ದುಶ್ಚಟ ಕೈಬಿಟ್ಟರೆ ಬದುಕು ನೆಮ್ಮದಿ

Latest News

ಆಡದೇ ಮಾಡುವವನು ರೂಢಿಯೊಳಗೆ ಉತ್ತಮನು

ಯೇಸುಕ್ರಿಸ್ತರ ಬೋಧನೆಗಳನ್ನು ಕೇಳುತ್ತಿದ್ದ ಶಿಷ್ಯರಾದಿಯಾಗಿ ಸಾಮಾನ್ಯ ಜನರಿಗೂ ಅವರ ಮಾರ್ವಿುಕವಾದ ಮಾತುಗಳು ಹಾಗೂ ದೂರದೃಷ್ಟಿಯ ಬೋಧನೆಗಳನ್ನು ಅರ್ಥಮಾಡಿಕೊಳ್ಳಲು ಅನೇಕ ವೇಳೆ ಕಷ್ಟವಾಗುತಿತ್ತು. ಅಂತಹ...

ವೆಬ್ ಸರಣಿಯಲ್ಲಿ ಸಾಯಿ ಪಲ್ಲವಿ?

ಸಿನಿಮಾಗಳ ರೀತಿ-ನೀತಿಗೂ ವೆಬ್ ಸೀರಿಸ್​ಗಳ ವ್ಯಾಕರಣಕ್ಕೂ ಸಿಕ್ಕಾಪಟ್ಟೆ ವ್ಯತ್ಯಾಸ ಇದೆ. ವೆಬ್ ಸರಣಿಗಳಿಗೆ ಯಾವುದೇ ರೀತಿಯಲ್ಲಿ ಸೆನ್ಸಾರ್​ನ ಅಡೆತಡೆಗಳಿಲ್ಲ. ಸ್ವಲ್ಪ ಬೋಲ್ಡ್ ಎನಿಸುವ...

ಅಕ್ರಮ ಮರಳು ದಂಧೆಗೆ ಜಿಲ್ಲಾಡಳಿತ ಬ್ರೇಕ್

ಹಾವೇರಿ: ಜಿಲ್ಲೆಯ ತುಂಗಭದ್ರಾ ನದಿ ತಟದಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆಗೆ ಬ್ರೇಕ್ ಹಾಕಲು ಜಿಲ್ಲಾಡಳಿತ ಹಲವು ಕ್ರಮಗಳನ್ನು ಕೈಗೊಂಡಿದೆ.

ಡೇ-ನೈಟ್ ಟೆಸ್ಟ್​ಗೆ ಇಂದೋರ್​ನಲ್ಲೇ ಅಭ್ಯಾಸ

ಇಂದೋರ್: ಟೆಸ್ಟ್ ಕ್ರಿಕೆಟ್​ನಲ್ಲಿ ಮೊಟ್ಟ ಮೊದಲ ಬಾರಿಗೆ ಅಹರ್ನಿಶಿ ಟೆಸ್ಟ್ ಆಡಲು ಅಣಿಯಾಗುತ್ತಿರುವ ಭಾರತ ತಂಡ, ಈ ಪಂದ್ಯಕ್ಕಾಗಿ ಇಂದೋರ್​ನಲ್ಲಿಯೇ ಕೆಲ ದಿನ...

ವೀಳ್ಯದೆಲೆ ತೋಟಕ್ಕೆ ರೋಗಬಾಧೆ

ಲಕ್ಷ್ಮೇಶ್ವರ: ಸತತವಾಗಿ ಸುರಿದ ಮಳೆಗೆ ತೋಟಗಾರಿಕೆ ಬೆಳೆ ವೀಳ್ಯದೆಲೆಗೂ ಕುತ್ತು ಬಂದಿದ್ದು ಬೆಳೆಗಾರರು ಹೌಹಾರಿದ್ದಾರೆ. ತಾಲೂಕಿನಾದ್ಯಂತ ಲಕ್ಷ್ಮೇಶ್ವರ,...

ಪರಶುರಾಮಪುರ: ಪ್ರಸ್ತುತ ಹಣ್ಣು-ತರಕಾರಿಗಿಂತ ತಂಬಾಕು ಉತ್ಪನ್ನಗಳೇ ಹೆಚ್ಚಾಗಿ ಮಾರಾಟವಾಗುತ್ತಿವೆ ಎಂದು ಬೆಳೆಗೆರೆ ಶಾರದಾ ಮಂದಿರ ವಿದ್ಯಾಸಂಸ್ಥೆ ಜಂಟಿ ಕಾರ್ಯದರ್ಶಿ ಶ್ರೀಪಾದ ಪೂಜಾರ್ ಕಳವಳ ವ್ಯಕ್ತಪಡಿಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮಹಿಳಾ-ಸ್ವ ಸಹಾಯ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಬೆಳೆಗೆರೆ ಶಾರದಾ ಮಂದಿರ ವಿದ್ಯಾಸಂಸ್ಥೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಮಾತನಾಡಿ, ದುಶ್ಚಟ ಕೈಬಿಟ್ಟರೆ ನೆಮ್ಮದಿ ಬದುಕು ನಡೆಸಬಹುದು ಎಂದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಸ್ವಾಸ್ಥ್ಯ ಸಂಕಲ್ಪ ಶೀರ್ಷಿಕೆಯಡಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ದುಶ್ಚಟಗಳಿಂದಾಗುವ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಿರಿಯ ಶಿಕ್ಷಕ ವಿ.ಎಚ್.ವೀರಣ್ಣ, ಸಮುದಾಯದಲ್ಲಿ ಪ್ರೀತಿ-ವಿಶ್ವಾಸ, ಸಹಬಾಳ್ವೆ ಕೊರತೆಯಿಂದ ಎಲ್ಲ ವಯೋಮಾನದವರೂ ದುಶ್ಚಟಗಳ ದಾಸರಾಗುತ್ತಿದ್ದಾರೆ. ವ್ಯಸನಿಗಳು ದುಶ್ಚಟ ಬಿಟ್ಟು ಸ್ವಾಸ್ಥ್ಯ ಸಮಾಜ ನಿರ್ಮಾಣದ ಸಂಕಲ್ಪ ಮಾಡಬೇಕಿದೆ ಎಂದರು.

ಗ್ರಾಮಾಭಿವೃದ್ಧಿ ಯೋಜನೆ ಸಾಣಿಕೆರೆ ವಲಯ ಮೇಲ್ವಿಚಾರಕಿ ಚಂದ್ರಕಲಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಮದ್ಯ-ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಪ್ರಾತ್ಯಕ್ಷಿಕೆ, ಕಿರುಚಿತ್ರ ಪ್ರದರ್ಶಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಿಂದ ಸಂವಾದ ನಡೆಯಿತು.

ಪ್ರಾಚಾರ್ಯೆ ಸರೋಜಾ, ಉಪನ್ಯಾಸಕರಾದ ಚಿದಾನಂದಯ್ಯ, ವಿ.ಪುಟ್ಟಸ್ವಾಮಿ, ಜೆ.ಚನ್ನಕೇಶವ, ಪಿ.ಸುಹಾಸ್, ಶಿವರಾಜ್, ಪ್ರಸಾದ್, ಶಿಕ್ಷಕರಾದ ಮಂಜಣ್ಣ, ಪುಷ್ಪಲತಾ, ಶಶಿಕಲಾ ಮತ್ತಿತರರಿದ್ದರು.

- Advertisement -

Stay connected

278,507FansLike
569FollowersFollow
608,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....