೆ ಇದೆಯಾ ನೋಡಿ… ಇದರ ಅರ್ಥ ತಿಳಿದ್ರೆ ನಿಮ್ಮ ಹುಬ್ಬೇರೋದು ಖಚಿತ! Palmistry

Palmistry H Symbol
Published on

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ ಏನಾಗುತ್ತದೆ? ಉದ್ಯೋಗ ಸಿಗುತ್ತದೆಯೇ ಅಥವಾ ಇಲ್ಲವೇ? ಮದುವೆ ಆಗುತ್ತಾ? ಜೀವನದಲ್ಲಿ ಸೆಟಲ್​ ಆಗ್ತೀನಾ? ಎಂಬಿತ್ಯಾದಿ ವಿಚಾರಗಳನ್ನು ತಿಳಿದುಕೊಳ್ಳುವ ಆಸಕ್ತಿಯನ್ನು ಜನರು ತೋರಿಸುತ್ತಾರೆ. ಆದರೆ, ಕೆಲವರಿಗೆ ಈ ಜ್ಯೋತಿಷ್ಯದ ( Astrology ) ಮೇಲೆ ನಂಬಿಕೆ ಇರುವುದಿಲ್ಲ. ಆದರೂ ಬಹುತೇಕ ಮಂದಿ ಜಾತಕವನ್ನು ನಂಬುತ್ತಾರೆ. ಈ ಕಾರಣಕ್ಕೆ ಜ್ಯೋತಿಷಿಗಳಿಗೆ ತುಂಬಾ ಬೇಡಿಕೆ ಇದೆ.

ಅಂದಹಾಗೆ ನಮ್ಮ ಗ್ರಹಗತಿ ಆಧಾರದ ಮೇಲೆ ನಮ್ಮ ಜೀವನದ ಆಗು-ಹೋಗುಗಳನ್ನು ತಿಳಿದುಕೊಳ್ಳುವ ನಿಟ್ಟಿನಲ್ಲಿ ಜ್ಯೋತಿಷ್ಯ ಶಾಸ್ತ್ರ ಬಹಳ ಮುಖ್ಯವಾಗಿದೆ. ಜ್ಯೋತಿಷ್ಯದಲ್ಲಿ ಹಲವು ವಿಧಾನಗಳಿರುವುದು ನಿಮಗೆಲ್ಲರಿಗೂ ಗೊತ್ತೇ ಇದೆ. ಅದರಲ್ಲಿ ಹಸ್ತ ಸಾಮುದ್ರಿಕಾ ಕೂಡ ಒಂದು. ಹಸ್ತ ಸಾಮುದ್ರಿಕ ಎಂದರೆ ಹಸ್ತದ ಮೇಲಿನ ರೇಖೆಗಳ ಆಧಾರದ ಮೇಲೆ ಭವಿಷ್ಯವನ್ನು ಊಹಿಸುವುದು. ಈ ಹಸ್ತಸಾಮುದ್ರಿಕ ಶಾಸ್ತ್ರವನ್ನು ನಂಬುವ ಅನೇಕ ಜನರಿದ್ದಾರೆ. ಅವರಲ್ಲಿ ಸಾಮಾನ್ಯ ನಾಗರಿಕರಷ್ಟೇ ಅಲ್ಲ ಸೆಲೆಬ್ರಿಟಿಗಳು ಕೂಡ ಇದ್ದಾರೆ.

ನಮ್ಮ ಅಂಗೈನಲ್ಲಿ ವಿವಿಧ ರೀತಿಯ ರೇಖೆಗಳು ಅಥವಾ ಗೀರುಗಳಿವೆ. ಈ ಗೆರೆಗಳಿಂದಾಗಿ ಕೆಲವೊಂದು ಚಿಹ್ನೆಗಳು ಕೂಡ ರಚನೆಯಾಗಿವೆ. ಒಬ್ಬೊಬ್ಬರಲ್ಲೂ ಒಂದೊಂದು ರೀತಿಯ ಚಿಹ್ನೆಗಳಿರುತ್ತವೆ. ಕೆಲವರಲ್ಲಿ ಆಂಗ್ಲ ಅಕ್ಷರ H ಆಕಾರವೂ ಕೂಡ ಇರುತ್ತದೆ. ಅಂಗೈನಲ್ಲಿ H ಚಿಹ್ನೆ ಹೊಂದಿರುವುದರ ಅರ್ಥ ಏನೆಂದು ನಾವೀಗ ತಿಳಿದುಕೊಳ್ಳೋಣ.

Palmistry H Symbol 1

ಹಸ್ತಸಾಮುದ್ರಿಕ ಶಾಸ್ತ್ರದ ಪ್ರಕಾರ ಅಂಗೈಯಲ್ಲಿರುವ H ಚಿಹ್ನೆಯು ತುಂಬಾ ಮಂಗಳಕರವೆಂದು ಪರಿಗಣಿಸಲಾಗಿದೆ. ಅಂಗೈನ ಬುಧ ಮತ್ತು ಶುಕ್ರ ಪರ್ವತಗಳ ನಡುವೆ H ಚಿಹ್ನೆಯನ್ನು ಹೊಂದಿರುವ ಜನರು ಮಾಧ್ಯಮ ಮತ್ತು ಚಲನಚಿತ್ರ ವೃತ್ತಿಯಲ್ಲಿ ಉತ್ತಮ ಹೆಸರನ್ನು ಗಳಿಸುತ್ತಾರೆ. ಈ ಜನರು ಯಾವಾಗಲೂ ತಮ್ಮ ಸಂಗಾತಿ, ಕುಟುಂಬ ಮತ್ತು ಸ್ನೇಹಿತರ ಸಂತೋಷ ಮತ್ತು ದುಃಖ ಸಂದರ್ಭದಲ್ಲಿ ಬೆಂಬಲಕ್ಕೆ ನಿಲ್ಲುತ್ತಾರೆ. ಈ ಜನರು ಆಲ್‌ರೌಂಡರ್‌ಗಳು ಮತ್ತು ಅತ್ಯಂತ ಪ್ರತಿಕೂಲ ಸಂದರ್ಭಗಳಲ್ಲಿಯೂ ಶಾಂತವಾಗಿರುತ್ತಾರೆ. ಇವರು ಕಲಾಭಿಮಾನಿಗಳೂ ಆಗಿದ್ದು ಸಮಾಜದಲ್ಲಿ ಪ್ರತ್ಯೇಕವಾದ ಗುರುತನ್ನು ಹೊಂದಿರುತ್ತಾರೆ.

40 ವರ್ಷಗಳ ನಂತರ ಅದೃಷ್ಟ

H ಚಿಹ್ನೆಯನ್ನು ಹೊಂದಿರುವ ಜನರು ಆರ್ಥಿಕವಾಗಿ ಬಲಶಾಲಿಯಾಗಿರುತ್ತಾರೆ. ಆದರೆ, ಅವರ ಅದೃಷ್ಟ 40 ವರ್ಷಗಳ ನಂತರ ಮತ್ತಷ್ಟು ಹೆಚ್ಚಾಗುತ್ತದೆ. ಅಂದರೆ 40 ವರ್ಷಕ್ಕಿಂತ ಮುಂಚೆಯೇ ಕಷ್ಟಪಟ್ಟು ಕೆಲಸ ಮಾಡಬೇಕು. ಇದರಿಂದ 40 ವರ್ಷದ ನಂತರ ಒಳ್ಳೆಯ ಯಶಸ್ಸನ್ನು ಪಡೆಯುತ್ತಾರೆ.

ಸ್ವಚ್ಛ ಮನಸ್ಸು ಮತ್ತು ದಯೆ

ಹಸ್ತಸಾಮುದ್ರಿಕ ಶಾಸ್ತ್ರದ ಪ್ರಕಾರ, ಕೈಯಲ್ಲಿ H ಗುರುತು ಹೊಂದಿರುವ ಜನರು ದಯೆ ಮತ್ತು ಶುದ್ಧ ಹೃದಯದ ಜನರು. ಅವರ ಸರಳತೆ ಮತ್ತು ನೇರ ಸ್ವಭಾವದಿಂದಾಗಿ, ಜನರು ಅವರನ್ನು ಸುಲಭವಾಗಿ ಮೋಸ ಮಾಡುತ್ತಾರೆ. ಆದ್ದರಿಂದ, ಈ ಜನರು ಸ್ವಲ್ಪ ಹೆಚ್ಚು ಜಾಗರೂಕರಾಗಿರಬೇಕು. ಈ ಜನರು ನಂಬಿಕೆಯುಳ್ಳವರು ಮತ್ತು ದೇವರಲ್ಲಿ ಸಂಪೂರ್ಣ ನಂಬಿಕೆಯನ್ನು ಹೊಂದಿರುತ್ತಾರೆ.

ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು, ಜ್ಯೋತಿಷಿಗಳು, ಪಂಚಾಂಗಗಳು, ನಂಬಿಕೆಗಳು ಹಾಗೂ ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದನ್ನು ವಿಜಯವಾಣಿ ವೆಬ್​ಸೈಟ್​ ಜವಾಬ್ದಾರರಾಗಿರುವುದಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net