22.5 C
Bengaluru
Sunday, January 19, 2020

ಅಪ್ರಾಪ್ತೆ ಅಪಹರಿಸಿದ್ದ ಯುವಕನ ಬಂಧನ

Latest News

400 ಲೀಟರ್ ಹಾಲು ಮಣ್ಣು ಪಾಲು

ಬಸರಾಳು: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಲಾರಿ ಉರುಳಿಬಿದ್ದ ಪರಿಣಾಮ 300 ರಿಂದ 400 ಲೀಟರ್ ಹಾಲು ಮಣ್ಣುಪಾಲಾಗಿದೆ.ನಾಗಮಂಗಲ, ಬಸರಾಳು ಹೋಬಳಿಯ ವಿವಿಧ...

ಪಲ್ಸ್ ಪೋಲಿಯೋದಲ್ಲಿ ಶೇ.95ರಷ್ಟು ಸಾಧನೆ

ಮಂಡ್ಯ: ಜಿಲ್ಲಾದ್ಯಂತ ಭಾನುವಾರ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮೊದಲ ದಿನವೇ 1,18663 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗಿದೆ. ಜ.19ರಿಂದ 22ರವರೆಗೆ ಪಲ್ಸ್ ಪೋಲಿಯೋ...

ಬಲೆಯಲ್ಲಿ ಸಿಲುಕಿದ್ದ ಹೆಬ್ಬಾವು ರಕ್ಷಣೆ

ಕೆ.ಎಂ.ದೊಡ್ಡಿ: ಕೆರೆಯಲ್ಲಿ ಮೀನು ಹಿಡಿಯಲು ಹಾಕಿದ್ದ ಬಲೆಯಲ್ಲಿ ಹೆಬ್ಬಾವು ಸಿಲುಕಿ ಹಾಕಿಕೊಂಡಿದ್ದ ಹಿನ್ನೆಲೆಯಲ್ಲಿ ಮದ್ದೂರಿನ ಉರಗ ಸಂರಕ್ಷಕ ಮಾ.ನ. ಪ್ರಸನ್ನಕುಮಾರ್ ಹಾವನ್ನು ರಕ್ಷಿಸಿ...

ವೇಮನ ಒಬ್ಬ ಸಮಾಜ ಸುಧಾರಕ

ವಿಜಯಪುರ : ಜೀವನವೆಂಬ ಸಂತೆಯೊಳಗಿದ್ದುಕೊಂಡೇ ಸಂತನಾಗಿ ಬೆಳೆದ ಮಹಾಯೋಗಿ ವೇಮನ ಅವರು ಒಬ್ಬ ಸಮಾಜ ಸುಧಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು. ನಗರದ ಕಂದಗಲ್...

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಕಿಡ್ನಾೃಪ್ ಪ್ರಕರಣ ದಾಖಲು, ಆರೋಪಿ ನ್ಯಾಯಾಂಗ ವಶಕ್ಕೆ

ಪಾಂಡವಪುರ: ಕಾಲೇಜಿಗೆ ತೆರಳಿದ್ದ ಅಪ್ರಾಪ್ತೆಯನ್ನು ವಂಚಿಸಿ ಅಪಹರಿಸಿದ್ದ ಯುವಕನನ್ನು ಪೊಲೀಸರು ಬಂಧಿಸಿ ಆತನ ವಿರುದ್ಧ ಅಪಹರಣ ಪ್ರಕರಣ ದಾಖಲಿಸಿದ್ದಾರೆ.

ಮೈಸೂರಿನ ನಿವಾಸಿ ಸಯ್ಯದ್ ಜುನೇದ್ ಬಂಧಿತ ಆರೋಪಿ. ಪಾಂಡವಪುರ ಪಟ್ಟಣದ ಪೌರಕಾರ್ಮಿಕರ ಬೀದಿಯ ನಿವಾಸಿ ಅಯೂಬ್ ಖಾನ್ ಎಂಬವರ ಪುತ್ರಿ ಪಟ್ಟಣದ ನಿರ್ಮಲಾ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದು ನ.13 ರಂದು ಕಾಲೇಜಿಗೆ ತೆರಳುವುದಾಗಿ ಹೇಳಿ ಹೋದವಳು ಮನೆಗೆ ಹಿಂದಿರುಗಿರಲಿಲ್ಲ. ಆಕೆ ಕಾಲೇಜಿಗೂ ಹೋಗಿಲ್ಲ ಎಂಬ ವಿಚಾರ ತಿಳಿದು ಯುವತಿಯ ತಂದೆ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಈ ನಡುವೆ ಅಯೂಬ್ ಖಾನ್ ಅವರ ಮೊಬೈಲ್‌ಗೆ ಆಗಾಗ 9902022832 ನಂಬರ್‌ನಿಂದ ಮಿಸ್ಡ್ ಕಾಲ್ ಬರುತ್ತಿತ್ತು. ವಾಪಸ್ ಕರೆ ಮಾಡಿದರೆ ಕರೆ ಸ್ವೀಕರಿಸಿ ಯುವತಿಯ ಧ್ವನಿ ಕೇಳಿಸಿದ ನಂತರ ಕಟ್ ಮಾಡುತ್ತಿದ್ದರು. ಆ ನಂಬರನ್ನು ಹೊಂದಿರುವ ವ್ಯಕ್ತಿಯ ಮೇಲೆ ದೂರಿನಲ್ಲಿ ಸಂಶಯ ವ್ಯಕ್ತಪಡಿಸಿದ್ದರು.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ನಂಬರಿನ ವ್ಯಕ್ತಿಯ ಜಾಡು ಹಿಡಿದು ಆತನೇ ಅಪಹರಣ ಕೃತ್ಯದಲ್ಲಿ ಭಾಗಿಯಾಗಿರ ುವುದನ್ನು ಖಚಿತಪಡಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ. ಯುವತಿಯನ್ನು ರಕ್ಷಿಸಿ ಪಾಲಕರಿಗೆ ಒಪ್ಪಿಸಲಾಗಿದೆ.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...