More

  ಜವಾಬ್ದಾರಿ ಅರಿತು ಕೆಲಸ ಮಾಡಿ

  ಪರಶುರಾಮಪುರ: ಗ್ರಾಮೀಣರಿಗೆ ಸೌಕರ್ಯಗಳನ್ನು ಕಲ್ಪಿಸಿಕೊಡುವಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಪಾತ್ರ ಅತಿ ಮುಖ್ಯವಾಗಿದೆ ಎಂದು ಗ್ರಾಪಂ ಅಧ್ಯಕ್ಷ ಒ.ಬೈಲಪ್ಪ ತಿಳಿಸಿದರು.

  ಸಮೀಪದ ತಿಮ್ಮಣ್ಣನಾಯಕನಕೋಟೆ ಗ್ರಾಪಂ ಕಚೇರಿಯಲ್ಲಿ ಈಚೆಗೆ ಆಯೋಜಿಸಿದ್ದ ಸಾಮಾನ್ಯ ಸಭೆಯಲ್ಲಿ ಮಾತನಾಡಿ, ಸರ್ಕಾರದ ಅನುದಾನದಿಂದ ಗ್ರಾಮೀಣ ಪ್ರದೇಶದ ಸಮಗ್ರ ಅಭಿವೃದ್ಧಿ ಮಾಡಲಾಗುತ್ತಿದೆ ಎಂದರು.

  ಸದಸ್ಯರು ಜನಸೇವೆಯೇ ಮುಖ್ಯ ಗುರಿ ಮಾಡಿಕೊಳ್ಳಬೇಕು. ಅನುದಾನ ಸದ್ಬಳಕೆ ಹಾಗೂ ಗುಣಮಟ್ಟದ ಕಾಮಗಾರಿಯತ್ತ ಗಮನಹರಿಸಬೇಕು. ತಮ್ಮ ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಿದರೆ ಹಳ್ಳಿಗಳು ಅಭಿವೃದ್ಧಿ ಆಗಲಿವೆ ಎಂದು ತಿಳಿಸಿದರು.

  ತಾಪಂ ಸದಸ್ಯ ಕರಡಪ್ಪ ಮಾತನಾಡಿ, ಜನಪ್ರತಿನಿಧಿಗಳು ಜವಾಬ್ದಾರಿ ಅರಿತು ಕೆಲಸ ಮಾಡಿದರೆ ಸಮಾಜದ ಏಳಿಗೆ ಸಾಧ್ಯ ಎಂದರು.
  ಅಂಗವಿಕಲರಿಗೆ ಸಲಕರಣೆಗಳನ್ನು ವಿತರಿಸಲಾಯಿತು. ಜನಪ್ರತಿನಿಧಿಗಳನ್ನು ಗೌರವಿಸಲಾಯಿತು. ಉಪಾಧ್ಯಕ್ಷೆ ಶಿವಮ್ಮ, ಸದಸ್ಯರಾದ ನಾಗೇಂದ್ರಪ್ಪ, ಗೀತಾವಾಣಿ, ಭಾಗ್ಯಾ, ಆರ್.ಟಿ.ನಿಂಗಣ್ಣ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts