More

    ಕೆರೆ-ಕಟ್ಟೆ ತುಂಬಿದರೆ ಸಮೃದ್ಧ ಜೀವನ


    ಚನ್ನಗಿರಿ: ಕೆರೆ- ಕಟ್ಟೆಗಳು ತುಂಬಿದರೆ ನೀರಿನ ಅಂತರ್ಜಲ ಹೆಚ್ಚಾಗಿ ಕುಡಿಯುವ ನೀರಿನ ಸಮಸ್ಯೆ ತಪ್ಪುತ್ತದೆ. ಜತೆಗೆ, ರೈತರು, ಜನಸಾಮಾನ್ಯರ ಸಮೃದ್ಧ ಜೀವನಕ್ಕೆ ಅನುಕೂಲವಾಗುತ್ತದೆ ಎಂದು ಪಾಂಡೋಮಟ್ಟಿ ವಿರಕ್ತಮಠದ ಡಾ.ಗುರುಬಸವ ಶ್ರೀ ತಿಳಿಸಿದರು.

    ಪಾಂಡೋಮಟ್ಟಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧ್ದಿ ಯೋಜನೆ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಆಶ್ರಯದಲ್ಲಿ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಡಿ ಕೆರೆ ಪುನಶ್ಚೇತನಗೊಳಿಸಲಾದ 530ನೇ ಕೆರೆ ಹಸ್ತಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಭಾನುವಾರ ಮಾತನಾಡಿದರು.

    ಕೆರೆಗಳು ಗ್ರಾಮಕ್ಕೆ ಕಳೆ ಇದ್ದಂತೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ರಾಜ್ಯದ ಎಲ್ಲ ಗ್ರಾಮಗಳನ್ನು ವಿಶೇಷ ಅಸಕ್ತಿ ವಹಿಸಿ ಸಿಬ್ಬಂದಿ ಮೂಲಕ ಕೆರೆ ಅಭಿವೃದ್ಧಿ ಮಾಡುತ್ತಾ ಬಂದಿದ್ದಾರೆ. ಅದನ್ನು ಉಳಿಸಿಕೊಂಡು ಹೋಗಬೇಕಾದ ಜವಬ್ದಾರಿ ಗ್ರಾಮಸ್ಥರ ಮೇಲಿದೆ ಎಂದರು.

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಅನಂದ ಸುವರ್ಣ ಮಾತನಾಡಿ, ಪುನಶ್ಚೇತನಗೊಂಡ ಕೆರೆಯನ್ನು ಗ್ರಾಮದ ಜನರಿಗೆ ಹಸ್ತಾಂತರಿಸಲಾಗುತ್ತದೆ. ಅದರ ನಿರ್ವಹಣೆ ಗ್ರಾಮದವರಿಗೆ ನೀಡಲಾಗುತ್ತದೆ. ಇದರಿಂದ ಗ್ರಾಮದ ಜನರು ನೆಮ್ಮದಿಯಿಂದ ಜೀವನ ನಡೆಸಲು ಅನುಕೂಲವಾಗಲಿದೆ ಮತ್ತು ಜೀವ ಜಲದ ಸಂರಕ್ಷಣೆ ಮಾಡಿದಂತಾಗುತ್ತದೆ ಎಂದು ಹೇಳಿದರು.

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ, ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎ.ಬಿ. ಜಗದೀಶ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಎಸ್.ಡಿ. ಶಿವಕುಮಾರ್, ಪಿಡಿಒ ಶಿವಮೂರ್ತಿ, ಒಕ್ಕೂಟದ ಅಧ್ಯಕ್ಷೆ ಮಂಜುಳ, ಅಭಿವೃದ್ಧ್ದಿ ಯೋಜನಾಧಿಕಾರಿ ಪುಷ್ಪರಾಜ್, ಕೆರೆ ಅಭಿಯಂತರ ಹರೀಶ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts