More

    ರಾಜ್ಯ ಸರ್ಕಾರದ ಪ್ರತಿಷ್ಠಿತ ಪಂಪ ಪ್ರಶಸ್ತಿಗೆ ಪ್ರೊ.ಸಿಪಿಕೆ, ಬಾಬುಕೃಷ್ಣಮೂರ್ತಿ, ರಾಮಸ್ವಾಮಿ ಆಯ್ಕೆ

    ಬೆಂಗಳೂರು: ಕನ್ನಡ ಸಾಹಿತ್ಯ ಲೋಕದಲ್ಲಿ ಅನನ್ಯ ಸೇವೆ ಸಲ್ಲಿಸಿದವರಿಗೆ ರಾಜ್ಯ ಸರ್ಕಾರ ಕೊಡ ಮಾಡುವ ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರಕಟಗೊಂಡಿದೆ.

    ಕೋವಿಡ್ ಸಾಂಕ್ರಾಮಿಕ ಕಾರಣದಿಂದ ಎರಡು ವರ್ಷದ ಪ್ರಶಸ್ತಿ ಘೋಷಿಸಿರಲಿಲ್ಲ. ಇದೀಗ ಪ್ರಸಕ್ತ ಸಾಲಿನದ್ದೂ ಸೇರಿದಂತೆ ಮೂರು ವರ್ಷದ ಪ್ರಶಸ್ತಿ ಘೋಷಿಸಲಾಗಿದೆ. 2020-21ನೇ ಸಾಲಿಗೆ ಪ್ರೊ.ಸಿ.ಪಿ.ಕೃಷ್ಣಕುಮಾರ್, 2021-22ನೇ ಸಾಲಿಗೆ ಡಾ.ಬಾಬು ಕೃಷ್ಣಮೂರ್ತಿ, 2022-23ನೇ ಸಾಲಿಗೆ ಡಾ.ಎಸ್.ಆರ್. ರಾಮಸ್ವಾಮಿಯವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

    ಇದನ್ನೂ ಓದಿ: ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತ ಕುಸಿದು ಬಿದ್ದು ಸಾವು

    ಕುವೆಂಪು, ಶಿವರಾಮ ಕಾರಂತ, ಪುತಿನ, ಕೆ.ಎಸ್.ನರಸಿಂಹಸ್ವಾಮಿ, ಪೂರ್ಣಚಂದ್ರ ತೇಜಸ್ವಿ, ಎಸ್.ಎಲ್‌.ಭೈರಪ್ಪ, ನಿಸಾರ್ ಅಹ್ಮದ್, ಸಿದ್ದಲಿಂಗಯ್ಯ ಸೇರಿದಂತೆ 33 ಸಾಹಿತಿಗಳು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮೂರು ಲಕ್ಷ ನಗದು ಒಳಗೊಂಡ ಈ ಪ್ರಶಸ್ತಿಯನ್ನು ಸರ್ಕಾರ ಕೊಡುವ ಅತ್ಯುನ್ನತ ಸಾಹಿತ್ಯ ಪ್ರಶಸ್ತಿ ಎಂದು ಪರಿಗಣಿಸಲಾಗಿದೆ.

    ಇದೋ ಬಂದಿದೆ ಕಿಸ್ಸಿಂಗ್ ಡಿವೈಸ್; ಚುಂಬಿಸುವ ಇಬ್ಬರು ಎಷ್ಟೇ ದೂರದಲ್ಲಿದ್ದರೂ ಸಿಗುವುದು ನೈಜ ಮುತ್ತಿನ ಗಮ್ಮತ್ತು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts