More

    ಪಾಲಕರು ತಪ್ಪದೇ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸಿ

    ಹನೂರು: ತಾಲೂಕಿನಲ್ಲಿ 13,597 ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಗುರಿಯನ್ನು ಹೊಂದಲಾಗಿದೆ. ಆದ್ದರಿಂದ ಪಾಲಕರು ತಪ್ಪದೇ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸಬೇಕು ಎಂದು ತಾಲೂಕು ಆರೋಗ್ಯಾಕಾರಿ ಡಾ.ಪ್ರಕಾಶ್ ತಿಳಿಸಿದರು.

    ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಪೋಲಿಯೋ ಹನಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೆಲವು ದೇಶಗಳಲ್ಲಿ ಪೋಲಿಯೋ ಇನ್ನು ಜೀವಂತವಾಗಿದೆ. ಆದರೆ ಭಾರತ ಪೋಲಿಯೋ ಮುಕ್ತ ದೇಶವಾಗಿದೆ. ಆದ್ದರಿಂದ ಈ ಪಿಡುಗಿನ ವಿರುದ್ಧ ಭಾರತ ಸಾಸಿರುವ ಗೆಲುವನ್ನು ಮುಂದುವರಿಸಲು ಪ್ರತಿಯೊಬ್ಬರೂ ಸಹಕಾರ ನೀಡಬೇಕು. ಈ ದಿಸೆಯಲ್ಲಿ ತಾಲೂಕಿನಲ್ಲಿರುವ 5 ವರ್ಷದೊಳಗಿನ 13,597 ಮಕ್ಕಳಿಗೆ ಲಸಿಕೆ ಹಾಕುವ ಗುರಿಯನ್ನು ಹೊಂದಲಾಗಿದೆ. ಈ ಕಾರ್ಯಕ್ರಮ 3 ದಿನಗಳವರೆಗೆ ನಡೆಯಲಿದ್ದು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಮನೆ ಬಾಗಿಲಿಗೆ ತೆರಳಿ ಹನಿ ಹಾಕಲಿದ್ದಾರೆ. ಇನ್ನು ಪಟ್ಟಣದಲ್ಲಿ 6 ದಿನಗಳವರೆಗೆ ನಡೆಯಲಿದೆ ಎಂದು ತಿಳಿಸಿದರು.

    ವೈದ್ಯಾಕಾರಿ ಡಾ.ಪುಷ್ಪರಾಣಿ ಮಾತನಾಡಿ, ಅರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ 8,037 ಕುಟುಂಬಗಳಿದ್ದು, ಇದರಲ್ಲಿ 5 ವರ್ಷದೊಳಗಿನ 2,201 ಮಕ್ಕಳಿದ್ದಾರೆ. ಪಟ್ಟಣದ ಬಸ್ ನಿಲ್ದಾಣ ಸೇರಿದಂತೆ ಗ್ರಾಮಗಳಲ್ಲಿ 20 ಪೋಲಿಯೋ ಬೂತ್‌ಗಳನ್ನು ತೆರೆಯಲಾಗಿದೆ. ಬೂತ್‌ಗೆ ನಾಲ್ವರು ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಮಾಹಿತಿ ತಿಳಿಸಿದರು.

    ಆರೋಗ್ಯ ಇಲಾಖೆಯ ಅಕಾರಿಗಳು, ನೌಕರರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts