ಮರವಂತೆಯಲ್ಲಿ ಪಾರ್ಕಿಂಗ್ ವ್ಯವಸ್ಥೆ : ಸಚಿವ ಎಚ್.ಕೆ ಪಾಟೀಲ್ ಭರವಸೆ

parking
Published on

ಗಂಗೊಳ್ಳಿ: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮರವಂತೆ ಬೀಚ್‌ನಲ್ಲಿ ಪಾಕಿರ್ಂಗ್ ವ್ಯವಸ್ಥೆ ಹಾಗೂ ಆಹಾರ ಮಳಿಗೆಗಳ ದುರಸ್ತಿಗೆ ಅಗತ್ಯ ಕ್ರಮ ವಹಿಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್. ಕೆ. ಪಾಟೀಲ್ ಹೇಳಿದ್ದಾರೆ.
ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆಯವರು ಮರವಂತೆ ಬೀಚ್‌ನಲ್ಲಿ ಸೂಕ್ತ ಪಾರ್ಕಿಂಗ್ ಸೌಲಭ್ಯ ಕುರಿತು ವಿಧಾನಸಭೆ ಅಧಿವೇಶನದಲ್ಲಿ ಕೇಳಿದ ಕಪ್ಪು ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಬೈಂದೂರು ತಾಲೂಕಿನ ತ್ರಾಸಿ-ಮರವಂತೆ ಬೀಚ್‌ನಲ್ಲಿ ಪ್ರವಾಸೋದ್ಯಮ ಇಲಾಖೆಯ ಜಮೀನಿನಲ್ಲಿ ಪಾಕಿರ್ಂಗ್ ವ್ಯವಸ್ಥೆ ಕಲ್ಪಿಸಲು ಹಾಗೂ ಆಹಾರ ಮಳಿಗೆಗಳ ದುರಸ್ತಿ ನಡೆಸಲು 39.50 ಲಕ್ಷ ರೂ. ಅಂದಾಜು ಪಟ್ಟಿ ಸಲ್ಲಿಸಿದ್ದು, ಅನುದಾನದ ಕೊರತೆಯಿಂದ 2023-24ನೇ ಸಾಲಿನಲ್ಲಿ ಕಾಮಗಾರಿಗಳನ್ನು ನಡೆಸಲು ಸಾಧ್ಯವಾಗಿಲ್ಲ. ಆಯವ್ಯಯದಲ್ಲಿ ಒದಗಿಸಲಾದ ಅನುದಾನದ ಅನುಗುಣವಾಗಿ ಕಾಮಗಾರಿ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net