More

    ಸಂಸತ್ ಭದ್ರತೆ ಉಲ್ಲಂಘನೆ ಪ್ರಕರಣ: ಬಂಧಿತ 6ನೇ ಆರೋಪಿ ಮಹೇಶ್ ಕುಮಾವತ್ ಯಾರು?

    ನವದೆಹಲಿ: ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದ ಆರನೇ ಆರೋಪಿ ಮಹೇಶ್ ಕುಮಾವತ್ ಎಂಬಾತನನನ್ನು ದೆಹಲಿ ಪೊಲೀಸರು ಶನಿವಾರ ಅವರನ್ನು ಬಂಧಿಸಿದ್ದಾರೆ. ಈ ಪಿತೂರಿಯಲ್ಲಿ ಈತನ ಪಾತ್ರ ಇರುವುದನ್ನು ಅಧಿಕಾರಿಗಳು ಖಚಿತಪಡಿಸಿದ ನಂತರ ಒಂದು ಗಂಟೆಗಳ ಕಾಲ ವಿಚಾರಣೆ ನಡೆಸಿದ ಬಳಿಕ ಬಂಧನ ಮಾಡಲಾಗಿದೆ.

    ರಾಜಸ್ಥಾನದ ನಗೌರ್ ಜಿಲ್ಲೆಯ ನಿವಾಸಿ ಮಹೇಶ್, ಸಾಗರ್ ಶರ್ಮಾ ಮತ್ತು ಮನೋರಂಜನ್ ಡಿ. ಎಂಬುವರು
    ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆಯ ಚೇಂಬರ್‌ಗೆ ಜಿಗಿದು ಹೊಗೆ ಹರಡಿದ ಘಟನೆ ನಡೆದ ದಿನದಂದೇ ಡಿಸೆಂಬರ್ 13 ರಂದು ಈತ ದೆಹಲಿಗೆ ಬಂದಿದ್ದ.

    ಘಟನೆಯ ನಂತರ ಪ್ರಮುಖ ಸಂಚುಕೋರ ಲಲಿತ್ ಝಾ ದೆಹಲಿಯಿಂದ ಪರಾರಿಯಾಗಿ ರಾಜಸ್ಥಾನದಲ್ಲಿನ ಮಹೇಶನ ಅಡಗುತಾಣದಲ್ಲೇ ಅಡಗಿಕೊಂಡಿದ್ದ. ಆರಂಭದಲ್ಲಿ ಬಂಧಿಸಲಾದ ನಾಲ್ವರು ಆರೋಪಿಗಳ ಮೊಬೈಲ್ ಫೋನ್‌ಗಳನ್ನು ನಾಶಪಡಿಸುವಲ್ಲಿ ಮಹೇಶ್ ಕೂಡ ಲಲಿತ್ ಜೊತೆ ಸೇರಿಕೊಂಡಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    ಈ ಪ್ರಕರಣದಲ್ಲಿ ಬಂಧಿತ ನೀಲಮ್ ದೇವಿ ಜತೆ ಮಹೇಶ ನಿರಂತರ ಸಂಪರ್ಕದಲ್ಲಿದ್ದ, ಈ ಗುಂಪಿನ ಸದಸ್ಯರು ಲೋಕಸಭೆಗೆ ಪ್ರವೇಶಿಸಿದ ಸಂದರ್ಭದಲ್ಲಿ ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಿದ ಈಕೆಯನ್ನು ಹಾಗೂ ಅಮೋಲ್ ಶಿಂಧೆಯನ್ನು ಬಂಧಿಸಲಾಗಿದೆ.

    ಲಲಿತ್ ಮತ್ತು ಮಹೇಶ್ ಇಬ್ಬರೂ ಗುರುವಾರ ನವದೆಹಲಿ ಪ್ರದೇಶದ ಪೊಲೀಸ್ ಠಾಣೆಯಲ್ಲಿ ಒಟ್ಟಿಗೆ ಶರಣಾಗಿದ್ದರು. ಲಲಿತ್ ಬಂಧನವನ್ನು ಶುಕ್ರವಾರ ದಾಖಲಿಸಲಾಗಿದೆ. ಮಹೇಶನ ಸೋದರ ಸಂಬಂಧಿ ಕೈಲಾಶ್ ಎಂಬಾತನನ್ನೂ ವಿಚಾರಣೆಗೆ ಒಳಪಡಿಸಲಾಗಿದ್ದು, ಪೊಲೀಸರು ಇದುವರೆಗೆ ಈತನನ್ನು ಬಂಧಿಸಿಲ್ಲ.

    ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ: ಭಕ್ತರಿಗೆ ಸಿಹಿ ಸುದ್ದಿ ನೀಡಿದೆ ರೈಲ್ವೆ ಇಲಾಖೆ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts