More

    ಸ.ಪ್ರೌಢಶಾಲೆ ಸುವರ್ಣ ಮಹೋತ್ಸವ

    ಪರಶುರಾಮಪುರ: ಸಮೀಪದ ಪಿ.ಮಹದೇವಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ಶಾಲೆ ಸುವರ್ಣ ಮಹೋತ್ಸವ ಸಂಭ್ರಮ ಸಡಗರದಿಂದ ನೆರವೇರಿತು.

    ಹಳೇ ವಿದ್ಯಾರ್ಥಿಗಳ ಸಂಘ ಹಾಗೂ ಸ್ಥಳೀಯ ಆಡಳಿತದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.

    ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ, ಹಿತೇಶ್ ಹಾಸ್ಯೋತ್ಸವ ಸಂಜೆ ನಡೆಸಿಕೊಟ್ಟರು. ಮಧ್ಯಾಹ್ನ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿತ್ತು. ವಿವಿಧ ಜನಪದ ಕಲಾ ತಂಡಗಳ ಮೂಲಕ ಗ್ರಾಮದಲ್ಲಿ ಮೆರವಣಿಗೆ ನಡೆಸಲಾಯಿತು.

    ನಿವೃತ್ತ ಉಪನ್ಯಾಸಕ ಕೆ.ಎಸ್.ಈಶ್ವರಯ್ಯ ಮಾತನಾಡಿ, ಮುತ್ಸದ್ದಿ ರಾಜಕಾರಣಿ ದಿವಂಗತ ಬಿ.ಎಲ್.ಗೌಡರ ಸಹಕಾರದಿಂದ 54 ವರ್ಷದ ಹಿಂದೆ ಗ್ರಾಮದಲ್ಲಿ ಶಾಲೆ ಆರಂಭಿಸಲಾಯಿತು. ಇಲ್ಲಿ ಶಿಕ್ಷಣ ಪಡೆದವರು ಉನ್ನತ ಹುದ್ದೆಗಳಲ್ಲಿದ್ದಾರೆ ಎಂದರು.

    ನಿವೃತ್ತ ಶಿಕ್ಷಕ ನಾಗರಾಜರಾವ್ ಮಾತನಾಡಿ, ಆಧುನಿಕ ಕಾಲಘಟ್ಟದ ಮಕ್ಕಳಿಗೆ ಸಾಮಾಜಿಕ ಬದಲಾವಣೆಗೆ ಅನುಗುಣವಾಗಿ ಶಿಕ್ಷಣದಲ್ಲಿ ತಂತ್ರಜ್ಞಾನ ಅಳವಡಿಸಿ ಬೋಧಿಸಬೇಕು ಎಂದರು.

    ಕಸಾಪ ಆಂಧ್ರ ಗಡಿನಾಡ ಘಟಕದ ನಿಕಟಪೂರ್ವ ಅಧ್ಯಕ್ಷ ಎಚ್.ರಾಮಚಂದ್ರಪ್ಪ ಮಾತನಾಡಿ, ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳ ಶಾಲಾ ಸಮಿತಿ, ಶಿಕ್ಷಕರು ಹಾಗೂ ಪೋಷಕರು ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ತಿಳಿಸಿದರು.

    ಹಳೇ ವಿದ್ಯಾರ್ಥಿಗಳ ಸಂಘದ ಗೌರವಾಧ್ಯಕ್ಷ ಆರ್.ಮುರುಗೇಂದ್ರಪ್ಪ, ಅಧ್ಯಕ್ಷ ಸಿ.ವೆಂಕಟರಮಣಪ್ಪ, ಗುರುಮೂರ್ತಿ, ಮುಖ್ಯ ಶಿಕ್ಷಕರಾದ ಎ.ವೀರಣ್ಣ, ಜಿ.ದಾಸಪ್ಪ, ನಿವೃತ್ತ ಮುಖ್ಯಶಿಕ್ಷಕರಾದ ಡಿ.ಜಿ.ಯಲ್ಲಪ್ಪ, ಈ.ಡಿ.ಹನುಮಂತರಾಯಪ್ಪ, ಪ್ರಾಚಾರ್ಯ ಡಿ.ತಿಮ್ಮಯ್ಯ, ಗ್ರಾಪಂ ಅಧ್ಯಕ್ಷೆ ಸರೋಜಾ, ಉಪಾಧ್ಯಕ್ಷೆ ವಿಜಯಲಕ್ಷ್ಮಿ, ಶಾಲಾ ಸಮಿತಿ ಅಧ್ಯಕ್ಷ ಟಿ.ಶಿವಪ್ಪ, ಎಂ.ಜಿ.ಮಂಜುನಾಥ, ಜಿಪಂ ಮಾಜಿ ಸದಸ್ಯ ಪಿ.ಜಯಪ್ರಕಾಶ, ದಾನಿಗಳಾದ ನಾರಾಯಣರೆಡ್ಡಿ, ಬಿ.ಎಲ್.ರಾಜೇಶ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts