ವಿವಿಧ ಕಾಮಗಾರಿಗಳಿಗೆ ಸಂಸದ ಭೂಮಿಪೂಜೆ

ಮೈಸೂರು: ನಗರದ ವಿವಿಧೆಡೆ ಕೇಂದ್ರ ಸರ್ಕಾರದ ಅನುದಾನದಡಿಯಲ್ಲಿ ಹಮ್ಮಿಕೊಂಡಿರುವ ಕಾಮಗಾರಿಗಳಿಗೆ ಸಂಸದ ಪ್ರತಾಪ್ ಸಿಂಹ ಭೂಮಿ ಪೂಜೆ ನೆರವೇರಿಸಿದರು.

ನಗರದ ವಾರ್ಡ್ ನಂ 28ರ ವ್ಯಾಪ್ತಿಯ ಗಾಂಧಿನಗರದಲ್ಲಿ ಕೇಂದ್ರ ಸರ್ಕಾರದ 10 ಲಕ್ಷ ರೂ. ಅನುದಾನದಲ್ಲಿ ನಿರ್ಮಿಸಲಿರುವ ಹೊಸಗರಡಿ ಹಾಗೂ ಶ್ರೀಮನೆ ಮಂಚಮ್ಮ ಅಂಬೇಡ್ಕರ್ ಸಮುದಾಯ ಭವನದ ಕಾಮಗಾರಿಗೆ ಪ್ರತಾಪ್‌ಸಿಂಹ ಭೂಮಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ನಾನು ಸಂಸದನಾಗಿ ಪಾಸ್‌ಪೋರ್ಟ್ ಸೇವಾ ಕೇಂದ್ರ, ಮಂಡಕಳ್ಳಿ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟಕ್ಕೆ ಚಾಲನೆ ನೀಡಿದ್ದು ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ನಗರದ ಅಭಿವೃದ್ಧಿಗೆ ಮುಂದಿನ ದಿನಗಳಲ್ಲೂ ಪ್ರಾಮಾಣಿಕವಾಗಿ ಶ್ರಮಿಸಲಿದ್ದೇನೆ ಎಂದರು.
ಈ ವೇಳೆ ಉರಿಲಿಂಗಿಪೆದ್ದಿ ಮಠದ ಸ್ವಾಮೀಜಿ ಶ್ರೀಜ್ಞಾನಪ್ರಕಾಶ ಸ್ವಾಮೀಜಿ, ಪಾಲಿಕೆ ಸದಸ್ಯೆ ಡಾ.ಅಶ್ವಿನಿ ಇತರರು ಇದ್ದರು.

ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅನುದಾನದಡಿ ವಾರ್ಡ್ ನಂ.58 ರಾಮಕೃಷ್ಣನಗರದ ಶ್ರೀ ರಾಮಕೃಷ್ಣ ಪರಮಹಂಸ ವೃತ್ತದ ಬಳಿ 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸುವ ಶುದ್ಧ ಕುಡಿಯುವ ನೀರಿನ ಘಟಕ ಕಾಮಗಾರಿಗೆ ಭೂಮಿಪೂಜೆ ಮಾಡಿದರು. ಪಾಲಿಕೆ ಸದಸ್ಯ ಶರತ್‌ಕುಮಾರ್ ಸೇರಿದಂತೆ ಇತರರು ಇದ್ದರು.

Leave a Reply

Your email address will not be published. Required fields are marked *