ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ; ಡಿಸಿಎಂ ಭೇಟಿ ಮಾಡಿದ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದ ನಿಯೋಗ

Panchamasali
Published on

ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು ರಾಜ್ಯ 2ಎ ಪಟ್ಟಿಗೆ ಸೇರಿಸುವ ವಿಚಾರವಾಗಿ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಶಾಸಕರ ನಿಯೋಗವು ಶುಕ್ರವಾರ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಬೇಡಿಕೆ ಸಲ್ಲಿಸಿತು.

ಕುಮಾರಕೃಪಾ ಅತಿಥಿ ಗೃಹದಲ್ಲಿ ನಿಯೋಗವು ಡಿಸಿಎಂ ಡಿಕೆಶಿ ಅವರನ್ನು ಭೇಟಿ ಮಾಡಿ ತಮ್ಮ ಮನವಿ ಸಲ್ಲಿಸಿತು. ಪಂಚಮಸಾಲಿ ಸಮುದಾಯವನ್ನು ರಾಜ್ಯ 2ಎ ಪಟ್ಟಿಗೆ ಹಾಗೂ ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿಗೆ ಸೇರಿಸಲು ನಿಯೋಗ ಮನವಿ ಮಾಡಿದೆ.

Panchamasali

ಶೈಕ್ಷಣಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಬೇಕು. ಇದರಿಂದ ಸಮುದಾಯ ಮುಖ್ಯವಾಹಿನಿಗೆ ಬರಲು ಅನುಕೂಲವಾಗುತ್ತದೆ ಎಂದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ಧಾರೆ.

ನಿಯೋಗದಲ್ಲಿ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ವಿನಯ್ ಕುಲಕರ್ಣಿ, ವಿಜಯಾನಂದ ಕಾಶಪ್ಪನವರ್, ವೀಣಾ ಕಾಶಪ್ಪನವರ್, ಪ್ರಸಾದ್ ಅಬ್ಬಯ್ಯ ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net