ಪರಶುರಾಮಪುರ: ಸರ್ಕಾರ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿದೆ ಎಂದು ಕ್ಯಾದಿಗುಂಟೆ ಸ.ಹಿ.ಪ್ರಾ. ಶಾಲೆ ಬಡ್ತಿಮುಖ್ಯಶಿಕ್ಷಕ ಪಿ.ಎಸ್.ಸುದರ್ಶನಬಾಬು ತಿಳಿಸಿದರು.
ಶಿಕ್ಷಣ ಇಲಾಖೆ, ಶಾಲಾ ಸಮಿತಿಯಿಂದ ಕ್ಯಾದಿಗುಂಟೆ ಸರ್ಕಾರಿ ಹಿರಿಯ ಪ್ರಾಥ ಮಿಕ ಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಹೆಣ್ಣುಮಕ್ಕಳ ಸಂಖ್ಯೆ ಕ್ಷೀಣಿಸುತ್ತಿದೆ. ಇದರ ತಡೆಗೆ ಸರ್ಕಾರ ಮಹಿಳೆಯರ ಶಿಕ್ಷಣಕ್ಕೆ ಒತ್ತು ನೀಡಿದೆ.ಅವರ ಜೀವನಭದ್ರತೆಗೆ ಆರ್ಥಿಕ ನೆರವನ್ನೂ ನೀಡುತ್ತಿದೆ ಎಂದರು.
ಶಿಕ್ಷಕಿ ಕೆ. ಚಂದ್ರಮ್ಮ ಮಾತನಾಡಿ, ಹೆಣ್ಣು ಮಕ್ಕಳ ರಕ್ಷಣೆಗೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು. ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ಹೆಣ್ಣು ಮಕ್ಕಳ ರಕ್ಷಣೆ ಬಗ್ಗೆ ವಿವಿಧ ಪ್ರಾತ್ಯಕ್ಷಿಕೆ ನೀಡಿದರು. ಶಿಕ್ಷಕರಾದ ನಾಗರತ್ನಾ, ಕೆ.ಚಂದ್ರಮ್ಮ, ಪುಷ್ಪಾವತಿ, ಮಂಜುಳಾ, ವಿ.ಸಿ.ಕೆಂಚಣ್ಣ ಇತರರಿದ್ದರು.