ಪರಪ್ಪನ ಅಗ್ರಹಾರದಲ್ಲಿ 22 ಕೈದಿಗಳಿಗೆ ಕರೊನಾ

Parappana Agrahara
Published on

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೂ ಕರೊನಾ ಸೋಂಕು ವ್ಯಾಪಿಸಿದೆ. 22 ವಿಚಾರಣಾಧೀನ ಕೈದಿಗಳಲ್ಲಿ ಬುಧವಾರ ಸೋಂಕು ಕಾಣಿಸಿಕೊಂಡಿದೆ. ಆದರೆ, ಇವರ ಸೋಂಕಿನ ಮೂಲ ಕಂಡು ಬಾರದಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.

ಮುಂಜಾಗ್ರತಾ ಕ್ರಮವಾಗಿ 2 ತಿಂಗಳ ಅವಧಿಯಲ್ಲಿ ಜೈಲು ಸೇರಿದ ಆರೋಪಿಗಳಿಗೆ ಕ್ವಾರಂಟೈನ್​ಗೆ ಒಳಪಡಿಸಲಾಗಿದ್ದು, ವೈದ್ಯಕೀಯ ವರದಿ ನಿರೀಕ್ಷಿಸಲಾಗಿದೆ. ಜೈಲಿನಲ್ಲಿ ಸೋಂಕು ಹರಡುವಿಕೆ ತಡೆಗೆ ಮುನ್ನಚ್ಚರಿಕೆ ವಹಿಸಲಾಗಿದೆ ಎಂದು ರಾಜ್ಯ ಬಂದೀಖಾನೆ ಇಲಾಖೆಯ ಡಿಜಿಪಿ ಅಲೋಕ್ ಮೋಹನ್ ತಿಳಿಸಿದ್ದಾರೆ.

ನಿಮ್ಹಾನ್ಸ್​ನಲ್ಲಿ 5 ಸಿಬ್ಬಂದಿಗೆ ಸೋಂಕು: ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಮತ್ತೆ ಐದು ಸಿಬ್ಬಂದಿಗೆ ಸೋಂಕು ತಗಲಿದೆ. ಈವರೆಗೆ ಒಟ್ಟು 15 ಸಿಬ್ಬಂದಿ ಸೋಂಕಿಗೆ ಒಳಗಾಗಿದ್ದಾರೆ. ಸಾಮಾನ್ಯ ಚಿಕಿತ್ಸಾ ವಿಭಾಗದ ಸ್ಥಾನಿಕ ವೈದ್ಯಾಧಿಕಾರಿ, ಸ್ಟಾಫ್ ನರ್ಸ್, ಸ್ವಚ್ಛತಾ ನೌಕರ, ಲ್ಯಾಬ್​ನ ಡೇಟಾ ಆಪರೇಟರ್, ರಕ್ತನಿಧಿ ಕೇಂದ್ರದ ಸ್ಟಾಫ್ ನರ್ಸ್​ಗೆ ಸೋಂಕು ತಗುಲಿದೆ. ತುರ್ತು ಚಿಕಿತ್ಸೆ ಹಾಗೂ ಸಾಮಾನ್ಯ ಚಿಕಿತ್ಸಾ ವಿಭಾಗವನ್ನು ಪಕ್ಕದ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net