More

    ಪ್ಯಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಲು ನೀಡಿದ್ದ ಗಡುವು ವಿಸ್ತರಣೆ

    ನವದೆಹಲಿ: ಪ್ಯಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಲು ನೀಡಿದ್ದ ಗಡುವು ವಿಸ್ತರಣೆಯಾಗಿದೆ. ಪ್ಯಾನ್ ಹಾಗೂ ಆಧಾರ್ ಕಾರ್ಡ್​ ಲಿಂಕ್ ಮಾಡುವ ಗಡುವನ್ನು ಜೂ.30ರವರೆಗೆ ವಿಸ್ತರಿಸಲಾಗಿದೆ. ಈ ಹಿಂದೆ ನೀಡಲಾಗಿದ್ದ ಅವಧಿ ಮುಕ್ತಾಯವಾಗುವ ಎರಡು ದಿನಗಳ ಮುಂಚಿತವಾಗಿ ಕೇಂದ್ರ ಸರ್ಕಾರ ಹೊಸ ಆದೇಶ ರವಾನಿಸಿದೆ. 

    ಮಾರ್ಚ್ 31ರ ಒಳಗಾಗಿ ಆಧಾರ್ ಸಂಖ್ಯೆಗೆ ಪ್ಯಾನ್ ಸಂಖ್ಯೆ ಜೋಡಣೆ ಮಾಡದಿದ್ದರೆ ಅಂತಹ ಪ್ಯಾನ್​ ಸಂಖ್ಯೆ ಏಪ್ರಿಲ್ 1ರಿಂದ ನಿಷ್ಕ್ರೀಯಗೊಳ್ಳಲಿದೆ. ಇದನ್ನು ಸಕ್ರೀಯಗೊಳಿಸಬೇಕಾದರೆ 10 ಸಾವಿರ ರೂ. ದಂಡ ಪಾವತಿಸಬೇಕು ಎಂದು ಈ ಹಿಂದಿನ ಆದೇಶದಲ್ಲಿ ಸೂಚನೆ ನೀಡಲಾಗಿತ್ತು.

    ಇನ್ನೂ ಸಾಕಷ್ಟು ಜನರು ಪಾನ್‌ ಕಾರ್ಡ್‌ ಜೊತೆ ಆಧಾರ್‌ ಕಾರ್ಡ್‌ ಲಿಂಕ್‌ ಮಾಡಿಲ್ಲ. ಹೀಗಾಗಿ ಈ ನಿರ್ಧಾರ ಮಾಡಲಾಗಿದೆ. ಆಧಾರ್‌ನೊಂದಿಗೆ ಲಿಂಕ್ ಮಾಡದ ಪ್ಯಾನ್ ಕಾರ್ಡ್‌ಗಳು ಜುಲೈ 1 ರಿಂದ ನಿಷ್ಕ್ರಿಯಗೊಳ್ಳುತ್ತವೆ ಎಂದು ಮಂಗಳವಾರ ಹೊರಡಿಸಲಾದ ಆದೇಶದಲ್ಲಿ ಸೂಚಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts