More

    ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ; ನದಿಯಲ್ಲಿ ಕೊಚ್ಚಿ ಹೋದ ಕಾರು!

    ಹಿಮಾಚಲ ಪ್ರದೇಶ: ಕಳೆದ ಎರಡು ಮೂರು ದಿನಗಳಿಂದ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಹಿಮಾಚಲ ಪ್ರದೇಶದಲ್ಲಿ ಮಳೆಯ ಆರ್ಭಟಕ್ಕೆ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದೆ ಮತ್ತು ನದಿಗಳಲ್ಲಿ ಕಾರು ತೇಲಿ ಹೋಗಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದೆ.

    ಇದನ್ನೂ ಓದಿ: ಜೈನಮುನಿ ಅವರ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಲು ಶಾಸಕ ಅಭಯ್ ಪಾಟೀಲ ಒತ್ತಾಯ

    ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ಭಾರೀ ಮಳೆಯಾದ ಹಿನ್ನೆಲೆ ನದಿಗಳು ಉಕ್ಕಿ ಹರಿಯುತ್ತಿದೆ. ಈ ಮಧ್ಯೆ ನದಿಯ ರಭಸಕ್ಕೆ ಸಿಲುಕಿಕೊಂಡ ಕಾರು ಕೊಚ್ಚಿ ಹೋಗಿರುವ ದೃಶ್ಯ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮಳೆಯ ಆರ್ಭಟಕ್ಕೆ ಶಿಮ್ಲಾ-ಕಲ್ಕಾ ಪಾರಂಪರಿಕ ರೈಲು ಹಳಿಗಳು ಮುಳುಗಿದ್ದು, ರೈಲ್ವೇ ಸಂಚಾರವನ್ನು ಸದ್ಯ ರದ್ದುಗೊಳಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಮಳೆಯ ಅವಾಂತರದಿಂದ ಎಚ್ಚೆತ್ತುಕೊಳ್ಳಲು ಜನರಿಗೆ ಈಗಾಗಲೇ ಸೂಚನೆ ನೀಡಿರುವ ಹವಾಮಾನ ಇಲಾಖೆ, ಹಿಮಾಚಲ ಪ್ರದೇಶದ ಏಳು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಭಾನುವಾರ ಕೂಡ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಹೆಚ್ಚಿದೆ ಎಂದು ಎಚ್ಚರಿಕೆ ನೀಡಿದೆ. ಕುಲು ಜಿಲ್ಲಾಡಳಿತವು ಶ್ರೀಖಂಡ್ ಮಹಾದೇವ್ ಯಾತ್ರೆಯನ್ನು ಜುಲೈ 11 ರವರೆಗೆ ಮುಂದೂಡಿದ್ದು, ಯಾತ್ರಾರ್ಥಿಗಳಿಗೆ ಮಳೆಯಲ್ಲಿ ಟ್ರೆಕ್ಕಿಂಗ್​ ಮಾಡದಂತೆ ಮನವಿ ಮಾಡಿದೆ,(ಏಜೆನ್ಸೀಸ್).

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts