ಮಳೆಯ ಕಾರಣ ಪಂಚರತ್ನ ರಥಯಾತ್ರೆಯನ್ನು 4 ದಿನ ಮುಂದೂಡಿದ ಕುಮಾರಸ್ವಾಮಿ…

blank

ಬೆಂಗಳೂರು: ನಾಳೆಯಿಂದ ಚಿಕ್ಕನಾಯಕನಹಳ್ಳಿ ವಿಧಾನಸಭೆ ಕ್ಷೇತ್ರದಿಂದ ಪುನಾರಂಭ ಆಗಬೇಕಿದ್ದ ಪಂಚರತ್ನ ರಥಯಾತ್ರೆಯನ್ನು ನಾಲ್ಕು ದಿನಗಳ ಮಟ್ಟಿಗೆ ಮುಂದೂಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ತುಮಕೂರು ಜಿಲ್ಲೆ ಸೇರಿದಂತೆ ರಾಜ್ಯದ ಒಳನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಈ ಕಾರಣಕ್ಕೆ ಪಂಚರತ್ನ ರಥಯಾತ್ರೆಯನ್ನು ಅನಿವಾರ್ಯವಾಗಿ ಮುಂದಕ್ಕೆ ಹಾಕಲಾಗಿದೆ ಎಂದು ಹೇಳಿದ್ದಾರೆ.

ಪೂರ್ವ ನಿಗದಿತ ವೇಳಾಪಟ್ಟಿಯಂತೆ ರಥಯಾತ್ರೆಯು ಚಿಕ್ಕನಾಯಕನಹಳ್ಳಿಯಿಂದ ಶುರುವಾಗಬೇಕಿತ್ತು. ತದನಂತರ ತುರುವೇಕೆರೆ, ತುಮಕೂರು ಗ್ರಾಮಾಂತರ, ಕುಣಿಗಲ್ ಕ್ಷೇತ್ರಗಳಲ್ಲಿ ರಥಯಾತ್ರೆ ನಡೆಯಬೇಕಿತ್ತು. ತುಮಕೂರು ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಿರುವ ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಈ ಕಾರಣಕ್ಕೆ ಪಂಚರತ್ನ ರಥಯಾತ್ರೆ ಮಾರ್ಗ, ವೇಳಾಪಟ್ಟಿಯಲ್ಲಿ ಪರಿಷ್ಕರಣೆ ಮಾಡಲಾಗಿದೆ.

ಡಿಸೆಂಬರ್ 15ರಂದು ಮಾಗಡಿಯಲ್ಲಿ ರಥಯಾತ್ರೆ ನಡೆಯಲಿದ್ದು, ಡಿ. 27ರಂದು ಮತ್ತೆ ತುಮಕೂರು ಜಿಲ್ಲೆಗೆ ಪ್ರವೇಶ ಮಾಡಲಿದೆ. ಡಿಸೆಂಬರ್ 27ರಂದು ತುರುವೇಕೆರೆ, 28ರಂದು ಚಿಕ್ಕನಾಯಕನಹಳ್ಳಿ, 29ರಂದು ತುಮಕೂರು ಗ್ರಾಮಾಂತರ, 30ರಂದು ಕುಣಿಗಲ್ ಕ್ಷೇತ್ರದಲ್ಲಿ ರಥಯಾತ್ರೆ ನಡೆಯಲಿದೆ. ಡಿಸೆಂಬರ್ 15ರಂದು ಮಾಗಡಿ, 16ರಂದು ರಾಮನಗರ, 17ರಂದು ಹಾರೋಹಳ್ಳಿ, 18ರಂದು ಕನಕಪುರ, 19ರಂದು ಚನ್ನಪಟ್ಟಣ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದೆ.

ಡಿಸೆಂಬರ್ 20ರಂದು ಮಂಡ್ಯ ಜಿಲ್ಲೆಗೆ ರಥಯಾತ್ರೆ ಪ್ರವೇಶ ಮಾಡಲಿದ್ದು, 20ರಂದು ಮಳವಳ್ಳಿ, 21ಕ್ಕೆ ಮದ್ದೂರು, 22ಕ್ಕೆ ಮಂಡ್ಯ, 23ಕ್ಕೆ ಶ್ರೀರಂಗಪಟ್ಟಣ, 24ಕ್ಕೆ ಪಾಂಡವಪುರ, 25ಕ್ಕೆ ಕೆ.ಆರ್.ಪೇಟೆ, 26ಕ್ಕೆ ನಾಗಮಂಗಲ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದೆ ಎಂದು ಹೇಳಿದ್ದಾರೆ.

Share This Article

ಮೊಬೈಲ್​ ಹಿಡಿದುಕೊಳ್ಳುವ ಸ್ಟೈಲ್​ ನೋಡಿಯೇ ನಿಮ್ಮ ವ್ಯಕ್ತಿತ್ವ ಎಂಥದ್ದು ಅಂತ ಹೇಳಬಹುದು! ಇಲ್ಲಿದೆ ಅಚ್ಚರಿ ಸಂಗತಿ… Personality Facts

Personality Facts : ಸೈಕಾಲಜಿ ಪ್ರಕಾರ ಒಬ್ಬರ ಕ್ರಿಯೆಗಳ ಆಧಾರದ ಮೇಲೆ ಅವರ ವ್ಯಕ್ತಿತ್ವವನ್ನು ನಿರ್ಣಯಿಸಬಹುದು.…

ಬಿಸಿ..ಬಿಸಿ ಚಹಾ ಕುಡಿಯುವ ಅಭ್ಯಾಸವಿದ್ಯಾ? ಹಾಗಿದ್ರೆ ಇಂದೇ ಬಿಟ್ಟು ಬಿಡಿ.. ಹಲ್ಲುಗಳಿಗೆ ಎಷ್ಟು ಹಾನಿಕಾರಕ ಗೊತ್ತಾ? Health Tips

Health Tips: ಬಿಸಿ..ಬಿಸಿ ಚಹಾ ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ...ಊಟ ಇಲ್ಲದಿದ್ದರೂ, ತಡವಾದರೂ ಒಂದು…

honeymoon destinations : 2024 ರಲ್ಲಿ ನವವಿವಾಹಿತರನ್ನು ಆಕರ್ಷಿಸಿದ ನೆಚ್ಚಿನ ಹನಿಮೂನ್ ತಾಣಗಳು ಇವು..!

 honeymoon destinations  : ವ್ಯಕ್ತಿಯ ಆದ್ಯತೆಗಳು ಮತ್ತು ಆಯ್ಕೆಗಳು ವರ್ಷಗಳಲ್ಲಿ ಬದಲಾಗುತ್ತವೆ. ಈಗ ನಾವು 2024…