More

    ಡಿಸಿ ಕಚೇರಿ ಆವರಣದಲ್ಲಿ ಪಾರ್ಕಿಂಗ್ ಹಾವಳಿ

    ಬೆಳಗಾವಿ: ತಗ್ಗು-ಗುಂಡಿಗಳು ಬಿದ್ದ ರಸ್ತೆ ಹಾಗೂ ವಾಹನ ಪಾರ್ಕಿಂಗ್‌ಗೆ ಸೂಕ್ತ ವ್ಯವಸ್ಥೆ ಇಲ್ಲದೆ ಸಂಚಾರಕ್ಕೆ ಅಡೆತಡೆ ಉಂಟಾಗುತ್ತಿದ್ದ ಜಿಲ್ಲಾಧಿಕಾರಿ ಕಚೇರಿ ಆವರಣ ಈಗ ಶಿಸ್ತುಬದಟಛಿವಾಗಿದ್ದು, ಸೂಕ್ತ ಪಾರ್ಕಿಂಗ್ ವ್ಯವಸ್ಥೆಯೊಂದಿಗೆ ಗಮನ ಸೆಳೆಯುತ್ತಿದೆ. ಆದರೆ, ಕಚೇರಿ ಕೆಲಸಕ್ಕೆ ಬಾರದೆ ಅನ್ಯ ಕಾರ್ಯ ನಿಮಿತ್ತ ಬೆಳಗಾವಿಗೆ ಬಂದವರೂ ತಮ್ಮ ವಾಹನಗಳನ್ನು ಇಲ್ಲಿಯೇ ನಿಲ್ಲಿಸುತ್ತಿರುವುದು ಮತ್ತೊಂದು ಕಿರಿಕಿರಿಗೆ ಕಾರಣವಾಗಿದೆ. ಹಲವು ವರ್ಷಗಳಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೂಕ್ತ ಪಾರ್ಕಿಂಗ್ ವ್ಯವಸ್ಥೆ, ರಸ್ತೆ ಸೌಕರ್ಯವಿಲ್ಲದ ಕಾರಣ ಸಾರ್ವಜನಿಕರಿಗೆ ಕಿರಿಕಿರಿಯಾಗುತ್ತಿತ್ತು. ಈ ತೊಂದರೆ ನಿವಾರಿಸುವುದಕ್ಕೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಬಂದ ಮೇಲೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಮತ್ತು ಸುಸಜ್ಜಿತ ರಸ್ತೆ ನಿರ್ಮಾಣ ಮಾಡಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿದ್ದಾರೆ. ಈ ಮೊದಲು ಜಿಲ್ಲಾಧಿಕಾರಿ ಕಚೇರಿ ಆವರಣದ ರಸ್ತೆಗಳು ಹೆದಗೆಟ್ಟಿದ್ದವು. ಜತೆಗೆ ಜಿಲ್ಲಾಧಿಕಾರಿ ಕಚೇರಿಗೆ ಬರುವ ಸಾರ್ವಜನಿಕರಿಗೆ ವಾಹನ ಸಂಚಾರಕ್ಕಾಗಲಿ, ವಾಹನಗಳ ಪಾರ್ಕಿಂಗ್‌ಗೆ ಸರಿಯಾದ ವ್ಯವಸ್ಥೆ ಇರಲಿಲ್ಲ. ಹೀಗಾಗಿ ಬೇಕಾಬಿಟ್ಟಿ ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸಿ ಹೋಗುತ್ತಿದ್ದರಿಂದ ಜಿಲ್ಲಾಧಿಕಾರಿ ಕಚೇರಿ ಆವರಣ ಎದುರಿಗಿರುವ ಮುಖ್ಯ ರಸ್ತೆಯಲ್ಲಿ ಸಂಚಾರ ದಟ್ಟಣೆಯಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿತ್ತು.
    ಆವರಣ ಫುಲ್ ರಶ್:
    ಜಿಲ್ಲಾಧಿಕಾರಿ ಕಚೇರಿ ಆವರಣವು ರಸ್ತೆ, ಸಮರ್ಪಕ ಪಾರ್ಕಿಂಗ್ ವ್ಯವಸ್ಥೆಯಿಂದ ಹೈಟೆಕ್ ಎನೋ ಆಗಿದೆ. ಆದರೆ, ಡಿಸಿ ಕಚೇರಿ ಆವರಣದಲ್ಲಿ ಗೂಡಂಗಡಿಕಾರರು, ಸಣ್ಣ- ಪುಟ್ಟ ವ್ಯಾಪಾರಸ್ಥರು ತಮ್ಮ ವಾಹನಗಳನ್ನು ಪಾರ್ಕ್ ಮಾಡುತ್ತಿದ್ದಾರೆ. ಇದರಿಂದ ಜಿಲ್ಲಾಧಿಕಾರಿ ಕಚೇರಿಗೆ ಕೆಲಸ-ಕಾರ್ಯಗಳಿಗೆ ದಿನನಿತ್ಯ ಬರುವ ಸಾರ್ವಜನಿಕರಿಗೆ ವಾಹನ ಪಾರ್ಕಿಂಗ್‌ಗೆ ಸಮಸ್ಯೆಯಾಗುತ್ತಿದೆ. ಇನ್ನು ಬಹುತೇಕ ಜನರು ನಗರಕ್ಕೆ ಸಂತೆ ಮಾಡುವುದಕ್ಕೆ, ವ್ಯಾಪಾರ-ವಹಿವಾಟಿಗಾಗಿ ಬಂದು ಇದೇ ಆವರಣದಲ್ಲಿ ದಿನವಿಡಿ ತಮ್ಮ ವಾಹನಗಳನ್ನು ನಿಲ್ಲಿಸಿ ಹೋಗುತ್ತಿರುವುದು ಕಿರಿಕಿರಿಯಾಗುತ್ತಿದೆ. ಕಚೇರಿ ಕೆಲಸಕ್ಕೆ ಬಂದವರಿಗಷ್ಟೇ ಪಾರ್ಕಿಂಗ್ ಕಲ್ಪಿಸಿ: ಕೋಟ್ಯಂತರ ರೂಪಾಯಿ ವ್ಯಯಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪಾರ್ಕಿಂಗ್ ವ್ಯವಸ್ಥೆ, ಸುಸಜ್ಜಿತ ರಸ್ತೆ ನಿರ್ಮಿಸಲಾಗಿದೆ.
    ಇದರ ಉದ್ದೇಶ ಈಡೇರಬೇಕೆಂದರೆ ಕಚೇರಿ ಕೆಲಸಗಳಿಗೆ ಜಿಲ್ಲಾಧಿಕಾರಿ ಕಚೇರಿಗೆ ಬರುವ ಸಾರ್ವಜನಿಕರಿಗೆ ಈ ಸೌಲಭ್ಯ ಮುಟ್ಟಬೇಕು. ಕಚೇರಿ ಕೆಲಸ ಹೊರತುಪಡಿಸಿ ಬೇರೆ, ಬೇರೆ ಉದ್ದೇಶಕ್ಕೆ ಬರುವವರಿಗೆ ಇಲ್ಲಿ ಅವಕಾಶ ಕಲ್ಪಿಸಬಾರದು ಎಂಬುದು ನಾಗಕರಿಗೆ ಒತ್ತಾಯವಾಗಿದೆ. ಆವರಣದಲ್ಲಿ ವಾಹನ ಪಾರ್ಕಿಂಗ್‌ಗೆ ಶುಲ್ಕ ನಿಗದಿ ಮಾಡಬೇಕು ಎನ್ನುವ ಒತ್ತಾಯವೂ ಕೇಳಿಬಂದಿದೆ.
    ಜಿಲ್ಲಾಧಿಕಾರಿ ಪ್ರತಿಕ್ರಿಯೆ:
    ಜಿಲ್ಲಾಧಿಕಾರಿ ಕಚೇರಿಗೆ ಕೆಲಸ-ಕಾರ್ಯಗಳಿಗೆ ಬರುವ ಜನರ ವಾಹನಗಳ ಪಾರ್ಕಿಂಗ್‌ಗೆ ಜಾಗ ಸಿಗುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ. ನಗರಕ್ಕೆ ಕಚೇರಿ ಕೆಲಸ ಹೊರತುಪಡಿಸಿ ಬೇರೆ ಕಾರ್ಯಗಳಿಗೆ ಬರುವ ಜನರು ಡಿಸಿ ಕಚೇರಿಗೆ ಬಂದಿದ್ದೇನೆ ಎಂದು ಸುಳ್ಳು ಹೇಳುತ್ತಾರೆ. ಹೀಗಾಗಿ ಪಾರ್ಕಿಂಗ್‌ಗೆ ಶುಲ್ಕ ವಿಧಿಸಬೇಕಾ? ಅಥವಾ ಮೊದಲು ಕೆಲವು ಗಂಟೆಗಳು ಉಚಿತವಾಗಿ ಬಿಟ್ಟು ಆ ಮೇಲೆ ಶುಲ್ಕ ವಿಧಿಸಬೇಕಾ? ಎನ್ನುವ ಚರ್ಚೆ ನಡೆದಿದೆ. ಯಾವುದಕ್ಕೂ ಸಾರ್ವಜನಿಕರ ಅಭಿಪ್ರಾಯ ಪರಿಗಣಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಪ್ರತಿಕ್ರಿಯಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts