24.9 C
Bangalore
Wednesday, December 11, 2019

ಸದನದಲ್ಲಿ ಪ್ರತಿಧ್ವನಿಸಿದ “ದುರ್ಬಲ” ಹೇಳಿಕೆ: ಕ್ಷಮೆ ಕೋರಲು ಬಿಜೆಪಿ ಪಟ್ಟು, ಅಧೀರ್​ ರಂಜನ್​ ಚೌಧರಿಗೆ ತಿರುಗೇಟು ನೀಡಿದ ಸಂಸದೆ!

Latest News

ಬನುಮಯ್ಯ ಸಂಸ್ಥೆ ಶತಮಾನೋತ್ಸವಕ್ಕೆ ಚಾಲನೆ

ಮೈಸೂರು: ಧರ್ಮಪ್ರಕಾಶ ಡಿ.ಬನುಮಯ್ಯ ವಿದ್ಯಾಸಂಸ್ಥೆ ಶತಮಾನೋತ್ಸವ ಸಮಾರಂಭವನ್ನು ಶಾಸಕ ಎಸ್.ಎ.ರಾಮದಾಸ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು....

ಮೊದಲ ಪತ್ನಿ, ಮೂವರು ಮಕ್ಕಳನ್ನು ಮನೆಯಿಂದ ಹೊರದಬ್ಬಿದ ಪತಿ: ಚಳಿಯಲ್ಲೇ ಇಡೀ ರಾತ್ರಿ ಕಳೆದ ಪತ್ನಿ, ಮಕ್ಕಳು

ಬೆಳಗಾವಿ: ಮೊದಲ ಪತ್ನಿ ಹಾಗೂ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಮನೆಯಿಂದ ಹೊರಹಾಕಿರುವ ಅಮಾನವೀಯ ಘಟನೆ ಬೆಳಗಾವಿಯ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ, ಮೊದಲ...

ಚಿತ್ರದುರ್ಗ: ಆರ್ ಒಗಳ ನಿರ್ವಣೆ ಇನ್ನು ಮುಂದೆ ಇಲಾಖೆ ಹೊಣೆ

ಚಿತ್ರದುರ್ಗ: ಶುದ್ಧ ಕುಡಿವ ನೀರು ಘಟಕಗಳ ಹೊಣೆ ಇನ್ನು ಮುಂದೆ ಕುಡಿವ ನೀರು ‌ಮತ್ತು ನೈರ್ಮಲ್ಯ ಇಲಾಖೆಯದ್ದಾಗಿದೆ ಎಂದು ಜಿಪಂ ಸಿಇಒ ಸಿ.ಸತ್ಯಭಾಮ ಹೇಳಿದರು. ಜಿಪಂ ಮಾಸಿಕ...

ಪೌರತ್ವ ತಿದ್ದುಪಡಿ ಮಸೂದೆ ದೇಶದ ಈಶಾನ್ಯ ಭಾಗದ ಜನರ ಮೇಲಿನ ಕ್ರಿಮಿನಲ್​ ದಾಳಿ: ರಾಹುಲ್​ ಗಾಂಧಿ ಟೀಕೆ

ನವದೆಹಲಿ: ದೇಶಾದ್ಯಂತ ತೀವ್ರ ಚರ್ಚೆ ಹುಟ್ಟು ಹಾಕಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಟ್ವೀಟ್​ ಮೂಲಕ ಟೀಕಿಸಿದ್ದು, ದೇಶದ...

ಹುಣಸೂರು ಚುನಾವಣೆಯಲ್ಲಿ ತಟಸ್ಥನಾಗಿರುತ್ತೇನೆ ಎಂದು ಮೊದಲೇ ಘೋಷಿಸಿದ್ದೆ : ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಹುಣಸೂರು ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಚ್​.ವಿಶ್ವನಾಥ್​ ಅವರನ್ನು ಬೆಂಬಲಿಸುತ್ತೇನೆ ಎಂದು ನಾನು ಎಲ್ಲಿಯೂ ಹೇಳಿರಲಿಲ್ಲ ಎಂದು ಶಾಸಕ...

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರನ್ನು ದರ್ಬಲ ಸಚಿವೆಯಂತಲೂ, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್​ ಷಾ ಅವರನ್ನು ಗುಜರಾತ್​ ವಲಸಿಗರು ಎಂದು ಟೀಕಿಸಿದ್ದ ಕಾಂಗ್ರೆಸ್​ ಸಂಸದ ಅಧೀರ್​ ರಂಜನ್ ಚೌಧರಿ​ ಅವರು ತಮ್ಮ ಹೇಳಿಕೆ ಹಿಂಪಡೆದು ಕ್ಷಮೆಯಾಚಿಸುವಂತೆ ಬಿಜೆಪಿ ಒತ್ತಾಯಿಸಿದೆ.

ದೇಶದಲ್ಲಿ ಈರುಳ್ಳಿ ಬೆಲೆ ಗಗನಕ್ಕೇರಿರುವುದರಿಂದ ಸೋಮವಾರ ಸದನದಲ್ಲಿ ಮಾತನಾಡಿದ್ದ ಅಧೀರ್​ ರಂಜನ್ ವಿತ್ತ ಸಚಿವೆಯನ್ನು ದುರ್ಬಲ ಸಚಿವೆ ಎಂದು ಟೀಕಿಸಿದ್ದರು.​ ಇದೇ ವಿಚಾರವಾಗಿ ಲೋಕಸಭೆಯಲ್ಲಿ ಮಾತನಾಡಿದ ಬಿಜೆಪಿ ಸಂಸದೆ ಪೂನಮ್​ ಮಹಾಜನ್​, ಅಧೀರ್​ ರಂಜನ್ ಚೌಧರಿ​ ಅವರನ್ನು ದುರ್ಬಲ ಎಂದು ಪ್ರತಿದಾಳಿ ನಡೆಸಿದರು. ದೇಶಕ್ಕಾಗಲ್ಲದೇ ಒಂದು ನಿರ್ದಿಷ್ಟ ಕುಟುಂಬದ ಪರ ಚೌಧರಿ ಕೆಲಸ ಮಾಡುತ್ತಿದ್ದಾರೆ ಎಂದು ಮಹಾಜನ್​ ಕುಟುಕಿದರು. ಈ ವೇಳೆ ಸಾಕಷ್ಟು ಬಿಜೆಪಿ ಸಂಸದರು ಒಟ್ಟಾಗಿ ನಿಂತು ಚೌಧರಿಯನ್ನು ಕ್ಷಮೆಕೋರಲು ಒತ್ತಾಯಿಸಿದರು.

ಇದನ್ನು ಹೊರತುಪಡಿಸಿ ಸದನದಲ್ಲಿ ಮಾತನಾಡಿದ ಸಂಸದೆ ಹೇಮಾಮಾಲಿನಿ ಶಿಕ್ಷಣದಲ್ಲಿ ಸರ್ಕಾರಿ ಮತ್ತು ಖಾಸಗಿ ಪಾಲುದಾರಿಕೆಯ ಪ್ರಸ್ತಾವನೆಯನ್ನು ಮುಂದಿಟ್ಟರು. ನನ್ನ ಕ್ಷೇತ್ರದ ಬಹುತೇಕ ಸ್ಥಳಗಳಲ್ಲಿ ಮುಕ್ತವಾಗಿ ಶಾಲೆಗಳು ನಡೆಯುತ್ತಿವೆ. ಗ್ರಾಮದ ಮಕ್ಕಳು ಗುಣಮಟ್ಟದ ಶಿಕ್ಷಣವನ್ನು ಪಡೆಯಲಾಗುತ್ತಿಲ್ಲ. ಹೀಗಾಗಿ ಸರ್ಕಾರಿ ಮತ್ತು ಖಾಸಗಿ ಪಾಲುದಾರಿಕೆಯನ್ನು ತನ್ನಿ ಎಂದು ಒತ್ತಾಯಿಸಿದರು.

ಇದೇ ವೇಳೆ ಸದನದಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದಾದ ಬಳಿಕ ಕಣಿವೆ ನಾಡಿನಲ್ಲಿ ಉಗ್ರರ ಚಟುವಟಿಕೆ ಕಡಿಮೆಯಾಗಿರುವುದಾಗಿ ಕೇಂದ್ರ ಗೃಹ ಸಚಿವಾಲಯ ಮಾಹಿತಿ ನೀಡಿತು. ಆಗಸ್ಟ್​ 5, 2019ರಿಂದ ನವೆಂಬರ್​ 27ರವರೆಗೆ 88 ಪ್ರಕರಣಗಳು ಕಂಡುಬಂದಿವೆ. ಏಪ್ರಿಲ್​ 12, 2019 ರಿಂದ ಆಗಸ್ಟ್​ 4, 2019ರವರೆಗೆ 106 ಪ್ರಕರಣಗಳು ದಾಖಲಾಗಿದ್ದವು ಎಂದು ತಿಳಿಸಿತು. (ಏಜೆನ್ಸೀಸ್​)

Stay connected

278,741FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...