ಪಂಚಮಸಾಲಿ 2ಎ ಮೀಸಲಾತಿ.. ನ್ಯಾಯಾಲಯದ ಆದೇಶ ಸದನ ಮುಂದೆ ಮಂಡನೆ; CM Siddaramaiah

blank

ಬೆಳಗಾವಿ: ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡೆವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನ ಮುಂದೆ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಹೇಳಿದರು.

ಬೆಳಗಾವಿ ಸುವರ್ಣ ಸೌಧದಲ್ಲಿ ಸೋಮವಾರ ಆರಂಭವಾದ ಚಳಿಗಾಲದ ಅಧಿವೇಶನದಲ್ಲಿ, ಪತ್ರಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಿದರು.

ಪಂಚಮಸಾಲಿಗಳನ್ನು 2ಎ ಸೇರಿಸಲು ಬಹಳ ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ. ನಾನು ಸಿಎಂ ಆದ ಮೇಲೆ ಜಯಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಪಂಚಮಸಾಲಿ ಮುಖಂಡರೊಂದಿಗೆ ಎರಡು ಬಾರಿ ಸಭೆ ನಡೆಸಿದ್ದೇನೆ. ಪಂಚಮಸಾಲಿಗಳು ಮೀಸಲಾತಿ ಕೇಳಲು ನಾನು ಅಡ್ಡಿಯಾಗಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.

ರಾಜ್ಯದಲ್ಲಿ ಹಿಂದುಳಿದ ವರ್ಗಗಳನ್ನು ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-3ಎ ಹಾಗೂ ಪ್ರವರ್ಗ-3ಬಿ ಎಂದು ವಿಂಗಡಸಲಾಗಿದೆ. ವೀರಶೈವ ಲಿಂಗಾಯಿತ ಹಾಗೂ ಪಂಚಮಸಾಲಿ ಜಾತಿಗಳು 3ಬಿ ಅಡಿ ಮೀಸಲಾತಿ ಪಡೆಯುತ್ತಿವೆ. ಪಂಚಮಸಾಲಿಗಳನ್ನು 2ಎ ಸೇರಿಸಲು ರಾಜ್ಯದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿ ಪಡೆಯುವುದು ಅವಶ್ಯಕವಾಗಿದೆ. ಈ ಹಿನ್ನಲೆಯಲ್ಲಿ ಆಯೋಗದ ಮುಂದೆ ಮೀಸಲಾತಿ ವಿಚಾರವನ್ನು ಮಂಡಿಸುವಂತೆ ಪಂಚಮಸಾಲಿ ಹೋರಟಗಾರರಿಗೆ ತಿಳಿಸಿದ್ದೇನೆ. ಹಿಂದಿನ ಬಸವರಾಜ ಬೊಮ್ಮಾಯಿ ಸರ್ಕಾರ ಪಂಚಮಸಾಲಿಗಳನ್ನು 2ಎ ಸೇರಿಸಿಲ್ಲ ಬದಲಾಗಿ, ಅಲ್ಪಸಂಖ್ಯಾತ ಮುಸ್ಲಿಂರಿಗೆ ನೀಡಿದ್ದ ಶೇ.4 ರಷ್ಟು ಮೀಸಲಾತಿಯನ್ನು ರದ್ದುಪಡಿಸಿ, 3ಎ ಹಾಗೂ 3ಬಿ ಗೆ ತಲಾ ಶೇ.2 ರಂತೆ ಮೀಸಲಾತಿ ಹಂಚಿಕೆ ಮಾಡಿತ್ತು. ಇದನ್ನು ಆಕ್ಷೇಪಿಸಿ ಮುಸ್ಲಿಂರು ಸರ್ವೋಚ್ಛ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ವೇಳೆ ಹಿಂದಿನ ಬಿಜೆಪಿ ಸರ್ಕಾರ ಮುಸ್ಲಿಂರ ಮೀಸಲಾತಿ ರದ್ದು ಪಡಿಸುವುದಿಲ್ಲ. ಯತಾಸ್ಥಿತಿಯನ್ನು ಮುಂದುವರಿಸಿಕೊಂಡು ಹೋಗುವುದಾಗಿ ಅಫಿಡೆವಿಡ್ ಸಲ್ಲಿಸಿದೆ. ಇದರ ಆಧಾರದ ಮೇಲೆ ಸರ್ವೋಚ್ಛ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಆದೇಶವನ್ನು ಬದಲಾಯಿಸಲು ಯಾರಿಂದಲೂ ಸಾದ್ಯವಿಲ್ಲ. ಇದರ ಪ್ರತಿಯನ್ನು ನಾಳೆಯೇ ಸದನ ಮುಂದೆ ಮಂಡಿಸುವುದಾಗಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಶಾಸಕ ಅರವಿಂದ ಬೆಲ್ಲದ್ ಮಂಗಳವಾರ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ನಡೆಯಲಿದೆ. ಆದ್ದರಿಂದ ನ್ಯಾಯಾಲಯದ ಆದೇಶವನ್ನು ಬುಧವಾರ ಸದನದ ಮುಂದೆ ಮಂಡಿಸುವಂತೆ ಮುಖ್ಯಮಂತ್ರಿಗೆ ಸಭಾಧ್ಯಕ್ಷರ ಮೂಲಕ ಕೋರಿದರು.

Share This Article

ನಿಮ್ಮ ನೆಚ್ಚಿನ ಹಣ್ಣುನ್ನು ಆಯ್ಕೆ ಮಾಡಿ.. ನಿಮ್ಮ ವ್ಯಕ್ತಿತ್ವವನ್ನು ತಿಳಿದುಕೊಳ್ಳಿ!.. Personality Test

Personality Test : ಒಬ್ಬ ವ್ಯಕ್ತಿ ಹೇಗಿದ್ದಾನೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ತುಂಬಾ ಕಷ್ಟ. ವ್ಯಕ್ತಿಯ ವ್ಯಕ್ತಿತ್ವವನ್ನು…

ಚಾಣಕ್ಯ ನೀತಿಯಲ್ಲಿನ ಈ 4 ವಿಷಯಗಳನ್ನು ನೆನಪಿನಲ್ಲಿಡಿ; ಸಂಬಂಧದಲ್ಲಿ ಮೋಸ ಹೋದ ನೋವನ್ನು ನೀವು ಅನುಭವಿಸಬೇಕಿಲ್ಲ.. | Chanakya Niti

ಕಾಲಾನಂತರದಲ್ಲಿ ಜನರ ಬದಲಾಗುತ್ತಿರುವ ಆಲೋಚನೆಗಳಲ್ಲಿ ನಿಜವಾದ ಪ್ರೀತಿ ಕಳೆದುಹೋಗುತ್ತಿದೆ. ಈ ಜಗತ್ತಿನಲ್ಲಿ ನಿಮ್ಮನ್ನು ಉತ್ಸಾಹದಿಂದ ಪ್ರೀತಿಸುವ…

ಹರಳೆಣ್ಣೆ ನೀರಿನಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ| Health Tips

ಹರಳೆಣ್ಣೆಯನ್ನು ಆರೋಗ್ಯ ಮತ್ತು ಸೌಂದರ್ಯಕ್ಕಾಗಿ ಬಳಸಲಾಗುತ್ತದೆ ಎಂಬುದು ತಿಳಿದಿದೆಯೇ. ಇದರಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಚರ್ಮ…