ಸಿನಿಮಾ

ಪ್ರಧಾನಿ ಮೋದಿ ಕಾಲು ಮುಟ್ಟಿ ನಮಸ್ಕರಿಸಿದ ಪಪುವಾ ನ್ಯೂ ಗಿನಿ ಪಿಎಂ ಜೇಮ್ಸ್​ ಮರಾಪೆ

ಪಪುವಾ ನ್ಯೂಗಿನಿಯಾ: ಭಾರತ-ಪೆಸಿಫಿಕ್ ದ್ವೀಪಗಳ ಸಹಕಾರದ ಮೂರನೇ ಶೃಂಗಸಭೆಯಲ್ಲಿ ಭಾಗವಹಿಸಲು ಪಪುವಾ ನ್ಯೂಗಿನಿಯಾಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶೇಷ ಸ್ವಾಗತ ದೊರೆತಿದೆ.

ಪೆಸಿಫಿಕ್ ದ್ವೀಪ ರಾಷ್ಟ್ರಕ್ಕೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿ ಅವರು ಪಾತ್ರರಾಗಿರುವುದು ವಿಶೇಷವಾಗಿದೆ.

ಸ್ಥಳೀಯ ಕಾಲಮಾನದ ಪ್ರಕಾರ ರಾತ್ರಿ ಸುಮಾರು 10:00 ಘಂಟೆಗೆ ಆಗಮಿಸಿದ ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ ದೊರೆತ್ತಿದ್ದು ಈ ವೇಳೆ ಪಪುವಾ ನ್ಯೂಗಿನಿಯಾದ ಪ್ರಧಾನಿ ಜೇಮ್ಸ್ ಮರಾಪೆ ಅವರ ಪಾದಗಳನ್ನು ಮುಟ್ಟಿ ನಮಸ್ಕರಿಸಿದ್ದು ವಿಶೇಷವಾಗಿತ್ತು.

ಈ ಕುರಿತು ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ ನಾನು ಯಾವಾಗಲೂ ನೆನಪಿಟ್ಟುಕೊಳ್ಳುವಂತಹ ಸ್ವಾಗತ ಇದಾಗಿದೆ. ನನ್ನ ಭೇಟಿಯ ಸಮಯದಲ್ಲಿ ನಾನು ಈ ಮಹಾನ್​ ರಾಷ್ಟ್ರದೊಂದಿಗೆ ಭಾರತದ ಭಾಂದವ್ಯವನ್ನುಹೆಚ್ಚಿಸಲು ಎದುರು ನೋಡುತ್ತಿದ್ದೇನೆ ಎಂದು ಹೇಳುತ್ತಾ​ ಜೇಮ್ಸ್ ಮರಾಪೆ ಅವರಿಗೆ ಕೃತಜ್ಞತೆಗಳನ್ನು ತಿಳಿಸಿದ್ದಾರೆ.

Latest Posts

ಲೈಫ್‌ಸ್ಟೈಲ್