

ಬೆಳ್ತಂಗಡಿ: ಹದಿಹರೆಯದ ಮಕ್ಕಳೊಂದಿಗೆ ಪಾಲಕರು ಸ್ನೇಹಿತರಂತಿದ್ದು, ಭಾವನಾತ್ಮಕವಾದ ಸಂಬಂಧ ಹೊಂದಿರಬೇಕು ಎಂದು ವಾಣಿ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ. ಹೇಳಿದರು.
ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪಾಲಕರ ಸಭೆಯಲ್ಲಿ ಮಾತನಾಡಿದರು.
ಓದುವ ಸಮಯದಲ್ಲಿ ಪಾಲಕರು ಮಕ್ಕಳಿಗೆ ಹೆಚ್ಚು ಒತ್ತಡ ಹಾಕಬಾರದು. ಉತ್ತಮ ಸಂವಹನದ ಮೂಲಕ ಮಕ್ಕಳ ಸಮಸ್ಯೆಗಳನ್ನು ಬಗೆಹರಿಸಬೇಕು. ವಿಜ್ಞಾನ ವಿಷಯವನ್ನು ಅಧ್ಯಯನ ಮಾಡುವ ವಿದ್ಯಾರ್ಥಿಗಳು ರ್ನಿದಿಷ್ಟ ಗುರಿ ತಲುಪುವಲ್ಲಿ ಪಾಲಕರು ಜವಾಬ್ದಾರಿ ವಹಿಸಬೇಕು ಎಂದರು.
ಪ್ರಾಂಶುಪಾಲ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಭೌತಶಾಸ್ತ್ರ ವಿಭಾಗ ಮುಖ್ಯಸ್ಥ ಹರ್ಷಿತ್ ಕುಮಾರ್ ಸ್ವಾಗತಿಸಿದರು. ಉಪನ್ಯಾಸಕಿ ಗೀತಾ ವಂದಿಸಿದರು.