More

    ತಾಲೂಕು ಕಚೇರಿಗೆ ಮುತ್ತಿಗೆ

    ಪಾಂಡವಪುರ: ಕಟಾವಿಗೆ ಬಂದಿರುವ ಭತ್ತ ಒಣಗುತ್ತಿರುವ ಹಿನ್ನೆಲೆಯಲ್ಲಿ ಕಟಾವಿಗೆ ಆಗಮಿಸಿರುವ ಕೃಷಿ ಕಾರ್ಮಿಕರನ್ನು ಕ್ವಾರಂಟೈನ್‌ಗೆ ಒಳಪಡಿಸದೆ ಕೋವಿಡ್-9 ಪರೀಕ್ಷೆಗೆ ಒಳಪಡಿಸಿ ಆರೋಗ್ಯವಂತ ಕಾರ್ಮಿಕರನ್ನು ಭತ್ತ ಕಟಾವಿಗೆ ಕಳುಹಿಸುವಂತೆ ಒತ್ತಾಯಿಸಿ ತಾಲೂಕು ರೈತಸಂಘದ ಕಾರ್ಯಕರ್ತರು ತಾಲೂಕು ಕಚೇರಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

    ಪಟ್ಟಣದ ಐದು ದೀಪ ವೃತ್ತದ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರನ್ನು ಉದ್ದೇಶಿಸಿ ಸಂಘದ ಅಧ್ಯಕ್ಷ ಎ.ಎಲ್.ಕೆಂಪೂಗೌಡ ಮಾತನಾಡಿ, ಈಗಾಗಲೇ ಭತ್ತ ಕಟಾವಿನ ಹಂತಕ್ಕೆ ತಲುಪಿ ತೆನೆಗಟ್ಟಿ ಉದುರುತ್ತಿದೆ. ಆದರೆ ತಾಲೂಕು ಆಡಳಿತ ಕಟಾವಿಗೆ ಬಂದಿರುವ ಕಾರ್ಮಿಕರನ್ನು ಕ್ವಾರಂಟೈನ್ ನೆಪದಲ್ಲಿ ಕೂಡಿ ಹಾಕಿದೆ. ಇದರಿಂದ ಭತ್ತ ಮಣ್ಣು ಪಾಲಾಗುವುದರಲ್ಲಿ ಸಂಶಯವಿಲ್ಲ. ಹೀಗಾಗಿ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಿ ನೆಗೆಟಿವ್ ವರದಿ ಬಂದಿರುವ ಕಾರ್ಮಿಕರನ್ನು ಭತ್ತದ ಕಟಾವಿಗೆ ಕಳುಹಿಸಲು ಕ್ರಮವಹಿಸಬೇಕು ಎಂದರು.

    ಸರ್ಕಾರ ಕೂಡಲೇ ಭತ್ತ ಖರೀದಿ ಕೇಂದ್ರಗಳನ್ನು ತೆರಯುವ ಮೂಲಕ ಭತ್ತಕ್ಕೆ ಬೆಂಬಲ ಬೆಲೆ ಘೋಷಿಸಿ ಖರೀದಿ ನಡೆಸಬೇಕು. ಇಲ್ಲವಾದಲ್ಲಿ ಭತ್ತದ ಲಾಭ ದಲ್ಲಾಳಿಗಳ ಪಾಲಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

    ಮನವಿ ಸ್ವೀಕರಿಸಿದ ತಹಸೀಲ್ದಾರ್ ಪ್ರಮೋದ್ ಎಲ್.ಪಾಟೀಲ್ ಮಾತನಾಡಿ, ಲಾಕ್‌ಡೌನ್ ಹಿನ್ನೆಲೆಯಲ್ಲಿ ಸರ್ಕಾರ ರೂಪಿಸಿರುವ ನಿಯಮಗಳನ್ನು ಪಾಲಿಸುತ್ತಿರುವ ಕಾರಣ ರೈತರಿಗೆ ತೊಂದರೆಯಾಗ್ತುದೆ. ಈ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

    ಜಿಪಂ ಮಾಜಿ ಸದಸ್ಯ ಕೆ.ಟಿ.ಗೋವಿಂದೇಗೌಡ, ಪಿಎಸ್‌ಎಸ್‌ಕೆ ಮಾಜಿ ಉಪಾಧ್ಯಕ್ಷ ಕೆನ್ನಾಳು ನಾಗರಾಜು, ಎಣ್ಣೆಹೊಳೆಕೊಪ್ಪಲು ಮಂಜು, ರಾಘು, ಚಿಕ್ಕಾಡೆ ವಿಜೇಂದ್ರ, ಹರವು ಪ್ರಕಾಶ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts