ಬೆಂಗಳೂರು: ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ 21 ತಿಂಗಳ ಬಳಿಕ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಸೆ.19ರಂದು ಆರಂಭವಾಗಲಿರುವ ಪ್ರವಾಸಿ ಬಾಂಗ್ಲಾದೇಶ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಭಾರತ ತಂಡವನ್ನು ಭಾನುವಾರ ಹೆಸರಿಸಲಾಗಿದ್ದು, ಎಡಗೈ ವೇಗಿ ಯಶ್ ದಯಾಳ್ ಚೊಚ್ಚಲ ಬಾರಿಗೆ ಸ್ಥಾನ ಪಡೆದಿದ್ದಾರೆ.
ೆಬ್ರವರಿಯಲ್ಲಿ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ಟಿ20 ವಿಶ್ವಕಪ್ ಬಳಿಕ ವಿರಾಮದಲ್ಲಿರುವ ವೇಗಿ ಜಸ್‌ಪ್ರೀತ್ ಬುಮ್ರಾ ಟೆಸ್ಟ್‌ಗೆ ಕಂಬ್ಯಾಕ್ ಮಾಡಿದ್ದು, ಭೀಕರ ಕಾರು ರಸ್ತೆ ಅಪಘಾತದಿಂದ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಿರುವ ಪಂತ್ ಮೊದಲ ಬಾರಿಗೆ ಟೆಸ್ಟ್ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಸ್ತುತ ದುಲೀಪ್ ಟ್ರೋಫಿಯ ಮೊದಲ ಸುತ್ತಿನಲ್ಲಿ ಗಮನ ಸೆಳೆದಿರುವ ಎಡಗೈ ವೇಗಿ ಯಶ್ ದಯಾಳ್ ಏಕೈಕ ಹೊಸಮುಖ ಎನಿಸಿದ್ದಾರೆ. ಅನುಭವಿ ವೇಗಿ ಮೊಹಮದ್ ಶಮಿ ಪುನರಾಗಮನ ಇನ್ನಷ್ಟು ವಿಳಂಬವಾಗಿದೆ.
ಕನ್ನಡಿಗ ಕೆಎಲ್ ರಾಹುಲ್ ಅವರನ್ನು ಟೆಸ್ಟ್ ತಂಡದಲ್ಲಿ ಬ್ಯಾಟರ್ ಆಗಿ ಹೆಸರಿಸಲಾಗಿದ್ದು, ಪಂತ್ ಹಾಗೂ ಜುರೆಲ್ ವಿಕೆಟ್ ಕೀಪರ್‌ಗಳಾಗಿದ್ದಾರೆ.
ತಂಡ: ರೋಹಿತ್ ಶರ್ಮ (ನಾಯಕ), ಶುಭಮಾನ್ ಗಿಲ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ರ್ಸ್ರಾಜ್ ಖಾನ್, ರಿಷಭ್ ಪಂತ್ (ವಿ.ಕೀ), ಧ್ರುವ ಜುರೆಲ್ (ವಿ.ಕೀ), ಆರ್.ಅಶ್ವಿನ್., ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್‌ಪ್ರೀತ್ ಬುಮ್ರಾ, ಸಿರಾಜ್, ಆಕಾಶ್ ದೀಪ್ ಹಾಗೂ ಯಶ್ ದಯಾಳ್.