ವಿಜಯವಾಣಿ ಸುದ್ದಿಜಾಲ ಧಾರವಾಡ
ತರಗತಿಗಳಲ್ಲಿ ಶಿಕ್ಷಕರು ಹೇಳಿಕೊಡುವುದನ್ನು ಆಸಕ್ತಿಯಿಂದ ಕಲಿಯುವಂತೆ ಪ್ರೇರೇಪಿಸಬೇಕು. ಜತೆಗೆ ಪಾಲಕರು ಮನೆಗಳಲ್ಲಿ ಮಕ್ಕಳಿಗೆ ಗುಣಾತ್ಮಕ ಸಮಯ ಕೊಡುವುದು ಬಹಳ ಮುಖ್ಯ ಎಂದು ಹು-ಧಾ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದರು.
ನಗರದ ಭೈರಿದೇವರಕೊಪ್ಪದ ಶ್ರೀ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಏರ್ಪಡಿಸಿದ್ದ ವಾರ್ಷಿಕೋತ್ಸವ ಮತ್ತು ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಉತ್ತಮ ಅಂಕಗಳನ್ನು ಗಳಿಕೆಯೊಂದಿಗೆ ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು. ಪಾಲಕರು ಮಕ್ಕಳ ಬಗ್ಗೆ ಸದಾ ಕಾಳಜಿ ವಹಿಸಬೇಕು ಎಂದರು.
ಶಾಲೆಯ ಗೌರವ ನಿರ್ದೇಶಕ ಡಾ. ವಿ.ಎಸ್.ವಿ. ಪ್ರಸಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳು ಕಲಿಕೆ ಜತೆಗೆ ಸಾಂಸ್ಕೃತಿಕ ಮೌಲ್ಯ ಅಳವಡಿಸಿಕೊಂಡು ದೇಶದ ಪ್ರಗತಿಗೆ ಕೊಡುಗೆ ನೀಡಬೇಕು. ಸಮಯ ಅಮೂಲ್ಯವಾದದ್ದು. ಅದನ್ನು ವ್ಯರ್ಥ ಮಾಡದೆ, ಕಲಿಕೆ, ಸ್ವವಿಕಾಸ ಹಾಗೂ ಉತ್ತಮ ಭವಿಷ್ಯದ ನಿಮಾರ್ಣಕ್ಕಾಗಿ ಬಳಸಿಕೊಳ್ಳಬೇಕು ಎಂದರು.
ಸಾನಿಧ್ಯ ವಹಿಸಿದ್ದ ಮನಗುಂಡಿಯ ಶ್ರೀ ಬಸವಾನಂದ ಸ್ವಾಮೀಜಿ, ಬಿಇಒ ಉಮೇಶ ಬೊಮ್ಮಕ್ಕನವರ, ಶಾಲೆ ಪ್ರಾಚಾರ್ಯೆ ಶರ್ಮಿಳಾ ಹೊಸೂರ ಮಾತನಾಡಿದರು.
ಸಂಸ್ಥೆ ಎಂಡಿ ವೀರಭದ್ರರಾವ್, ಅಧ್ಯಕ್ಷ ಜಗನ್ ಮೋಹನರಾವ್, ಎಂ. ಶ್ರಿಕಾಂತ, ಅಜ್ಜಪ್ಪ ಹೊರಕೇರಿ, ಶಿಕ್ಷಕರು, ಇತರರು ಇದ್ದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಸನ್ಮಾನಿಸಲಾಯಿತು.
ಮಕ್ಕಳಿಗೆ ಪಾಲಕರು ಸಮಯ ನೀಡಲಿ

You Might Also Like
ಕಲ್ಲಂಗಡಿ ಹಣ್ಣು ತಿಂದು ಸಿಪ್ಪೆ ಬಿಸಾಡ್ತೀರಾ? ಹಣ್ಣಿನ ಸಿಪ್ಪೆ ತಿಂದ್ರೆ ಪುರುಷರಿಗೆ ಆ ಸಾಮರ್ಥ್ಯ ಹೆಚ್ಚಾಗುವುದು! watermelon
watermelon: ಬೇಸಿಗೆ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಕಲ್ಲಂಗಡಿ ಹಣ್ಣು. ನಾವು ಕಲ್ಲಂಗಡಿ ಹಣ್ಣುಗಳನ್ನು…
ಕುತ್ತಿಗೆ-ತಲೆ ನೋವನ್ನು ನಿರ್ಲಕ್ಷಿಸುತ್ತಿದ್ದೀರಾ?; ಎಚ್ಚರದಿಂದಿರಿ.. ಇದು ಅಪಾಯದ ಮುನ್ಸೂಚನೆ | Health Tips
ಕುತ್ತಿಗೆ ಮತ್ತು ಭುಜದ ಸುತ್ತಲಿನ ಪ್ರದೇಶದಲ್ಲಿನ ನೋವನ್ನು ನಿರ್ಲಕ್ಷಿಸುವ ತಪ್ಪನ್ನು ಮಾಡಬೇಡಿ. ಏಕೆಂದರೆ ಇದು ಸರ್ವಿಕಲ್…
ಅಳದಿದ್ದರು ಕಣ್ಣೀರು ಬರುತ್ತಿದೆಯೇ; ತಜ್ಞರು ಸೂಚಿಸಿರುವ ಸಿಂಪಲ್ ಪರಿಹಾರ ಹೀಗಿದೆ.. Health Tips
ಸೌಂದರ್ಯವನ್ನು ಅಳೆಯಲು ಕಣ್ಣುಗಳು ಒಂದು ಪ್ರಮುಖ ಮಾನದಂಡವಾಗಿದೆ. ಇದು ಪ್ರಮುಖ ಇಂದ್ರಿಯಗಳಲ್ಲಿ ಒಂದಾಗಿದೆ. ಅದಿಲ್ಲದೆ ಜೀವನವನ್ನು…