ನಾಗ ದೇವಸ್ಥಾನದಲ್ಲಿ ಪಂಚದುರ್ಗಾ ದೀಪ ನಮಸ್ಕಾರ

gan-1
Published on

ಗಂಗೊಳ್ಳಿ: ಬೆಣ್ಗೆರೆ ಶ್ರೀ ನಾಗ ದೇವಸ್ಥಾನದಲ್ಲಿ ನಾಗಮಂಡಲೋತ್ಸವದ ಸುವರ್ಣ ಮಹೋತ್ಸವ ಪ್ರಯುಕ್ತ ಶ್ರೀ ನಾಗದೇವರ ಜೀರ್ಣಾಷ್ಟಬಂಧ ಪುರ:ಸರ ಪುನಃ ಪ್ರತಿಷ್ಠಾಪನೆ ಮಹೋತ್ಸವ, ಬ್ರಹ್ಮಕಲಶೋತ್ಸವ ಮತ್ತು ಅಷ್ಟಪವಿತ್ರ ನಾಗಮಂಡಲೋತ್ಸವ ಪ್ರಯುಕ್ತ ಪಂಚದುರ್ಗಾ ದೀಪ ನಮಸ್ಕಾರ ಕಾರ್ಯಕ್ರಮ ಶುಕ್ರವಾರ ನಡೆಯಿತು.

ದೇವಸ್ಥಾನ ಪ್ರಧಾನ ಪುರೋಹಿತ ರಾಘವೇಂದ್ರ ಅಡಿಗ ನಾಯಕವಾಡಿ ನೇತೃತ್ವದಲ್ಲಿ ಪಂಚದುರ್ಗಾ ದೀಪ ನಮಸ್ಕಾರ ಸೇವೆಯ ಧಾರ್ಮಿಕ ವಿಧಿವಿಧಾನ ನಡೆಯಿತು. ಶ್ರೀ ನಾಗ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಉಮೇಶ ಎಲ್.ಮೇಸ್ತ ದಂಪತಿ ಮತ್ತು ಸಾರ್ವಜನಿಕ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಗಣಪತಿ ವಿ.ಮೇಸ್ತ ದಂಪತಿ ಪಂಚದುರ್ಗಾ ದೀಪ ನಮಸ್ಕಾರ ಸೇವೆಯನ್ನು ದೇವರಿಗೆ ಸಮರ್ಪಿಸಿದರು.

ನಾಗ ದೇವಸ್ಥಾನ ಸೇವಾ ಸಮಿತಿ ಸದಸ್ಯರು, ಸಾರ್ವಜನಿಕ ಸುವರ್ಣ ಮಹೋತ್ಸವ ಸಮಿತಿ ಸದಸ್ಯರು, ನಾಗಶ್ರೀ ಮಹಿಳಾ ಮಂಡಳಿ ಸದಸ್ಯರು, ಭಕ್ತರು, ವಿವಿಧ ಸಮಾಜದ ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net