ದಾಖಲಾತಿ ಆಂದೋಲನ

ಪರಶುರಾಮಪುರ: ಸರ್ಕಾರ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ಯೋಜನೆ ಜಾರಿಗೊಳಿಸುವ ಮೂಲಕ ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಒತ್ತು ನೀಡುತ್ತಿದೆ ಎಂದು ಸಹಿಪ್ರಾ ಶಾಲೆ ಮುಖ್ಯಶಿಕ್ಷಕ ಟಿ.ಆರ್. ತಿಪ್ಪೇಸ್ವಾಮಿ ತಿಳಿಸಿದರು.

ಸಿದ್ದೇಶ್ವರನದುರ್ಗದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ಶನಿವಾರ ಆಯೋಜಿಸಿದ್ದ ದಾಖಲಾತಿ ಆಂದೋಲನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. ಗ್ರಾಮದಲ್ಲಿ ಜಾಗೃತಿ ಜಾಥಾ ಆಂದೋಲನ ನಡೆಯಿತು. ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳ ಪಾಲಕರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *