ವಿದ್ಯಾರ್ಥಿಗಳ ಸಾಧನೆಗೆ ಪಾಲಕರ ಕೊಡುಗೆ ಅಪಾರ: ವಿವೇಕ್ ಆಳ್ವ ಅನಿಸಿಕೆ

Mbd_achievement
Published on

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ

ವಿದ್ಯಾರ್ಥಿಗಳ ಸಾಧನೆಗೆ ಪಾಲಕರು, ಶಿಕ್ಷಕರ ಕೊಡುಗೆ ಅಪಾರ. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಪಾಲಕರ ಮತ್ತು ಶಿಕ್ಷಕರ ತ್ಯಾಗವನ್ನು ಮರೆಯಬಾರದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.

ವಿದ್ಯಾಗಿರಿಯಲ್ಲಿರುವ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಆಳ್ವಾಸ್ ಪಪೂ ಕಾಲೇಜಿನ ಸಾಂಸ್ಕೃತಿಕ ಸಂಘದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಆಳ್ವಾಸ್ ಪಪೂ ಕಾಲೇಜಿನ ಪ್ರಾಂಶುಪಾಲ ಪ್ರೊ.ಸದಾಕತ್ ಅಧ್ಯಕ್ಷತೆ ವಹಿಸಿದ್ದರು. ವಿಜ್ಞಾನ ವಿಭಾಗದ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಜಪಾನ್‌ನ ಸೋಜೊ ವಿಶ್ವವಿದ್ಯಾಲಯದ ಫ್ಯಾಕಲ್ಟಿ ಹಾಗೂ ಗ್ರಾಜ್ಯುವೇಟ್ ಸ್ಕೂಲ್ ಆಫ್ ಇಂಜಿನಿಯರಿಂಗ್‌ನ ಪರಿಣಾಮಕಾರಿ ಇಂಜಿನಿಯರಿಂಗ್‌ನ ಪ್ರಗತಿ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ.ರುಚಿ ಥೋಮೊಶಿಗೆ, ಸೋಜೊ ಅಂತಾರಾಷ್ಟ್ರೀಯ ಕೇಂದ್ರದ ವ್ಯವಸ್ಥಾಪಕಿ ಮಿಯೆ ಒಕುಬೊ, ಮೆಕಾನಿಕಲ್ ಇಂಜಿನಿಯರಿಂಗ್ ಪ್ರಾಧ್ಯಾಪಕ ಡಾ.ಅಕಿಸಾ ಮೊರಿ ಅವರನ್ನು ಗೌರವಿಸಲಾಯಿತು.

ಉಪಪ್ರಾಂಶುಪಾಲೆ ಜಾನ್ಸಿ ಪಿ.ಎನ್. ಉಪಸ್ಥಿತರಿದ್ದರು. ಉಪನ್ಯಾಸಕಿ ಡಾ.ಸುಧಾರಾಣಿ ಕಾರ್ಯಕ್ರಮ ನಿರೂಪಿಸಿದರು. ಸಾಂಸ್ಕೃತಿಕ ಸಂಘದ ಸಹ ಸಂಚಾಲಕಿ ಪ್ರಿಯಾ ಎಚ್.ಎಸ್. ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net