

ವಿಜಯವಾಣಿ ಸುದ್ದಿಜಾಲ ಗಂಗೊಳ್ಳಿ
ಸಣ್ಣ ವಯಸ್ಸಿನಲ್ಲೇ ಮಕ್ಕಳು ದುಶ್ಚಟಗಳ ದಾಸರಾಗುತ್ತಿದ್ದಾರೆ. ಮೋಜಿಗಾಗಿ ಆರಂಭವಾಗುವ ಚಟ ಜೀವ ಹಾನಿಯ ಹಂತಕ್ಕೆ ತಲುಪುತ್ತಿದೆ. ಪಾಲಕರು ತಮ್ಮ ಮಕ್ಕಳ ಮೇಲೆ ನಿಗಾ ಇಡಲೇಬೇಕು ಎಂದು ಬೈಂದೂರು ತಾಲೂಕು ಜನಜಾಜಗೃತಿ ವೇದಿಕೆ ಸದಸ್ಯ ಬಿ.ರಾಘವೇಂದ್ರ ಪೈ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೈಂದೂರು ತಾಲೂಕು ತ್ರಾಸಿ ವಲಯ, ಜನಜಾಗೃತಿ ವೇದಿಕೆ ತ್ರಾಸಿ ವಲಯ ಮತ್ತು ಎಸ್.ವಿ ಆಂಗ್ಲ ಮಾಧ್ಯಮ ಶಾಲೆ ಸಹಯೋಗದಲ್ಲಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಸ್ವಾಸ್ಥೃ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕ ರಾಘವೇಂದ್ರ ಶೇರುಗಾರ್ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ತಾಲೂಕು ಕಾನೂನು ಸೇವೆ ಪ್ರಾಧಿಕಾರದ ಪ್ಯಾರಾ ಲೀಗಲ್ ಸ್ವಯಂಸೇವಕಿ ಫಿಲೋಮಿನಾ ಫರ್ನಾಂಡಿಸ್ ಪೋಕ್ಸೊ ಕುರಿತು ಮಾಹಿತಿ ಮತ್ತು ದುಶ್ಚಟಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಚಂದ್ರು ಕಾರ್ಯಕ್ರಮ ನಿರೂಪಿಸಿದರು.