ದೇಗುಲಗಳಲ್ಲಿ ಪಂಚಾಮೃತ ಅಭಿಷೇಕ

ಸೊರಬ: ಪಟ್ಟಣ ಸೇರಿ ತಾಲೂಕಿನಾದ್ಯಂತ ಶ್ರೀರಾಮ ನವಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಲಾಯಿತು. ಪಟ್ಟಣದ ಮುಖ್ಯರಸ್ತೆಯಲ್ಲಿರುವ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು.

ದೇವರಿಗೆ ಪಂಚಾಮೃತ ಅಭಿಷೇಕ, ಅಲಂಕಾರ, ಪೂಜೆ ಸೇರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ಆಚರಿಸಲಾಯಿತು. ನಂತರ ಪಲ್ಲಕ್ಕಿ ಉತ್ಸವ ಪಟ್ಟಣದ ಮುಖ್ಯರಸ್ತೆ, ಚಾಮರಾಜಪೇಟೆ, ಚಿಕ್ಕಪೇಟೆ ಮುಖಾಂತರ ದೇವಸ್ಥಾನದವರೆಗೆ ಸಾಗಿತು. ದೇವರ ಸನ್ನಿಧಿಯಲ್ಲಿ ಭಜನೆ, ಪ್ರಸಾದ ವಿನಿಯೋಗ, ಪಾನಕ-ಕೋಸಂಬರಿ ವಿತರಿಸಲಾಯಿತು.
ದಂಡಾವತಿ ಉಗಮಸ್ಥಾನ ಕುಪ್ಪೆ ಗ್ರಾಮದ ಶ್ರೀರಾಮ, ಲಕ್ಷ್ಮಣ, ಸೀತಾಂಜನೇಯ ದೇವಸ್ಥಾನದಲ್ಲಿ ಮೂರ್ತಿಗಳನ್ನು ವಿಶೇಷ ಹೂವುಗಳಿಂದ ಅಲಂಕರಿಸಲಾಗಿತ್ತು. ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ಗ್ರಾಮದಲ್ಲಿ ಪಲ್ಲಕ್ಕಿ ಉತ್ಸವ ನಡೆಯಿತು. ಗ್ರಾಮ ಮಾತ್ರವಲ್ಲದೆ ಸುತ್ತಲಿನ ಹತ್ತಾರು ಗ್ರಾಮಗಳ ಭಕ್ತರು ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಭಕ್ತರಿಗೆ ಕೋಸಂಬರಿ ವಿತರಿಸಲಾಯಿತು.
ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳದ ಪದಾಧಿಕಾರಿಗಳು ರಾಮನವಮಿ ಆಚರಿಸಿದರು. ಮುಖ್ಯರಸ್ತೆಯ ಶ್ರೀ ವರದಹಸ್ತ ಆಂಜನೇಯ ದೇವಸ್ಥಾನದ ಎದುರು ಪ್ರಸಾದ ವಿತರಿಸಲಾಯಿತು. ಆನವಟ್ಟಿಯ ಶ್ರೀ ವರದಹಸ್ತ ಆಂಜನೇಯ, ಬ್ರಾಹ್ಮಣರ ಬೀದಿಯ ಆಂಜನೇಯ, ಪಟ್ಟಣದ ನದಿಕಟ್ಟೆ ಆಂಜನೇಯ ಸೇರಿ ವಿವಿಧ ದೇವಸ್ಥಾನಗಳಲ್ಲಿ ಪೂಜಾ ಕೈಂಕರ್ಯಗಳು ನೆರವೇರಿದವು.
ಮಂಚಿ ಗ್ರಾಮದಲ್ಲಿ ಶ್ರೀ ಹನುಮಂತ ದೇವರ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯಿತು. ಏ.18ರಂದು ಬೇರು ಸಹಿತ ಮರ ತರುವ ಪವಾಡ (ಮಂಚಿಮರ ಬರುವ) ಕಾರ್ಯಕ್ರಮ ನಡೆಯಲಿದೆ.
ತಾಲೂಕು ಗುಡಿಗಾರ ಸಮಾಜದ ಅಧ್ಯಕ್ಷ ಕೃಷ್ಣಮೂರ್ತಿ, ಸುಬ್ರಹ್ಮಣ್ಯ ಗುಡಿಗಾರ್, ಗುರುಮೂರ್ತಿ, ಶೇಷಾದ್ರಿ, ಅಣ್ಣಪ್ಪ, ಗಣೇಶ್, ರಾಘವೇಂದ್ರ, ಸುಧೀರ್, ಪುಟ್ಟಸ್ವಾಮಿ, ವಿಜಯ್‌ಕುಮಾರ್, ಕೃಷ್ಣಮೂರ್ತಿ, ರವಿಶಂಕರ್, ಅಂಕುಶ್, ಅರ್ಚಕ ಸತ್ಯನಾರಾಯಣ ಇತರರಿದ್ದರು.

Share This Article

ಮಧ್ಯಾಹ್ನ, ರಾತ್ರಿ ಊಟದಲ್ಲಿ ಜಾಸ್ತಿ ಉಪ್ಪು ಸೇವಿಸಿದ್ರೆ ಕ್ಯಾನ್ಸರ್‌ ಬರೋದು ಪಕ್ಕಾ! ಇರಲಿ ಎಚ್ಚರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…

ಮಕ್ಕಳಿಗೆ ಬಾಳೆಹಣ್ಣು ಕೊಡುವ ಮುನ್ನ ಈ ವಿಚಾರಗಳು ನಿಮಗೆ ಗೊತ್ತಿರಲಿ ಇಲ್ಲದಿದ್ರೆ ಆರೋಗ್ಯ ಕೆಡಬಹುದು ಎಚ್ಚರ!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…

ತೂಕ ಕಳೆದುಕೊಂಡಿದ್ದೀರಾ? ಲಘುವಾಗಿ ಪರಿಗಣಿಸಬೇಡಿ, ನಿಮಗೆ ಈ ಆರೋಗ್ಯ ಸಮಸ್ಯೆಗಳಿರಬಹುದು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…