More

    ಸಂತೆಗೆ ಬಂದವರಿಗೆ ವಾಹನ ನಿಲುಗಡೆ ಚಿಂತೆ

    ಲಕ್ಷ್ಮೇಶ್ವರ: ಪಟ್ಟಣದ ಮುಖ್ಯ ಬಜಾರ್ ರಸ್ತೆಯ ಅಪೂರ್ಣ ಕಾಮಗಾರಿ ಮತ್ತು ಟ್ರಾಫಿಕ್ ನಿರ್ವಹಣೆ ವಿಫಲತೆಯಿಂದಾಗಿ ಮುಖ್ಯ ಬಜಾರ್ ರಸ್ತೆಯಲ್ಲಿ ವಾಹನ ಸವಾರರು ಪರದಾಡುವಂತಾಗಿದೆ.
    ಅನೇಕ ವರ್ಷಗಳಿಂದ ಮುಖ್ಯ ಬಜಾರ್ ರಸ್ತೆಯಲ್ಲಿ ಟ್ರಾಫಿಕ್ ಕಿರಿಕಿರಿ ತಪ್ಪುತ್ತಿಲ್ಲ. ಒಳಚರಂಡಿ ಕಾಮಗಾರಿ, ಸಿಸಿ ರಸ್ತೆ ನಿರ್ಮಾಣ ಕೆಲಸದಿಂದ ಟ್ರಾಫಿಕ್ ಸಮಸ್ಯೆಯಾಗುತ್ತಿದೆ. ಅಧಿಕಾರಿಗಳು ಗಮನ ಹರಿಸದ ಕಾರಣ ಕಿರಿಕಿರಿ ತಪ್ಪುತ್ತಲೇ ಇಲ್ಲ. ವ್ಯಾಪಾರಸ್ಥರು, ಅಂಗಡಿಕಾರರು ರಸ್ತೆಯನ್ನು ಅತಿಕ್ರಮಿಸಿದ್ದಾರೆ. ಆಟೋ, ಗೂಡ್ಸ್ ವಾಹನಗಳಿಗೆ ನಿಯಂತ್ರಣವೇ ಇಲ್ಲ. ರಸ್ತೆ ಮಧ್ಯೆದಲ್ಲಿ ವಾಹನಗಳು ನಿಲುಗಡೆ ಮಾಡಲಾಗುತ್ತಿದೆ. ಈ ಕಾರ್ಯದಲ್ಲಿ ಪೊಲೀಸ್ ಇಲಾಖೆಯ ನಿರ್ಲಕ್ಷೃ ಎದ್ದು ಕಾಣುತ್ತಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
    ನಾಲ್ಕು ತಿಂಗಳ ಹಿಂದೆಯೇ ಮುಖ್ಯ ಬಜಾರ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿತ್ತು. 4 ತಿಂಗಳು ಕಳೆದರೂ 300 ಮೀಟರ್ ಸಿಸಿ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ. ಈ ಅವಧಿಲ್ಲಿ ಸಂಪರ್ಕ ರಸ್ತೆಗಳನ್ನು ಬಂದ್ ಮಾಡಿದ್ದರಿಂದ ಸಾಕಷ್ಟು ಸಮಸ್ಯೆ ಎದುರಾಯಿತು. ಈಗ ಸಿಸಿ ರಸ್ತೆ ಎರಡೂ ಬದಿಯಲ್ಲಿ ಪೇವರ್ಸ್ ಅಳವಡಿಕೆ ಕಾಮಗಾರಿ ಕೈಗೊಳ್ಳದ್ದರಿಂದ ವಾಹನ ಗಳನ್ನು ರಸ್ತೆಯಲ್ಲಿಯೇ ನಿಲ್ಲಿಸಬೇಕಾಗಿದೆ. ಇದರಿಂದ ನಿತ್ಯ ಕಿರಿಕಿರಿ ಉಂಟಾಗುತ್ತಿದೆ.
    ಚುನಾವಣೆ ಹಿನ್ನೆಲೆ ಬಾಕಿ ಇರುವ ರಸ್ತೆ ಕಾಮಗಾರಿಯನ್ನು ಪ್ರಾರಂಭಿಸಿಲ್ಲ. ಪಟ್ಟಣಕ್ಕೆ ನಿತ್ಯವೂ ನೆರೆಯ ತಾಲೂಕಿನ ಸಾವಿರಾರು ಜನರು ವ್ಯಾಪಾರ- ವಹಿವಾಟಿಗಾಗಿ ಬರುತ್ತಾರೆ. ಮುಖ್ಯ ಮಾರ್ಕೆಟ್ ಪ್ರದೇಶದಲ್ಲಿ ಹೆಚ್ಚು ಜನಸಂದಣಿ, ವಾಹನ ದಟ್ಟಣೆ ಇರುತ್ತದೆ. ಶುಕ್ರವಾರ, ಸೋಮವಾರ, ಅಮಾವಾಸ್ಯೆ ದಿನಗಳಲ್ಲೂ ಜನ ಕಿಕ್ಕಿರಿದು ತುಂಬಿರುತ್ತಾರೆ. ಈ ರಸ್ತೆಯಲ್ಲಿ ಸಂಚಾರ ಮಾಡುವುದು ಹರಸಾಹಸವಾಗುತ್ತದೆ. ಕಾಮಗಾರಿ ಬೇಗ ಪೂರ್ಣಗೊಳಿಸಬೇಕು. ನಂತರ ಪೊಲೀಸ್ ಮತ್ತು ಪುರಸಭೆಯವರು ಟ್ರಾಫಿಕ್ ನಿಯಂತ್ರಣ ಕ್ರಮ ಕೈಗೊಂಡು ಜನರಿಗೆ ಅನುಕೂಲ ಕಲ್ಪಿಸಬೇಕು ಎಂಬುದು ನಾಗರಿಕರ ಒತ್ತಾಯ.

    ಚುನಾವಣೆ ಕಾರಣ ಕಾಮಗಾರಿ ವಿಳಂಬವಾಗಿದೆ. ಉಳಿದ ಕೆಲಸ ವಾರದಲ್ಲಿ ಪ್ರಾರಂಭಿಸಲಾಗುವುದು. ಕಾಮಗಾರಿ ಪೂರ್ಣಗೊಂಡ ಬಳಿಕ ಪೊಲೀಸರ ಜತೆ ಚರ್ಚಿಸಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಅಲ್ಲಿಯವರೆಗೂ ಪಾದಗಟ್ಟಿ ಹತ್ತಿರ ಪೊಲೀಸ್ ಸಿಬ್ಬಂದಿ ನಿಯೋಜಿಸುವಂತೆ ಕೋರಲಾಗುವುದು.
    -ಶಂಕರ ಹುಲ್ಲಮ್ಮನವರ ಮುಖ್ಯಾಧಿಕಾರಿ ಲಕ್ಷ್ಮೇಶ್ವರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts