ಸರ್ಕಾರಕ್ಕೆ ಪಂಚಮ ಸಂಕಟ; ಲಾಠಿಚಾರ್ಜ್ ಕಿಡಿಗೆ ಆಪೋಶನವಾಗುವುದೇ ಅಧಿವೇಶನ?

Panchamasali Protest

ಬೆಳಗಾವಿ: ಪಂಚಮಸಾಲಿಗಳ 2ಎ ಮೀಸಲಾತಿ ಹೋರಾಟದ ವಿಚಾರ ಸರ್ಕಾರಕ್ಕೀಗ ಅತ್ತ ದರಿ, ಇತ್ತ ಪುಲಿ ಎಂಬ ಧರ್ಮ ಸಂಕಷ್ಟ ತಂದೊಡ್ಡಿದೆ. ಮಂಗಳವಾರ ಬೆಳಗಾವಿಯ ಸುವರ್ಣಸೌಧದದ ಎದುರು ಹೋರಾಟಗಾರರ ಮೇಲೆ ನಡೆದ ಲಾಠಿ ಪ್ರಹಾರ ಗುರುವಾರ ವಿಧಾನಮಂಡಲ ಕಲಾಪದಲ್ಲಿ ಕೋಲಾಹಲ ಎಬ್ಬಿಸುವ ಆತಂಕದ ನಡುವೆಯೇ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಿದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಹಿಂದುಳಿದ ಜಾತಿಗಳ ಒಕ್ಕೂಟ ಬಹಿರಂಗ ಎಚ್ಚರಿಕೆ ನೀಡಿದೆ. ಮತ್ತೊಂದೆಡೆ ಗುರುವಾರ ರಾಜ್ಯಾದ್ಯಂತ ಹೆದ್ದಾರಿ ತಡೆಗೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಕರೆಕೊಟ್ಟಿರುವುದು ಸರ್ಕಾರಕ್ಕೆ ತಲೆ ಬಿಸಿ ಹೆಚ್ಚಿಸಿದೆ. ಈ ಎಲ್ಲ ವೈರುಧ್ಯಗಳಿಂದಾಗಿ ಆಡಳಿತಾರೂಢ ಕಾಂಗ್ರೆಸ್ ಸ್ಥಿತಿ ಬೆಂಕಿಯಿಂದ ಬಾಣಲೆಗೆ ಬಿದ್ದಂತಾಗಿದೆ. ಬಿಜೆಪಿ ಹಾಗೂ ಜೆಡಿಎಸ್ ಗುರುವಾರ ವಿಧಾನಸಭೆ, ಪರಿಷತ್​ನಲ್ಲಿ ಲಾಠಿಚಾರ್ಜ್ ವಿಚಾರವಾಗಿ ಸರ್ಕಾರದ ಮೇಲೆ ಚಾರ್ಜ್ ಮಾಡಲು ಸಿದ್ಧವಾಗಿವೆ. ಆದರೆ ಪ್ರತಿಭಟನಾಕಾರರಿಗೆ ಲಾಠಿರುಚಿ ತೋರಿಸಿದ್ದನ್ನು ಸಮರ್ಥಿಸಿ ಕೊಳ್ಳಲಾಗದ ಪರಿಸ್ಥಿತಿಯಲ್ಲಿರುವ ಕಾಂಗ್ರೆಸ್, ಜಾತಿ ಸಂಘರ್ಷದ ಸಂಕೋಲೆಯಿಂದ ಹೊರಬರುವ ದಾರಿ ಶೋಧಿಸಿದೆ.

ವಕ್ಪ್ ವಿಚಾರವನ್ನು ಆದ್ಯತೆ ಮೇಲೆ ತೆಗೆದುಕೊಳ್ಳುವಂತೆ ಮಾಡಲು ತಾಲೀಮು ನಡೆಸಿರುವ ಪ್ರತಿಪಕ್ಷ ನಾಯಕ ಆರ್. ಅಶೋಕ್, ಅದೇ ವಿಷಯವನ್ನು ಗುರುವಾರ ಕಲಾಪದಲ್ಲಿ ಪ್ರಸ್ತಾಪಿಸಲು ಆಸಕ್ತಿ ತೋರಿಸಿದ್ದರೆ, ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಲಾಠಿ ಪ್ರಹಾರ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸದನದ ಒಳಹೊರಗೆ ಹೋರಾಟ ಬಯಸಿದ್ದಾರೆ. ಜತೆಗೆ ಬಸನಗೌಡ ಪಾಟೀಲ ಯತ್ನಾಳ್, ಅರವಿಂದ ಬೆಲ್ಲದ್ ಲಾಠಿ ಚಾರ್ಜ್ ವಿಷಯವನ್ನೇ ಮುಂದೆ ತರುವ ಉಮೇದು ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್​ನಲ್ಲೂ ಅಸಮಾಧಾನ: ಪಂಚಮಸಾಲಿ ಸಮುದಾಯದ ಪ್ರತಿಭಟನಾಕಾರರನ್ನು ನಿರ್ವಹಿಸಿದ ರೀತಿಯೇ ಸರಿಯಿಲ್ಲ. ನಮ್ಮ ಸರ್ಕಾರ ಇದ್ದಾಗ ಲಾಠಿ ಬೀಸಲಾಯಿತು ಎಂಬ ಕಪು್ಪಚುಕ್ಕೆ ಉಳಿದು ಹೋಗಲಿದೆ ಎಂದು ಕಾಂಗ್ರೆಸ್​ನ ಹಲವು ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಅವಕಾಶಗಳಿದ್ದವು. ಕರೆದು ಮಾತನಾಡಬಹುದಿತ್ತು. ಈಗ ಲಾಠಿ ಬೀಸಿ ರಕ್ತ ಹರಿಸಿದರು ಎಂದು ಕಳಂಕ ಅಂಟಿದೆ. ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ ಎಂದು ಹಿರಿಯ ಶಾಸಕರೇ ಹೇಳಿದ್ದಾರೆ.

Panchamasali

ಜಾತಿ ಲೆಕ್ಕಾಚಾರ ಮುನ್ನೆಲೆಗೆ: ಪಂಚಮಸಾಲಿ ಲಿಂಗಾಯತ ಸಮುದಾಯವನ್ನು ಹಿಂದುಳಿದ ಪ್ರವರ್ಗ-2ಎಗೆ ಸೇರಿಸಬಾರದು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ. ಈ ಬೆಳವಣಿಗೆ ಹಿಂದಿನ ಲೆಕ್ಕಾಚಾರದ ಬಗ್ಗೆ ರಾಜಕೀಯ ಪಡಸಾಲೆಯಲ್ಲಿ ಚರ್ಚೆಯಾಗುತ್ತಿದೆ.

ಇಂದು ಹೆದ್ದಾರಿ ತಡೆ: ಪೊಲೀಸರ ಲಾಠಿ ಚಾರ್ಜ್ ಬೆನ್ನಲ್ಲೇ ಎರಡನೇ ಹಂತದ ಹೋರಾಟಕ್ಕೆ ಪಂಚಮಸಾಲಿ ಸಮುದಾಯ ಸಜ್ಜಾಗಿದೆ. ಹಿರೇಬಾಗೇವಾಡಿ ರಾಷ್ಟ್ರೀಯ ಹೆದ್ದಾರಿ 4ರ ಟೋಲ್ ತಡೆದು ಹೋರಾಟ ಮಾಡಲು ತೀರ್ವನಿಸ ಲಾಗಿದೆ. ಅಧಿವೇಶನ ಮುಗಿಯುವ ವರೆಗೂ ಹೋರಾಟ ನಡೆಸುತ್ತೇವೆ ಎಂದು ಕೂಡಲ ಸಂಗಮ ಪಂಚಮಸಾಲಿ ಮಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಪ್ರಕಟಿಸಿದ್ದಾರೆ.

