ಪರಶುರಾಮಪುರ: ಕಾಂಗ್ರೆಸ್ ಪಕ್ಷ ನಡೆಸಿದ ಸ್ವಾತಂತ್ರ್ಯ ಚಳವಳಿ ಅವಿಸ್ಮರಣೀಯವಾಗಿದ್ದು, ಪಕ್ಷದ ವಿರುದ್ಧ ಸುಳ್ಳು ಪ್ರಚಾರವನ್ನು ಜನ ನಂಬುವುದಿಲ್ಲ ಎಂದು ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಹೇಳಿದರು.
ಸ್ವಾತಂತ್ರೃ ದಿನಾಚರಣೆ ಅಂಗವಾಗಿ ಮೋದೂರು ಗ್ರಾಮದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.
ಇತಿಹಾಸ ತಿರುಚಲು ಬಿಜೆಪಿ ಹವಣಿಸುತ್ತಿದೆ. ಇದು ಖಂಡನೀಯ. ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಆರಂಭಿಸಿದ ಪಾದಯಾತ್ರೆ ಮುಂಬರುವ ಎಲ್ಲ ಚುನಾವಣೆಗಳಿಗೆ ದಿಕ್ಸೂಚಿ ಆಗಲಿದೆ ಎಂದರು.
ಹಿರಿಯ ಮುಖಂಡ ಪ್ರಭುದೇವ, ಕೆಪಿಸಿಸಿ ಸದಸ್ಯ ವೀರಭದ್ರಬಾಬು, ಜಿಪಂ ಮಾಜಿ ಸದಸ್ಯರಾದ ಬಾಬುರೆಡ್ಡಿ, ಜಿಪಂ ಮಾಜಿ ಅಧ್ಯಕ್ಷ ಟಿ.ರವಿಕುಮಾರ, ಮಾಜಿ ಸದಸ್ಯ ಬಿ.ಪಿ.ಪ್ರಕಾಶಮೂರ್ತಿ, ನಗರಸಭೆ ಅಧ್ಯಕ್ಷೆ ಸುಮಕ್ಕ, ಮಹಿಳಾ ಕಾಂಗ್ರೆಸ್ ತಾಲೂಕು ಅಧ್ಯಕ್ಷೆ ಗೀತಾಬಾಯಿ, ಬ್ಲಾಕ್ ಅಧ್ಯಕ್ಷ ತಿಪ್ಪೇಸ್ವಾಮಿ, ಯುವ ಘಟಕದ ಅಧ್ಯಕ್ಷ ಸೂರನಹಳ್ಳಿ ಶಿವಕುಮಾರ, ಗ್ರಾಪಂ ಅಧ್ಯಕ್ಷೆ ಗೌರಮ್ಮ, ಉಪಾಧ್ಯಕ್ಷ ಹೇಮಂತರಾಜು, ಕಿಸಾನ್ ಘಟಕದ ಜಿಲ್ಲಾಧ್ಯಕ್ಷ ಎ.ನಾಗರಾಜು, ಎಪಿಎಂಸಿ ಮಾಜಿ ಸದಸ್ಯ ಎಸ್.ಚನ್ನಕೇಶವ ಇದ್ದರು.
ಪಕ್ಷದ ತತ್ವ, ಸಿದ್ಧಾಂತಗಳನ್ನು ಜನರಿಗೆ ತಿಳಿಸಿ ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಲಾಗುತ್ತಿದೆ. ಬಿಜೆಪಿ ಹುಟ್ಟು ಹಾಕುತ್ತಿರುವ ಕೋಮು ದ್ವೇಷ ಅಳಿಸಲಾಗುತ್ತಿದೆ.
ಟಿ.ರಘುಮೂರ್ತಿ, ಶಾಸಕ