

ಕುಂದಾಪುರ: ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಪಾಲಕರು ಮತ್ತು ಶಿಕ್ಷಕರ ಸಮಾಲೋಚನಾ ಸಭೆ ಸೋಮವಾರ ನಡೆಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಪ್ರೊಜೆಕ್ಟ್ ರಿಸರ್ಚ್ ಸೈಂಟಿಸ್ಟ್ಗಳಾದ ಅರುಣಕುಮಾರ್ ಎಸ್., ನ್ಯುಟ್ರಿಶಿಯನ್ ಪ್ರೊಜೆಕ್ಟ್ ಟೆಕ್ನಿಕಲ್ ಸಪೋರ್ಟ್ ಅಶ್ವಿನಿ ಪೈ ಕೆ. ಮತ್ತು ಸೈಕಾಲಜಿ ಪ್ರೊಜೆಕ್ಟ್ ಟೆಕ್ನಿಕಲ್ ಸಪೋರ್ಟ್ ರುತುಜಾ ಎಸ್.ರಾವ್ ಅವರು ಮಕ್ಕಳ ಆರೋಗ್ಯದ ಕಾಳಜಿಯ ಬಗ್ಗೆ ಮಾಹಿತಿ ನೀಡಿದರು.
ಶ್ರೀ ಸಿದ್ಧಿ ಪ್ರತಿಷ್ಠಾನದ ಕಾರ್ಯದರ್ಶಿ ಹಾಗೂ ಸಂಸ್ಥೆಯ ಪ್ರಾಂಶುಪಾಲ ಶರಣಕುಮಾರ, ಡಾ.ಸುಬೇಂದು ಜಾನ, ಶಾಲೆಯ ಆಡಳಿತಾಧಿಕಾರಿ ವೀಣಾರಶ್ಮಿ ಎಂ., ಉಪ ಪ್ರಾಂಶುಪಾಲ ರಾಮ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು. ಶಿಕ್ಷಕ ಗಣೇಶ ದೇವಾಡಿಗ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.