More

    ಬೆಳಗೆರೆ ಗ್ರಾಪಂ ಮಟ್ಟದ ಟಾಸ್ಕ್‌ಪೋರ್ಸ್ ಸಭೆ

    ಪರಶುರಾಮಪುರ: ಕರೊನಾ ವೈರಸ್ ತಡೆಗಾಗಿ ಅಧಿಕಾರಿಗಳು 24 ತಾಸೂ ಹಳ್ಳಿಗಳಲ್ಲಿ ಶುದ್ಧ ಕುಡಿವ ನೀರು, ಸೂಕ್ತ ವೈದ್ಯಕೀಯ ನೆರವು ಹಾಗೂ ಗ್ರಾಮಗಳ ನೈರ್ಮಲ್ಯಕ್ಕೆ ಒತ್ತು ನೀಡಬೇಕು ಎಂದು ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ತಿಳಿಸಿದರು.

    ಬೆಳಗೆರೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಬೆಳಗೆರೆ ಗ್ರಾಪಂ ಮಟ್ಟದ ಕೋವಿಡ್-19ರ ಟಾಸ್ಕ್‌ಫೋರ್ಸ್ ಸಭೆಯಲ್ಲಿ ಮಾತನಾಡಿದರು.

    ಕಂದಾಯ, ಆರೋಗ್ಯ, ಪಂಚಾಯತ್‌ರಾಜ್, ಎಲ್ಲ ಅನುಷ್ಠಾನ ಅಧಿಕಾರಿಗಳು ಗ್ರಾಮಗಳಿಗೆ ನಿಯಮಿತವಾಗಿ ಭೇಟಿ ನೀಡಬೇಕು. ಹಳ್ಳಿಗರ ಜತೆ ನಿಕಟ ಸಂಪರ್ಕ ಇಟ್ಟುಕೊಂಡು ಬಾಧಿತರನ್ನು ಜಿಲ್ಲಾಡಳಿತಕ್ಕೆ ಒಪ್ಪಿಸಿ ಕ್ಷಿಪ್ರಗತಿಯಲ್ಲಿ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

    ಜಿಪಂ ಸದಸ್ಯ ಪ್ರಕಾಶಮೂರ್ತಿ ಮಾತನಾಡಿ, ತಾಲೂಕು ವ್ಯಾಪ್ತಿಯಲ್ಲಿ ಕರೊನಾ ಹರಡದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲು ಶಾಸಕರು ಹಳ್ಳಿಗಳಿಗೆ ಭೇಟಿ ನೀಡಿ, ಸ್ಥಿತಿಗತಿ ಪಡೆಯುತ್ತಿದ್ದಾರೆ ಎಂದರು.

    ಗ್ರಾಮದ ಆರೋಗ್ಯ ಕಾರ್ಯಕರ್ತರು, ಗ್ರಾಪಂ ಸದಸ್ಯರು, ಗ್ರಾಮಸ್ಥರೊಂದಿಗೆ ಸಾಮಾಜಿಕ ದೈಹಿಕ ಅಂತರ ಇಟ್ಟುಕೊಂಡು ಮಾಹಿತಿ ಪಡೆದರು.

    ತಾಪಂ ಸದಸ್ಯರಾದ ಜಿ.ವೀರೇಶ, ಅಂಜಿನಪ್ಪ, ಗ್ರಾಪಂ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷೆ ಮಹದೇವಮ್ಮ, ಸದಸ್ಯ ಕೆ.ಟಿ.ನಿಜಲಿಂಗಪ್ಪ, ಪಿಡಿಒ ಗುಂಡಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts