ಬೊಬ್ಬೆಕೇರಿ ಶಾಲೆಯಲ್ಲಿ ಪಾಲಕರ ಸಭೆ

New Project (42)
Published on

ಕಡಬ: ಬೊಬ್ಬೆಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮಗ್ರ ಶಿಕ್ಷಣ ಅಭಿಯಾನ ಯೋಜನೆಯ ಸಾಮಾಜಿಕ ಪರಿಶೋಧನಾ ಸಮಿತಿ ವತಿಯಿಂದ ಶಾಲಾ ಪಾಲಕರ ಸಭೆ ಮತ್ತು ಸಾಮಾಜಿಕ ಪರಿಶೋಧನಾ ಸಭೆ ನಡೆಯಿತು.

ಎಸ್‌ಡಿಎಂಸಿ ಅಧ್ಯಕ್ಷೆ ಸುನೀತಾ ಗಣೇಶ್ ಅಧ್ಯಕ್ಷತೆ ವಹಿಸಿದ್ದರು. ಆಲಂಕಾರು ಮೆಸ್ಕಾಂ ಕಿರಿಯ ಅಭಿಯಂತ ಪ್ರೇಮ್‌ಕುಮಾರ್ ನೋಡಲ್ ಅಧಿಕಾರಿಯಾಗಿದ್ದರು. ತಾಲೂಕು ಸಾಮಾಜಿಕ ಪರಿಶೋಧನಾ ಮುಖ್ಯಸ್ಥ ಪ್ರವೀಣ್ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಕಾಣಿಯೂರು ಗ್ರಾಪಂ ಸದಸ್ಯೆ ಸುನಂದಾ ಅಬ್ಬಡ, ಸಾಮಾಜಿಕ ಪರಿಶೋಧನಾ ಸಮಿತಿ ಸಿಬ್ಬಂದಿ ಜಯಮಣಿ, ಪ್ರಣಮ್ಯಾ ಮತ್ತಿತರರು ಉಪಸ್ಥಿತರಿದ್ದರು. ಮುಖ್ಯ ಗುರು ಶಶಿಕಲಾ ಸ್ವಾಗತಿಸಿದರು. ಶಿಕ್ಷಕ ಜನಾರ್ದನ ಹೇಮ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net