ಅಖಂಡ ಭಾರತ ನಿರ್ಮಾಣ ಸಂಕಲ್ಪ : ಕಾಣಿಯೂರಲ್ಲಿ ಪುನೀತ್ ಅತ್ತಾವರ ಕರೆ

kdb_august.13_6
Published on

ವಿಜಯವಾಣಿ ಸುದ್ದಿಜಾಲ ಕಡಬ

ಅಖಂಡವಾದ ನಮ್ಮ ಕನಸಿನ ಭಾರತ ಮತ್ತೊಮ್ಮೆ ಎದ್ದು ನಿಲ್ಲಬೇಕು. ಮತ್ತೊಮ್ಮೆ ಅಖಂಡ ಭಾರತ ನಿರ್ಮಾಣವಾಗಬೇಕು. ನಮ್ಮ ದೇಶ, ಧರ್ಮ, ಮಾತೆಯರ, ಭಗಿನಿಯರ, ಗೋವುಗಳ ರಕ್ಷಣೆಗಾಗಿ ನಾವೆಲ್ಲರೂ ಸಂಕಲ್ಪ ಮಾಡಬೇಕಾಗಿದೆ ಎಂದು ಬಜರಂಗದಳ ಮಂಗಳೂರು ವಿಭಾಗ ಸಂಯೋಜಕ ಪುನೀತ್ ಅತ್ತಾವರ ಹೇಳಿದರು.

ವಿಶ್ವ ಹಿಂದು ಪರಿಷತ್, ಬಜರಂಗದಳ ಪುತ್ತೂರು ಗ್ರಾಮಾಂತರ ಬೆಳಂದೂರು ಖಂಡ ಸಮಿತಿ, ಕಾಣಿಯೂರು, ಚಾರ್ವಾಕ, ಪುಣ್ಚತ್ತಾರು ಘಟಕ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನಾಚರಣೆ ಪ್ರಯುಕ್ತ ಬೃಹತ್ ಪಂಜಿನ ಮೆರವಣಿಗೆ ಬಳಿಕ ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ದಿಕ್ಸೂಚಿ ಭಾಷಣ ಮಾಡಿದರು.

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಮೊಕ್ತೇಸರ ಜನೇಶ್ ಭಟ್ ಬರೆಪ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿ ಅಧ್ಯಕ್ಷ ಪುಟ್ಟಣ್ಣ ಗೌಡ ಮುಗರಂಜ ಮೆರವಣಿಗೆಗೆ ಚಾಲನೆ ನೀಡಿದರು. ಕಾಣಿಯೂರು ಮಠದ ವ್ಯವಸ್ಥಾಪಕ ಶ್ರೀನಿಧಿ ಆಚಾರ್ ಭಾರತಾಂಬೆಗೆ ಪುಷ್ಪಾರ್ಚನೆ ಮಾಡಿದರು.

ವಿಶ್ವ ಹಿಂದು ಪರಿಷತ್ ಪುತ್ತೂರು ಗ್ರಾಮಾಂತರ ಪ್ರಖಂಡ ಅಧ್ಯಕ್ಷ ಜಯಂತ್ ಕಂಬಲತ್ತಡ್ಡ, ಹಿಂದು ಜಾಗರಣ ವೇದಿಕೆ ಜಿಲ್ಲಾ ಸಂಯೋಜಕ ಮೋಹನ್ ದಾಸ್ ರೈ ಬಲ್ಕಾಡಿ, ವಿಶ್ವ ಹಿಂದು ಪರಿಷತ್ ಕಡಬ ತಾಲೂಕಿನ ಸಂಯೋಜಕ ಅಶ್ವಿತ್ ಖಂಡಿಗ, ಕಾಣಿಯೂರು ಜಾತ್ರೋತ್ಸವ ಸೇವಾ ಸಮಿತಿ ಅಧ್ಯಕ್ಷ ರಮೇಶ್ ಮಾದೋಡಿ, ಅಗಳಿ ಶ್ರೀ ಸದಾಶಿವ ಯುವಕ ಮಂಡಲ ಕಾರ್ಯದರ್ಶಿ ಗಣೇಶ್ ಅಗಳಿ, ಕಾಣಿಯೂರು ಗಣೇಶೋತ್ಸವ ಫ್ರೆಂಡ್ಸ್‌ನ ರವೀಂದ್ರ ಅನಿಲ, ಕಾಯಿಮಣ ಜೋಕಾಲಿ ಕೃಷ್ಣಪುರ ಬಳಗದ ಅಧ್ಯಕ್ಷ ಚಂದ್ರಶೇಖರ ಮುಂಡಾಳ, ದೇವರಗುಡ್ಡೆ ಶ್ರೀ ವೀರಾಂಜನೇಯ ಗೆಳೆಯರ ಬಳಗದ ಗೌರವಾಧ್ಯಕ್ಷ ಶ್ರೀಧರ ಗೌಡ ಕೊಯಕ್ಕುಡೆ, ಕೊಡಿಮಾರು ಗೆಳೆಯರ ಬಳಗದ ಅಧ್ಯಕ್ಷ ಬಾಲಚಂದ್ರ ಅಬೀರ, ಚಾರ್ವಾಕ ಕಪಿಲೇಶ್ವರ ಸಿಂಗಾರಿ ಮೇಳದ ಸಂಚಾಲಕ ಗೌತಮ್ ಕಜೆ, ಕೆಲೆಂಬಿರಿ ಯುವಶಕ್ತಿ ಫ್ರೆಂಡ್ಸ್ ಮಾಜಿ ಅಧ್ಯಕ್ಷ ಜಗದೀಶ್ ಉಪಸ್ಥಿತರಿದ್ದರು.

ನಿವೃತ್ತ ಸೈನಿಕ ರಾಮಕೃಷ್ಣ ಮರಕಡ ಅವರನ್ನು ಸನ್ಮಾನಿಸಲಾಯಿತು. ಪದ್ಮಯ್ಯ ಗೌಡ ಅನಿಲ ಸ್ವಾಗತಿಸಿದರು. ಜಯಂತ ಅಬೀರ ವಂದಿಸಿದರು. ಪರಮೇಶ್ವರ ಅನಿಲ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net