ದೇಸಿ ಪರಂಪರೆ ಮಕ್ಕಳಲ್ಲಿ ಬಿತ್ತಿ

ಪರಶುರಾಮಪುರ: ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯ ಹಾಗೂ ದೇಸಿ ಪರಂಪರೆ ಬಿತ್ತುವ ಕಾರ್ಯ ಪ್ರತಿಯೊಬ್ಬರು ಮಾಡಬೇಕು. ಈ ಕೆಲಸವನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಮಾಡುತ್ತಿದೆ ಎಂದು ಜಿಲ್ಲಾ ಗೈಡ್ಸ್ ಆಯುಕ್ತೆ ಸುನಿತಾ ಮಲ್ಲಿಕಾರ್ಜುನ ತಿಳಿಸಿದರು.

ತಾಲೂಕು ಸ್ಕೌಟ್ಸ್ ಅಂಡ್ ಗೈಡ್ಸ್, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ದುರ್ಗಾವರದ ಸಹಿಪ್ರಾ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆ ಯೋಜನಾ ಪುಸ್ತಕ ಬಿಡುಗಡೆ ಹಾಗೂ ವನ ಮಹೋತ್ಸವದಲ್ಲಿ ಮಾತನಾಡಿದರು.

ಜಿಲ್ಲೆಯ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ ಆರಂಭಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳು ಸಹಕಾರ ನೀಡಿದ್ದಾರೆ ಎಂದು ಸ್ಮರಿಸಿದರು.

ಗ್ರಾಪಂ ಅಧ್ಯಕ್ಷ ರಂಗಸ್ವಾಮಿ, ಬಿಇಒ ಸಿ.ಎಸ್.ವೆಂಕಟೇಶಪ್ಪ, ಜಿಲ್ಲಾ ತರಬೇತಿ ಸಂಸ್ಥೆ ಆಯುಕ್ತ ಮಹೇಶ, ಸ್ಥಳೀಯ ಘಟಕದ ಕಾರ್ಯದರ್ಶಿ ಒ.ನಾಗರಾಜು, ಮುಖ್ಯಶಿಕ್ಷಕ ಚನ್ನಪ್ಪ ಇತರರಿದ್ದರು.

Leave a Reply

Your email address will not be published. Required fields are marked *