ಕೋಟ: ಮಕ್ಕಳಲ್ಲಿ ಆರೋಗ್ಯ ಸಹಿತ ಇನ್ನಿತರ ಅಗತ್ಯ ವಿಚಾರಗಳ ಬಗ್ಗೆ ಆಗಾಗ ಅರಿವು ಮೂಡಿಸುವ ಪಂಚವರ್ಣ ಮಹಿಳಾ ಮಂಡಲದ ಅರಿವು ಸರಣಿ ಕಾರ್ಯಕ್ರಮ ಶ್ಲಾಘನೀಯ ಎಂದು ಕೋಟ ವಿವೇಕ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಕೆ.ಜಗದೀಶ್ ನಾವಡ ಹೇಳಿದರು.
ಕೋಟದ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ವಿವೇಕ ವಿದ್ಯಾ ಸಂಸ್ಥೆಯಲ್ಲಿ ಬುಧವಾರ ಅರಿವು ನಿಮಗಿರಲಿ ನೆರವು 12ನೇ ಸರಣಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪಂಚವರ್ಣ ಮಹಿಳಾ ಮಂಡಲ ಅಧ್ಯಕ್ಷೆ ಲಲಿತಾ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಆಯುರ್ವೇದ ವೈದ್ಯೆ ಡಾ.ವಾಣಿಶ್ರೀ ಐತಾಳ್, ಯುವಕ ಮಂಡಲ ಉಪಾಧ್ಯಕ್ಷ ದಿನೇಶ್ ಆಚಾರ್ ಉಪಸ್ಥಿತರಿದ್ದರು. ವಿವೇಕ ಬಾಲಕೀಯರ ಪ್ರೌಢಶಾಲಾ ಮುಖ್ಯ ಶಿಕ್ಷಕ ಜಗದೀಶ ಹೊಳ್ಳ ಸ್ವಾಗತಿಸಿದರು. ಕಲಾವತಿ ಅಶೋಕ್ ಪ್ರಸ್ತಾವನೆಗೈದರು. ಶಿಕ್ಷಕ ನರೇಂದ್ರಕುಮಾರ್ ಕೋಟ ವಂದಿಸಿದರು. ಸುಜಾತ ಬಾಯರಿ ಕಾರ್ಯಕ್ರಮ ನಿರೂಪಿಸಿದರು.