ಪಂಚಮಸಾಲಿ ಹೋರಾಟಗಾರರ ಮೇಲೆ ನಡೆದ ಲಾಠಿಚಾರ್ಜ್ ಪೂರ್ವನಿಯೋಜಿತ. ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಜತೆಗೆ ಹೋರಾಟಗಾರರ ಮೇಲಿನ ಪ್ರಕರಣ ವಾಪಸ್ ಪಡೆದು ಸರ್ಕಾರ ಸಮುದಾಯದ ಕ್ಷಮೆಯಾಚಿಸಬೇಕು.

| ಬಸವಜಯ ಮೃತ್ಯುಂಜಯ ಸ್ವಾಮೀಜಿ ಕೂಡಲ ಸಂಗಮ ಪಂಚಮಸಾಲಿ ಮಠ

ಪಂಚಮಸಾಲಿ ಸಮುದಾಯದ ಪ್ರತಿಭಟನಾಕಾರರನ್ನು ಸಿಎಂ ಸಿದ್ದರಾಮಯ್ಯ ಕರೆಸಿ ಮಾತನಾಡಿ ಅವರ ಮೀಸಲು ಬೇಡಿಕೆ ಬಗ್ಗೆ ತಮ್ಮ ನಿಲುವೇನು ಎಂಬುದನ್ನು ಸ್ಪಷ್ಟಪಡಿಸಲಿ.

| ಆರ್.ಅಶೋಕ್ ವಿರೋಧ ಪಕ್ಷದ ನಾಯಕ

ಮೂರನೇ ಟೆಸ್ಟ್​ ಪಂದ್ಯಕ್ಕೆ ಈತನಿಗೆ ಅವಕಾಶ ಕೊಡಬೇಡಿ; Team ಇಂಡಿಯಾಗೆ ಸಲಹೆ ನೀಡಿದ ಖ್ಯಾತ ಕ್ರಿಕೆಟಿಗ

ಸಾವಿರ ಕೋಟಿ ಗಳಿಕೆ ಕಂಡ Pushpa 2; ವೈರಲ್​ ಆಗುತ್ತಿದೆ ಶೇಖಾವತ್​ ರೀ ಎಂಟ್ರಿ ವಿಡಿಯೋ

Share This Article

ಗ್ಯಾಸ್​ಗೆ ವಾಸನೆಯೇ ಇಲ್ಲ! ಹೀಗಿದ್ದರೂ​ ಸಿಲಿಂಡರ್​ ಲೀಕ್​ ಆಗ್ತಿದೆ ಅಂತ ತಿಳಿಸೋದು ಈ ಕೆಮಿಕಲ್​ ಮಾತ್ರ​ | Gas Leakage

Gas Leakage: ಇಂದು ಪ್ರತಿಯೊಬ್ಬರ ಮನೆಯಲ್ಲಿಯೂ ಎಲ್​ಪಿಜಿ ಗ್ಯಾಸ್​ ಸಿಲಿಂಡರ್​ಗಳನ್ನು ಬಳಕೆ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ…

ಊಟದ ನಂತರ ಸಿಹಿ ತಿನ್ನುವುದು ಒಳ್ಳೆಯದೇ? ವೈದ್ಯರ ಸಲಹೆ..!  sweet

sweet:  ಸಿಹಿ ತಿಂಡಿ ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ... ನಾಲಿಗೆ ಚಪ್ಪರಿಸಿ ಸಿಹಿ ತಿಂಡಿ…

astrology : ಈ ದಿನ ಉಗುರು, ಕೂದಲನ್ನು ಕತ್ತರಿಸಿದ್ರೆ ಕಾದಿದೆ ಸಂಕಷ್ಟ! ಈ ಕೆಲಸಕ್ಕೂ ಇದೆ ಒಳ್ಳೆಯ ದಿನ

astrology: ವಾರದ ಕೆಲವು ದಿನಗಳಲ್ಲಿ ಉಗುರುಗಳನ್ನು ಕತ್ತರಿಸುವುದು ಮತ್ತು ಕೂದಲನ್ನು ಕತ್ತರಿಸುವು ಒಳ್ಳೆಯದಲ್ಲ ಎಂದು ಹೇಳಲಾಗುತ್ತದೆ. …