ಕಾಲೇಜಿನ ಅಭಿವೃದ್ಧಿಯಲ್ಲಿ ಪಾಲಕರ ಪಾಲ್ಗೊಳ್ಳುವಿಕೆ

hebri
Published on

ಹೆಬ್ರಿ: ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುವಂತೆ ಮಾಡುವುದು ನಮ್ಮೆಲ್ಲರ ಕರ್ತವ್ಯ. ಕಾಲೇಜಿನ ಅಭಿವೃದ್ಧಿಯಲ್ಲಿ ಪಾಲಕರ ನಿರಂತರ ಪಾಲ್ಗೊಳ್ಳುವಿಕೆ ಹೆಚ್ಚು ಮಹತ್ವ ನೀಡುತ್ತದೆ. ಸರ್ವರು ಕಾಲೇಜಿನ ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಿ ಎಂದು ಪ್ರಾಂಶುಪಾಲ ಪ್ರೊ.ಸುಧಾಕರ ಕೆ.ಜಿ. ಹೇಳಿದರು.

ಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಪಾಲಕರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಕ್ಷಕ ಶಿಕ್ಷಕ ಸಂಘಕ್ಕೆ ಅಧ್ಯಕ್ಷರಾಗಿ ಸುಮತಿ ಶೆಟ್ಟಿ, ಕಾರ್ಯದರ್ಶಿ ಸುಜಾತಾ, ಜತೆ ಕಾರ್ಯದರ್ಶಿಯಾಗಿ ಸುಮಿತ್ರಾ ಅವರನ್ನು ಆಯ್ಕೆ ಮಾಡಲಾಯಿತು. ಸಮಾಜ ಶಾಸ್ತ್ರ ವಿಭಾಗ ಮುಖ್ಯಸ್ಥ ಡಾ.ಮಂಜುನಾಥ ಆಚಾರಿ ನಿರೂಪಿಸಿದರು. ಕಾಲೇಜಿನ ಎಲ್ಲ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net