More

    ಸಂಸತ್​ ದಾಳಿ ಪ್ರಕರಣ; ಈ ಕೃತ್ಯದ ಮಾಸ್ಟರ್​ ಮೈಂಡ್ ಮೈಸೂರಿನ ಮನೋರಂಜನ್​​

    ನವದೆಹಲಿ: ಸಂಸತ್ತಿನ ಒಳಗೆ ಹೊಗೆ ಬಾಂಬ್ ಸಿಡಿಸಿ ದಾಳಿ ನಡೆಸಿದ ಪ್ರಕರಣದ ಆರೋಪಿಗಳನ್ನು ಮಂಪರು ಪರೀಕ್ಷೆ ಸೇರಿದಂತೆ ವಿವಿಧ ಪರೀಕ್ಷೆಗಳಿಗೆ ಒಳಪಡಿಸಿದ್ದು ಮೈಸೂರು ಮೂಲದ ಮನೋರಂಜನ್‌ ಸಂಚಿನ ಹಿಂದಿರುವ ಮಾಸ್ಟರ್ ಮೈಂಡ್‌ ಎಂಬುದಾಗಿ ತಿಳಿದುಬಂದಿದೆ.

    ಇದನ್ನೂ ಓದಿ:ವರದಕ್ಷಿಣೆ ಕಿರುಕುಳ; ಮಗಳು ಪ್ರಾಣ ಬಿಟ್ಟ ಬೆನ್ನೆಲ್ಲೇ ಅಳಿಯನ ಪ್ರಾಣ ತೆಗೆದರು

    ಡಿಸೆಂಬರ್ 13 ರಂದು ನಡೆದಿರುವ ಈ ಕೃತ್ಯದ ಈ ಹಿಂದೆ ಆರೋ‍ಪಿ ಲಲಿತ್ ಝಾನನ್ನು ಕೃತ್ಯದ ಮಾಸ್ಟರ್ ಮೈಂಡ್ ಎಂದು ಹೇಳಲಾಗಿತ್ತು.

    ಮೈಸೂರಿನ ಡಿ. ಮನೋರಂಜನ್, ನಾಲ್ವರು ಆರೋಪಿಗಳಾದ ಸಾಗರ್ ಶರ್ಮಾ, ಅಮೋಲ್ ಶಿಂಧೆ, ಲಲಿತ್ ಝಾ ಮತ್ತು ಮಹೇಶ್ ಕುಮಾವತ್ ಅವರಿಗೆ ಗುಜರಾತ್‌ ಗಾಂಧಿನಗರದ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡಲಾಗಿದೆ. ಮೈಸೂರು ಮೂಲದ ಮನೋರಂಜನ್ ಮತ್ತು ಸಾಗರ್‌ನನ್ನು ಹೆಚ್ಚುವರಿ ಬ್ರೈನ್‌ ಮ್ಯಾಪಿಂಗ್ ಮತ್ತು ಮಂಪರು ಪರೀಕ್ಷೆಗೆ ಒಳಪಡಿಸಲಾಗಿತ್ತು ಎಂದು ಪೊಲೀಸ್‌ ಅಧಿಕಾರಿಗಳು ಹೇಳಿದರು.

    ಡಿ.13 ರಂದು ಸಾಗರ್ ಶರ್ಮಾ ಮತ್ತು ಮನೋರಂಜನ್ ಸಂಸತ್‌ನ ಒಳಗೆ ಹಳದಿ ಸ್ಮೋಕ್ ಬಾಂಬ್ ಸಿಡಿಸಿದರೆ ಸಂಸತ್ತಿನ ಹೊರಗೆ ನೀಲಂ ಮತ್ತು ಅಮೋಲ್ ಶಿಂಧೆ ಕೆಂಪು ಮತ್ತು ಹಳದಿ ಸ್ಮೋಕ್ ಬಾಂಬ್ ಸಿಡಿಸಿದ್ದರು. ಇನ್ನಿಬ್ಬರು ಆರೋಪಿಗಳಾದ ವಿಶಾಲ್ ಮತ್ತು ಲಲಿತ್ ಝಾ ಗುರ್ಗಾಂವ್ ಮೂಲದವರು. ಲಲಿತ್ ಝಾ ತಮ್ಮ ಮೊಬೈಲ್‌ನಲ್ಲಿ ಘಟನೆಯ ದೃಶ್ಯಾವಳಿಗಳನ್ನು ಸೆರೆಹಿಡಿದು ಮೊಬೈಲ್ ಜೊತೆಗೆ ಅಲ್ಲಿಂದ ಪರಾರಿಯಾಗಿದ್ದ. ಮನೋರಂಜನ್, ಇತರರು ಸಂಸತ್ತಿನ ಒಳಗೆ ಹಾಗೂ ಹೊರಗೆ ಹೊಗೆಬಾಂಬ್ ಸಿಡಿಸಿ, ನಿರುದ್ಯೋಗ ಸಮಸ್ಯೆ, ಸರ್ವಾಧಿಕಾರತ್ವಕ್ಕೆ ಬೇಸತ್ತು ಹೀಗೆ ಮಾಡಿದ್ದಾಗಿ ಹೇಳಿದ್ದರು.

    ಸಂಸತ್‌ ಮೇಲೆ ದಾಳಿ ನಡೆಸಲು ವರ್ಷದ ಹಿಂದೆಯೇ ಮಾಸ್ಟರ್‌ ಪ್ಲಾನ್‌ ನಡೆದಿತ್ತು. ಸರ್ಕಾರದ ವಿರುದ್ಧ ಏನಾದರೂ ದೊಡ್ಡದು ಮಾಡಿ ಎಲ್ಲರ ಗಮನ ಸೆಳೆಯುವ ಕೆಲಸ ಮಾಡಬೇಕು ಎಂದು ಮೈಸೂರಿನಲ್ಲಿಯೇ ಮನೋರಂಜನ್‌ ಯೋಜನೆ ರೂಪಿಸಿದ್ದ ಎಂದು ಪೊಲೀಸ್‌ ಮೂಲಗಳು ತಿಳಿಸಿದ್ದವು.

    ಈ ಖ್ಯಾತ ನಟಿಯನ್ನು ಪ್ರೀತಿಸಿ ಮದ್ವೆಯಾಗಲು ಬಯಸಿದ್ರು ರಜಿನಿ! ಕೈ ಕೊಟ್ಟ ಕರೆಂಟ್​​ನಿಂದ ಲವ್​ ಫೇಲ್ಯೂರ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts