More

    ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

    ಪರಶುರಾಮಪುರ: ಕರೊನಾ ವೈರಸ್ ಹರಡದಂತೆ ಪ್ರತಿಯೊಬ್ಬರೂ ಮುಂಜಾಗ್ರತಾ ಕ್ರಮ ಪಾಲನೆ ಮಾಡುವುದೇ ನಮ್ಮ ಗುರಿಯಾಗಬೇಕು ಎಂದು ವಿಜ್ಞಾನ ಶಿಕ್ಷಕ ನಾಗಗೊಂಡನಹಳ್ಳಿ ನಾಗರಾಜು ತಿಳಿಸಿದರು.

    ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲಾ ಸಮಿತಿ, ವಿಜ್ಞಾನ ಶಿಕ್ಷಕರ ಕ್ಲಬ್ ವತಿಯಿಂದ ಸಮೀಪದ ಕರೀಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾವರಣದಲ್ಲಿ ಆಯೋಜಿಸಿದ್ದ ಕರೊನಾ ವೈರಸ್ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಕರೊನಾ ವೈರಸ್ ಸೋಂಕಿತ ವ್ಯಕ್ತಿಗೆ ಜ್ವರ, ಕೆಮ್ಮು, ನೆಗಡಿ, ಮೈಕೈ ಸುಸ್ತು ಬರುತ್ತದೆ. ದೇಹವನ್ನು ಶುದ್ಧವಾಗಿಟ್ಟುಕೊಂಡು, ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಂಡರೆ ರೋಗ ಬರದು ಎಂದರು.

    ಇದಕ್ಕಾಗಿ ಶುಂಠಿ, ಕಾಳುಮೆಣಸು, ಲವಂಗ, ಅರಿಶಿಣ, ಹೆಚ್ಚು ಸಾಂಬಾರ ಪದಾರ್ಥಗಳನ್ನು ಬಳಸಬೇಕು. ಕರಿದ ಪದಾರ್ಥಗಳನ್ನು ಬಳಸುವುದು ಕಡಿಮೆ ಮಾಡಬೇಕು ಎಂದು ಸಲಹೆ ನೀಡಿದರು.

    ಶಾಲಾ ಸಮಿತಿ ಅಧ್ಯಕ್ಷ ಶಿವಣ್ಣರೆಡ್ಡಿ ಮಾತನಾಡಿ, ರೋಗ ನಿರೋಧಕ ಶಕ್ತಿ ಕಡಿಮೆ ಇದ್ದವರಲ್ಲಿ ವೈರಸ್ ಪ್ರಭಾವ ಹೆಚ್ಚಾಗಿರುತ್ತದೆ ಎಂದರು.

    ಶಾಲಾ ಸಮಿತಿ ಅಧ್ಯಕ್ಷ ಶಿವಣ್ಣರೆಡ್ಡಿ, ಮುಖ್ಯಶಿಕ್ಷಕಿ ನಸ್ರುತ್ ಜಬೀನಾ, ವಿಜ್ಞಾನ ಶಿಕ್ಷಕ ನಾಗರಾಜು, ಶಿಕ್ಷಕರಾದ ರಾದಾ, ಗುರುಮೂರ್ತಿ, ಜಬೀನಾ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts