More

    ಅತ್ಯಾಚಾರ ಸಂತ್ರಸ್ತೆಯ ಪಾಲಕರು ಅತ್ಯಾಚಾರಿಯೊಂದಿಗೆ ರಾಜಿ!?: ಹೈಕೋರ್ಟ್ ಹೇಳಿದ್ದೇನು?

    ನವದೆಹಲಿ: ಕೆಲವು ಅತ್ಯಾಚಾರ ಪ್ರಕರಣಗಳಲ್ಲಿ ಅತ್ಯಾಚಾರ ಆರೋಪಿಯು ಸಂತ್ರಸ್ತೆಯ ಪಾಲಕರೊಂದಿಗೆ ರಾಜಿ ಮಾಡಿಕೊಂಡು ಶಿಕ್ಷೆಯಿಂದ ಪಾರಾಗಲು ಯತ್ನಿಸುವಂಥ ಪ್ರಕರಣಗಳೂ ನಡೆಯುತ್ತವೆ. ಆದರೆ ಇಂಥದ್ದರ ಹೈಕೋರ್ಟ್ ತನ್ನ ನಿಲುವನ್ನು ಸ್ಪಷ್ಟಪಡಿಸಿದ್ದು, ನಿರ್ದೇಶನವೊಂದನ್ನು ಕೂಡ ನೀಡಿದೆ.

    ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್​ನ ನ್ಯಾಯಮೂರ್ತಿ ಪಂಕಜ್ ಜೈನ್ ಅವರಿದ್ದ ಪೀಠ ಇಂಥದ್ದೊಂದು ತೀರ್ಪನ್ನು ನೀಡಿದೆ. ಅತ್ಯಾಚಾರ ಪ್ರಕರಣವೊಂದರ ಕುರಿತ ದೋಷಾರೋಪಣಾ ಪಟ್ಟಿಯನ್ನು ರದ್ದುಗೊಳಿಸುವ ಸಂಬಂಧ ಸಲ್ಲಿಕೆಯಾದ ಅರ್ಜಿ ವಿಚಾರಣೆ ವೇಳೆ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಹರಿಯಾಣದ ಸಿರ್ಸಾ ಎಂಬಲ್ಲಿ 2019ರಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದಬ್ವಾಲಿ ಮಹಿಳಾ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಕೂಡ ಹಾಕಲಾಗಿತ್ತು. ಆದರೆ ಇದನ್ನು ರದ್ದುಗೊಳಿಸುವಂತೆ ಸಲ್ಲಿಕೆಯಾದ ಅರ್ಜಿಯನ್ನು ವಿಚಾರಣೆ ನಡೆಸಿದ ಅವರು, ಅತ್ಯಾಚಾರ ಸಂತ್ರಸ್ತೆಯ ಪಾಲಕರು ಅತ್ಯಾಚಾರಿಯೊಂದಿಗೆ ರಾಜಿ ಮಾಡಿಕೊಳ್ಳುವಂತಿಲ್ಲ. ಹಾಗೆ ರಾಜಿ ಮಾಡಿಕೊಳ್ಳುವುದು ಮಗುವಿನ ಘನತೆಗೆ ವಿರುದ್ಧವಾದುದು ಮಾತ್ರವಲ್ಲ, ಪೋಕ್ಸೋ ಕಾಯ್ದೆಯ ಉದ್ದೇಶಕ್ಕೂ ವಿರುದ್ಧವಾದುದು ಎಂದು ಹೇಳಿದ್ದಾರೆ.

    ಮಲಗಿಕೊಂಡೇ ಓದಿ 580 ಅಂಕ ಪಡೆದ ಶ್ರಾವ್ಯಾ!; ಕರುಳು ಕಾಯಿಲೆ ನಡುವೆಯೂ ಎಸ್ಸೆಸ್ಸೆಲ್ಸಿಯಲ್ಲಿ ಸಾಧನೆ..

    ಬೃಹತ್ ಕೊಳಕ ಮಂಡಲವನ್ನೇ ನುಂಗಿದ ನಾಗರಹಾವು; ಕೆಲವೇ ಕ್ಷಣಗಳಲ್ಲಿ ಕಣ್ಮರೆ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts