More

    ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದ ಬೃಹತ್​ ಪ್ರತಿಭಟನಾ ಸಮಾವೇಶ: ಬೇಡಿಕೆ ಈಡೇರದಿದ್ದರೆ ಸುವರ್ಣಸೌಧಕ್ಕೆ ಮುತ್ತಿಗೆ

    ಬೆಳಗಾವಿ: 2ಎ ಮೀಸಲಾತಿಗೆ ಆಗ್ರಹಿಸಿ ಶ್ರೀ ಜಯಮೃತ್ಯಂಜಯ ಸ್ವಾಮೀಜಿ ನೇತೃತ್ವದಲ್ಲಿ ಇಂದು(ಗುರುವಾರ) ಪಂಚಮಸಾಲಿ ಸಮುದಾಯದ ಬೃಹತ್​ ಪ್ರತಿಭಟನಾ ಸಮಾವೇಶ ನಡೆಸುತ್ತಿದ್ದು, ಬೇಡಿಕೆ ಈಡೇರದಿದ್ದರೆ ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದೆ.

    ಬೆಳಗಾವಿಯಲ್ಲಿ ನಡೆಯುತ್ತಿರುವ ಪ್ರತಿಭಟನಾ ಸಮಾವೇಶಕ್ಕೆ ಲಕ್ಷಾಂತರ ಜನ ಆಗಮಿಸಿದ್ದಾರೆ. ಅತ್ತ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇಂದು ಬೆಳಗ್ಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಅವರು ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಿದ್ದಾರೆ. ಪಂಚಮಸಾಲಿ ಸಮುದಾಯದ ಬೇಡಿಕೆ ಇಂದೇ ಈಡೇರುತ್ತಾ? ಎಂಬ ಕುತೂಹಲ ಸಹಜವಾಗಿ ಮೂಡಿದೆ. ಸಚಿವ ಸಂಪುಟ ಸಭೆಯಲ್ಲಿ ಈ‌ ವರದಿ ಮಂಡಿಸಿ ಒಪ್ಪಿಗೆ ಪಡೆಯುವ ಸಾಧ್ಯತೆಗಳಿದ್ದು, ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯ ಆಯೋಜಿಸಿರುವ ಬೃಹತ್ ಪ್ರತಿಭಟನಾ ಸಮಾವೇಶವು‌ ವಿಜಯೋತ್ಸವವಾಗಿ ಪರಿವರ್ತನೆಯಾಗಲಿದೆ ಎಂದು ತರ್ಕಿಸಲಾಗುತ್ತಿದೆ.

    ಈ ಕುರಿತು ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಕಾನೂನು ಸಂಸದರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಪಂಚಮಸಾಲಿ ಬೇಡಿಕೆ ನ್ಯಾಯಸಮ್ಮತ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.

    ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರಿಗೆ ಗುರುವಾರ ಪ್ರತಿಕ್ರಿಯಿಸಿದ ಬಿಎಸ್​ವೈ, ಪಂಚಮಸಾಲಿ ಸಮುದಾಯದ ಬೇಡಿಕೆ ಈಡೇರಿಸುವ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಉತ್ಸುಕರಾಗಿದ್ದು, ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ಪಂಚಮಸಾಲಿ ಪೀಠಾಧಿಪತಿಗೆ ನನ್ನ ಮೇಲೆ ಯಾವುದೇ ಕೋಪವಿಲ್ಲ ಎಂದರು.

    ಪಂಚಮಸಾಲಿ ಸಮುದಾಯದ ಬೇಡಿಕೆ ಇಂದೇ ಈಡೇರುತ್ತಾ? ಮಧ್ಯಂತರ ವರದಿ ಸಲ್ಲಿಕೆ ಆಗ್ತಿದ್ದಂತೆ ಸಿಎಂ ಹೇಳಿದ್ದೇನು?

    ವಿದ್ಯಾರ್ಥಿ ಹಂತಕನ ಬಂಧನ: ಶಿಕ್ಷಕಿ ಮೇಲಿನ ಅತಿರೇಕದ ಪ್ರೇಮವೇ ಕೊಲೆಗೆ ಕಾರಣ? ವಾಟ್ಸ್​ಆ್ಯಪ್​ನಲ್ಲಿದೆ ರಹಸ್ಯ…

    ಇಮ್ರಾನ್ ಖಾನ್ ಆಡಿಯೋ ಲೀಕ್​: ನಿಮ್ಮಿಂದಾಗಿ ನನ್ನ ಖಾಸಗಿ ಅಂಗಗಳು ನೋಯುತ್ತಿವೆ.. ಇಂದು ಬರೋಕೆ ಆಗಲ್ಲ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts