More

    ಪರೀಕ್ಷಾ ಪೆ ಚರ್ಚಾ 3ನೇ ಆವೃತ್ತಿ

    ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ವಿದ್ಯಾರ್ಥಿಗಳ ಜತೆ ಸಂವಹನ ನಡೆಸುವ ‘ಪರೀಕ್ಷಾ ಪೆ ಚರ್ಚಾ’ ಕಾರ್ಯಕ್ರಮದ ಮೂರನೇ ಆವೃತ್ತಿ ಕಾರ್ಯಕ್ರಮ ದೆಹಲಿಯ ತಲ್ಕತೋರಾ ಒಳಾಂಗಣ ಕ್ರೀಡಾಂಗಣದಲ್ಲಿ ಸೋಮವಾರ ಬೆಳಗ್ಗೆ 11ಕ್ಕೆ ನಡೆಯಲಿದೆ.

    ದೂರದರ್ಶನದಲ್ಲಿ ನೇರ ಪ್ರಸಾರವಾಗಲಿದೆ. ದೇಶದ ವಿವಿಧ ಮೂಲೆಗಳಿಂದ ಆಯ್ಕೆಯಾದ 9 ಮತ್ತು 10ನೇ ತರಗತಿಯ ಸುಮಾರು 2 ಸಾವಿರ ವಿದ್ಯಾರ್ಥಿಗಳು ಹಾಗೂ ಅವರ ಪಾಲಕರು ಮತ್ತು ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಈ ಹಿಂದೆ ನೀಡಲಾಗಿದ್ದ ಪ್ರಬಂಧ ಸ್ಪರ್ಧೆಯಿಂದ ಆಯ್ಕೆ ಮಾಡಲಾಗಿದೆ. ಕರ್ನಾಟಕದಿಂದ ವಿವಿಧ ಶಾಲೆಗಳ ಒಟ್ಟು 42 ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದರೆ. ರಾಜ್ಯದಿಂದ ಸುಮಾರು 15 ಸಾವಿರ ವಿದ್ಯಾರ್ಥಿಗಳು ಈ ಪ್ರಬಂಧ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.

    ಪರೀಕ್ಷಾ ಸಮಯದಲ್ಲಿ ಎದುರಾಗುವ ಸವಾಲು ಮತ್ತು ಅವುಗಳನ್ನು ಶಿಕ್ಷಕರು, ಪಾಲಕರು ಹೇಗೆ ನಿವಾರಿಸಬೇಕು ಎಂಬ ಬಗ್ಗೆ ಪ್ರಧಾನಿ ಮೋದಿ ಸಂವಾದದಲ್ಲಿ ಸಲಹೆ ನೀಡಲಿದ್ದಾರೆ. ಈ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಪ್ರಮಾಣಪತ್ರ ನೀಡಲಾಗುತ್ತದೆ. ಪರೀಕ್ಷಾ ಪೆ ಚರ್ಚಾದಲ್ಲಿ ಭಾಗವಹಿಸಲು ಈ ವರ್ಷ 2.60 ಲಕ್ಷ ವಿದ್ಯಾರ್ಥಿ ಗಳು ಅರ್ಜಿ ಸಲ್ಲಿಸಿದ್ದರು. ಕಳೆದ ವರ್ಷ 1.40 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts